ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

15 ಕ್ಷೇತ್ರಗಳ ಉಪಚುನಾವಣೆ: ಬಿಜೆಪಿಯಿಂದ 40 ಸ್ಟಾರ್ ಪ್ರಚಾರಕರು

|
Google Oneindia Kannada News

ಬೆಂಗಳೂರು, ನವೆಂಬರ್ 17: ಹದಿನೈದು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.

ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಅನಂತ್ ಕುಮಾರ್ ಹೆಗಡೆ, ತೇಜಸ್ವಿ ಸೂರ್ಯ, ಮಾಳವಿಕಾ ಅವಿನಾಶ್ ಹೆಸರನ್ನು ಕೈಬಿಡಲಾಗಿದೆ.

ಉಪ ಚುನಾವಣೆ: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಉಪ ಚುನಾವಣೆ: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ

ಉಪ ಚುನಾವಣೆಗೆ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನಂಬರ್ 1 ಸ್ಟಾರ್ ಪ್ರಚಾರಕ, ಮುಖ್ಯಮಂತ್ರಿ ಬಿ.ಎಸ್, ಯಡಿಯೂರಪ್ಪ ಸ್ಟಾರ್ ಪ್ರಚಾರಕರಲ್ಲಿ ಎರಡನೇ ಸ್ಥಾನ, ಕೇಂದ್ರ ಸಚಿವ ಡಿವಿ ಸದಾನಂದ ಗೌಡ ನಂಬರ್ 3 ಸ್ಟಾರ್ ಪ್ರಚಾರಕರಾಗಿದ್ದಾರೆ. ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಂಬರ್ 4, ಬಿ.ಎಲ್. ಸಂತೋಷ್ ನಂಬರ್ 5 ನೇ ಸ್ಟಾರ್ ಕ್ಯಾಂಪೈನರ್ ಆಗಿದ್ದಾರೆ.

BJP Released List Of 40 Star Campaigners For Karnataka By Elections

ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ 3 ಕೇಂದ್ರ ಸಚಿವರು, 3 ಡಿಸಿಎಂಗಳು, 12 ಸಚಿವರು, 5 ಸಂಸದರು, 5 ಶಾಸಕರಿಗೆ ಸ್ಟಾರ್ ಕ್ಯಾಂಪೇನರ್ ಸ್ಥಾನ ನೀಡಲಾಗಿದರಾಜ್ಯ ಉಸ್ತುವಾರಿ ಮುರಳೀಧರ ರಾವ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಸಚಿವ ಜಗದೀಶ್ ಶೆಟ್ಟರ್ ಸ್ಟಾರ್ ಕ್ಯಾಂಪೇನರ್ ಆಗಿದ್ದಾರೆ.

ಡಿಸಿಎಂಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಡಾ. ಅಶ್ವಥ್ ನಾರಾಯಣ ಸೇರಿದಂತೆ ಸಚಿವರು, ಸಂಸದರಿಗೆ ಸ್ಟಾರ್ ಕ್ಯಾಂಪೇನರ್ ಸ್ಥಾನ ನೀಡಲಾಗಿದೆ.

ಉಪಚುನಾವಣೆಗೆ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮಾಜಿ ಸಿಎಂ ಎಸ್‌. ಎಂ. ಕೃಷ್ಣ, ಸಂಸದ ಅನಂತ ಕುಮಾರ್ ಹೆಗಡೆ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸ್ಥಾನ ನೀಡಲಿಲ್ಲ.

English summary
BJP State president Nalin Kumar Kateel Released 40 Star Campaigner List For up coming Karnataka By Elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X