ಕಳೆದ ಚುನಾವಣೆಗಿಂತಲೂ ಹೆಚ್ಚಿನ ಮತ ಗಳಿಸಿದ್ದೇವೆ:ಪ್ರಹ್ಲಾದ್ ಜೋಷಿ
ಬೆಂಗಳೂರು, ಡಿಸೆಂಬರ್ 18: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ರಾಜ್ಯದ ಬಿಜೆಪಿ ನಾಯಕರು ಗರಿಗೆದರಿಕೊಂಡಿದ್ದಾರೆ.
ಯಡಿಯೂರಪ್ಪ, ಪ್ರತಾಪ್ ಸಿಂಹ, ಪ್ರಹ್ಲಾದ್ ಜೋಷಿ, ರಾಮದಾಸ್ ಮತ್ತಿತರೆ ನಾಯಕರು ಗುಜರಾತ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಬಿಜೆಪಿ ಸಾಧಿಸಿರುವ ಮುನ್ನಡೆಗೆ ಸಂತೋಷ ವ್ಯಕ್ತಪಡಿಸಿದ್ದು, ಕರ್ನಾಟಕದಲ್ಲೂ ಇದೇ ಫಲಿತಾಂಶ ಪ್ರತಿಫಲನವಾಗಲಿದೆ ಎಂದಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ ಗುಜರಾತ್ನಲ್ಲಿ ಬಿಜೆಪಿ ವಿರುದ್ಧ ಜಾತಿಗಳನ್ನು ಎತ್ತಿ ಕಟ್ಟಿದ್ದರೂ ಕೂಡ ಜನ ಅಭಿವೃದ್ಧಿಗೇ ಮತ ಹಾಕಿದ್ದಾರೆ ಎಂದಿದ್ದಾರೆ.
ಕಳೆದ ಚುನಾವಣೆಗೆ ಹೋಲಿಸಿದಲ್ಲಿ ಬಿಜೆಪಿ ಕಡಿಮೆ ಸ್ಥಾನ ಪಡೆದಿರುವ ಬಗ್ಗೆ ಮಾತನಾಡಿದ ಅವರು ಸಂಪೂರ್ಣ ಫಲಿತಾಂಶ ಬರುವ ಬಗ್ಗೆ ಈ ಬಗ್ಗೆ ಹೇಳಲು ಸಾಧ್ಯವಿಲ್ಲ ಆದರೆ ಈಗ ಬಂದಿರುವ ವರದಿಗಳ ಪ್ರಕಾರ ಬಿಜೆಪಿ ಗಳಿಸಿರುವ ಒಟ್ಟಾರೆ ಮತಗಳ ಸಂಖ್ಯೆ ಕಳೆದ ಬಾರಿಗಿಂತ ಹೆಚ್ಚಿದೆ ಹಾಗಾಗಿ ಬಿಜೆಪಿ ಜನಪ್ರಿಯತೆ ಕುಂದಿದೆ ಎಂದು ವಾದ ಮಾಡುವಂತೆಯೇ ಇಲ್ಲ ಎಂದು ಅವರು ಹೇಳಿದ್ದಾರೆ.
ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, 'ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಜನ ಮೆಚ್ಚಿದ್ದಾರೆ ಎಂಬುದಕ್ಕೆ ಗುಜರಾತ್-ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಸಾಧಿಸಿರುವ ಮುನ್ನಡೆಯೇ ಸಾಕ್ಷಿ. ಕರ್ನಾಟಕದಲ್ಲಿಯೂ ಬಿಜೆಪಿ 150 ಸ್ಥಾನಗಳಲ್ಲಿ ಜಯಗಳಿಸಲಿದೆ. ನಾಳೆಯಿಂದ ಕಾಂಗ್ರೆಸ್, ಜೆಡಿಎಸ್ನ ರಾಜ್ಯ, ತಾಲೂಕು, ಜಿಲ್ಲಾ ಮಟ್ಟದ ನಾಯಕರು ಬಿಜೆಪಿ ಕಡೆಗೆ ಆಗಮಿಸಲಿದ್ದಾರೆ ಎಂದು ಹೇಳಿದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications