'ಆ ಆಪರೇಷನ್ನಿನ ಸರ್ಜನ್ ನೀವೇ ಅಲ್ಲವೇ?' ಸಿದ್ದುಗೆ ಬಿಜೆಪಿ ಪ್ರಶ್ನೆ
ಬೆಂಗಳೂರು, ನವೆಂಬರ್ 12: ಆಪರೇಷನ್ ಮಾಡುವುದರಲ್ಲಿ ಮುಖ್ಯಮಂತ್ರಿ ಬಿ.ಸ್.ಯಡಿಯೂರಪ್ಪ ಅವರೇ ಸ್ಪೆಷಲಿಸ್ಟ್ ಎಂದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ.
"ಮೌಲ್ಯಾಧಾರಿತ ರಾಜಕಾರಣದ ಬಗ್ಗೆ ಪಾಠ ಹೇಳುವ ಸಿದ್ದರಾಮಯ್ಯ ನವರೇ, ನಿಮ್ಮ ಇತಿಹಾಸದ ಪುಟ ತಿರುಗಿಸಿ ನೋಡಿ. ಅಂದು ಸೋಲಿನ ಭೀತಿಯಿಂದ ರಾಮನಗರ ಬಿಜೆಪಿ ಅಭ್ಯರ್ಥಿಯನ್ನೇ ಹೈಜಾಕ್ ಮಾಡಿದಾಗ ನಿಮ್ಮ ಮೌಲ್ಯಾಧಾರಿತ ರಾಜಕಾರಣ, ನೈತಿಕತೆ ಎಲ್ಲಿ ಸತ್ತು ಹೋಗಿತ್ತು?
ಆ ಅಪರೇಶನ್ನಿನ ಸರ್ಜರಿ ಮಾಡಿದ ಸರ್ಜನ್ ತಾವೇ ಆಗಿರಲಿಲ್ಲವೇ?" ಎಂದು ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ಈ ಕುರಿತು ಟ್ವೀಟ್ ಮಾಡಿದ ಬಿಜೆಪಿ ಕರ್ನಾಟಕ, "ನಾವಾಗಿಯೇ ಹಣ, ಅಧಿಕಾರದ ಆಮಿಷ ಒಡ್ಡಿ ಬೇರೆ ಪಕ್ಷದವರನ್ನು ನಮ್ಮ ಪಕ್ಷಕ್ಕೆ ಕರೆತಂದರೆ ಅದು ಆಪರೇಷನ್ ಆಗುತ್ತದೆ. ಆದರೆ ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿ ಅವರಾಗಿಯೇ ಬಂದರೆ ಅದು ಆಪರೇಷನ್ ಹೇಗಾಗುತ್ತದೆ? ಈ ಆಪರೇಷನ್, ಸರ್ಜರಿ ಇದರಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೇ ಸ್ಪೆಷಲಿಸ್ಟ್. ನಾನು ಡಾಕ್ಟರೂ ಅಲ್ಲ, ನನಗೆ ಯಾವ ರೋಗಿಗಳು ಗೊತ್ತಿಲ್ಲ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.












Click it and Unblock the Notifications