ಬೆಂಗಳೂರಿಗೆ ₹1,000 ಕೋಟಿ ಅನುದಾನ ತಕ್ಷಣವೇ ಬಿಡುಗಡೆಗೆ ಆಗ್ರಹ
ಬೆಂಗಳೂರು, ಮೇ 28: ರಾಜ್ಯ ರಾಜಧಾನಿ ಬೆಂಗಳೂರು ಒಂದೇ ಒಂದು ಮಳೆಗೆ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ರಸ್ತೆಗಳು ಗುಂಡಿ ಬಿದ್ದು, ಜನರ ಬಲಿಗೆ ಕಾಯುತ್ತಿವೆ. ತಗ್ಗು ಪ್ರದೇಶ್, ದೊಡ್ಡ ದೊಡ್ಡ ಅಪಾರ್ಟ್‌ಮೆಂಟ್ ಗಳಲ್ಲಿ ಮಳೆ ನೀರು ನುಗ್ಗಿ ತೊಂದರೆ ಉಂಟಾಗಿದೆ. ಈ ಸಂಬಂಧ ಅಗತ್ಯ ಎಚ್ಚರಿಕೆ ವಹಿಸುವಂತೆ ರಾಜ್ಯ ಬಿಜೆಪಿ ಒತ್ತಾಯಿಸಿದೆ.
ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ಕೂಡಲೇ 1,000 ಕೋಟಿ ರೂ. ಹಣ ಬಿಡುಗಡೆ ಮಾಡಬೇಕು. ಮಳೆ ಬರುವ ಮುನ್ನವೇ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಅಗತ್ಯ ಕಾಮಗಾರಿಗಳನ್ನು ನಡೆಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.

ಸಿಲಿಕಾನ್ ಸಿಟಿ ಬೆಂಗಳೂರಿನ ಅಭಿವೃದ್ಧಿಗೆ ನಿರ್ಲಕ್ಷ್ಯ ತೋರುತ್ತಿರುವ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಜೆಪಿ ವತಿಯಿಂದ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆ ವೇಳೆ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಕಡೆಗಣಿಸಿದೆ. ರಸ್ತೆಗಳಲ್ಲಿ ಗುಂಡಿ, ಕಸದ ರಾಶಿ ಎಲ್ಲೆಡೆ ಕಾಣುತ್ತಿದೆ. ಪೌರ ಕಾರ್ಮಿಕರಿಗೆ ಹಾಗೂ ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ. ರಾಜಧಾನಿಯಲ್ಲಿ ಒಂದೇ ಒಂದು ರೂಪಾಯಿ ಕಾಮಗಾರಿ ನಡೆದಿಲ್ಲ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಗರ ವೀಕ್ಷಣೆ ಮಾಡಿದ್ದಾರೆಯೇ ಹೊರತು, ಅಭಿವೃದ್ಧಿಗೆ ಹಣ ನೀಡಿಲ್ಲ ಎಂದು ದೂರಿದರು.
ಬೆಂಗಳೂರಿನ ಜನರು ಈಗ ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಹೇಳುತ್ತಿದ್ದಾರೆ. ಬೆಂಗಳೂರು ಜನರು ಅತ್ಯಧಿಕ ತೆರಿಗೆ ಪಾವತಿಸುತ್ತಿದ್ದಾರೆ. ರಾಜ್ಯದ ಒಟ್ಟು ತೆರಿಗೆಯಲ್ಲಿ ಅತಿ ಹೆಚ್ಚು ಪಾಲು ಬೆಂಗಳೂರಿಂದ ಬರುತ್ತದೆ. ಬ್ರ್ಯಾಂಡ್ ಬೆಂಗಳೂರು ಎಂದು ಹೇಳಿ ಕಾಂಗ್ರೆಸ್ ಸರ್ಕಾರ ಬ್ಯಾಡ್ ಬೆಂಗಳೂರು, ಕ್ರೈ ಬೆಂಗಳೂರು ಹಾಗೂ ಕಸದ ರಾಶಿಯ ಬೆಂಗಳೂರನ್ನು ನೀಡಿದೆ.

ಮಳೆಗಾಲ ಆರಂಭವಾಗುವ ಮುನ್ನವೇ ಸರ್ಕಾರ ಎಚ್ಚೆತ್ತು 1 ಸಾವಿರ ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿ ಏನೂ ಅನಾಹುತವಾಗದಂತೆ ಕ್ರಮ ವಹಿಸಬೇಕೆಂದು ಆಗ್ರಹಿಸಿ ಹೋರಾಟ ಮಾಡಲಾಗಿದೆ ಎಂದು ತಿಳಿಸಿದರು.
ಅಧಿಕಾರಿ ಸಾವಿಗೆ ಸರ್ಕಾರ ಕಾರಣ
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಸಚಿವರೇ ಕಾರಣರಾಗಿದ್ದಾರೆ. ಲಂಚ ತೆಗೆದುಕೊಂಡಿದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಇಲ್ಲಿ 187 ಕೋಟಿ ರೂ. ಹಗರಣ ನಡೆದಿದ್ದು, ಇದಕ್ಕೆ ಯಾರೆಲ್ಲ ಕಾರಣವೆಂದು ಅಧಿಕಾರಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಇದರಲ್ಲಿ ಕೇವಲ ಸಚಿವರಲ್ಲದೆ, ಮುಖ್ಯಮಂತ್ರಿ ಹಾಗೂ ಇಡೀ ಸಂಪುಟದವರೇ ಲೂಟಿ ಮಾಡಿದ್ದಾರೆ. ಇದಕ್ಕೆ ನೇರವಾಗಿ ಸರ್ಕಾರವೇ ಕಾರಣ. 187 ಕೋಟಿ ಲೂಟಿ ಹೊಡೆದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಹಿಂದೆ ಕೆ.ಎಸ್.ಈಶ್ವರಪ್ಪನವರ ರಾಜೀನಾಮೆ ಕೇಳಿದ ಕಾಂಗ್ರೆಸ್ ಸಚಿವರು ಹಾಗೂ ಮುಖ್ಯಮಂತ್ರಿ ರಾಜೀನಾಮೆ ಕೊಡಲಿ. ಇದರ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಲಿದೆ ಎಂದು ಅವರು ಎಚ್ಚರಿಸಿದರು.
-
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ











Click it and Unblock the Notifications