ಉಪಮುಖ್ಯಮಂತ್ರಿ ಪರಮೇಶ್ವರ್ ವಿರುದ್ಧ ದೂರು ನೀಡಲು ಬಿಜೆಪಿ ಸಜ್ಜು
ಬೆಂಗಳೂರು, ಅಕ್ಟೋಬರ್ 23: ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಮೇಲೆ ಚುನಾವಣಾ ಆಯೋಗಕ್ಕೆ ದೂರು ನೀಡಲು ಬಿಜೆಪಿ ರೆಡಿಯಾಗಿದೆ.
ಪರಮೇಶ್ವರ್ ಅವರು ಇಂದು ಜಮಖಂಡಿಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ, ಪ್ರಚಾರ ಭಾಷಣ ಮಾಡುವ ವೇಳೆ. ನಮ್ಮ ಅಭ್ಯರ್ಥಿಗೆ ಮತ ಹಾಕಿ ನಿಮ್ಮ ಊರಿಗೆ ಟಾರು ಹಾಕಿಸುತ್ತೇನೆ ಎಂಬರ್ಥದ ಮಾತುಗಳನ್ನು ಹೇಳಿದ್ದರು.

ಈ ರೀತಿ ಹೇಳುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ. ಮತದಾರರಿಗೆ ಬೆದರಿಕೆ ಹಾಕಿ ಅಥವಾ ಮತ ಹಾಕದಿದ್ದರೆ ಅಭಿವೃದ್ಧಿ ಮಾಡುವುದಿಲ್ಲ ಎಂದು ಭರವಸೆ ಸಹ ನೀಡುವಂತಿಲ್ಲ.
ಈ ಬಗ್ಗೆ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಲು ಸಜ್ಜಾಗಿದೆ ಎಂದು ಬಿಜೆಪಿ ವಕ್ತಾರ ಗೋ.ಮಧುಸೂಧನ್ ಅವರು ತಿಳಿಸಿದ್ದಾರೆ.
ಉಪಚುನಾವಣೆಯಲ್ಲಿ ಬಿಜೆಪಿ ಪ್ರಚಾರ ಮಂಕಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಬಿಜೆಪಿ ಉತ್ತಮವಾಗಿಯೇ ಪ್ರಚಾರ ಮಾಡುತ್ತಿದ್ದಾರೆ. ಕಾರ್ಯಕರ್ತರು ಮನೆ-ಮನೆ ಪ್ರಚಾರ ಮಾಡುತ್ತಿದ್ದಾರೆ ಎಂದರು.
ಎಲ್ಲ ಕ್ಷೇತ್ರಗಳಿಗೆ ಚುನಾವಣಾ ಉಸ್ತುವಾರಿಗಳನ್ನು ನೇಮಿಸಲಾಗಿದ್ದು, ಆಯಾ ಕ್ಷೇತ್ರದ ಉಸ್ತುವಾರಿಗಳು ಆಯಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯನೋಡಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.












Click it and Unblock the Notifications