Get Updates
Get notified of breaking news, exclusive insights, and must-see stories!

ಬಿಜೆಪಿಯ ಈ ನಿರ್ಧಾರದಿಂದ ಗ್ರಾಮೀಣ ಆರ್ಥಿಕತೆಗೆ ಸಂಕಷ್ಟ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ, ಇದೊಂದು ಚಳುವಳಿ ಮತ್ತು ಸಿದ್ಧಾಂತ. ನಾವೆಲ್ಲರೂ ಚಳವಳಿಯಲ್ಲಿದ್ದೇವೆ. ಸಮಾನತೆ, ಸಮಾನ ಅವಕಾಶಗಳನ್ನು ಎಲ್ಲರಿಗೂ ಕೊಡಬೇಕು ಎನ್ನುವ ಸಿದ್ಧಾಂತ ನಮ್ಮದು. ಗ್ರಾಮ ಪಂಚಾಯಿತಿಯಿಂದ ರಾಜ್ಯ ಮಟ್ಟದವರೆಗೆ ಜನವರಿ 5 ರಿಂದ ನಿರಂತರವಾಗಿ ಆಂದೋಲನವನ್ನು ಪ್ರಾರಂಭಿಸಲು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಸಿದ್ದರಾಮಯ್ಯ ಅವರು ಮಾತನಾಡಿದ್ದು, ರಾಷ್ಟ್ರಪಿತನ ಹೆಸರನ್ನೇ ಅಳಿಸುವ ಬಿಜೆಪಿಯ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮೀಣ ಆರ್ಥಿಕತೆಯನ್ನು ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು. MGNAREGA ಕಾರ್ಯಕ್ರಮದಡಿ ದಲಿತರು, ಹಿಂದುಳಿದವರಿಗೆ ಹೆಚ್ಚಾಗಿ ಕೆಲಸ ದೊರಕುತ್ತಿತ್ತು. ಕೇಂದ್ರ ಸರ್ಕಾರ ಅನುದಾನವನ್ನು ಕೊಡುತ್ತಿತ್ತು. ಈಗ ಹೊಸ ಕಾಯ್ದೆ ಜಾರಿಗೆ ತಂದು, 60% ಕೇಂದ್ರ ಹಾಗೂ 40% ರಾಜ್ಯ ಸರ್ಕಾರ ಕೊಡಬೇಕು ಎಂದು ತೀರ್ಮಾನಿಸಿದ್ದಾರೆ. ರಾಜ್ಯಗಳ ಮೇಲೆ ಭಾರಿ ಹೊರೆಯನ್ನೇ ಹೊರೆಸುತ್ತಿದ್ದಾರೆ. ಇದನ್ನು ವಿಫಲಗೊಳಿಸಬೇಕು ಎಂದು ಹೇಳಿದ್ದಾರೆ.

BJP s Decision Will Hurt Rural Economy CM Siddaramaiah

ಸತ್ಯಾಗ್ರಹ, ಅಹಿಂಸೆ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟದ್ದು ಕಾಂಗ್ರೆಸ್. ಇದನ್ನು ಉಳಿಸಿಕೊಳ್ಳುವ ಕೆಲಸ ಮಾಡೋಣ. ಬ್ರಿಟಿಷ್ ಅಧಿಕಾರಿ ಎ.ಒ ಹ್ಯೂಮ್ ಅವರು ಕಾಂಗ್ರೆಸ್ ಪಕ್ಷವನ್ನು 1885ರಲ್ಲಿ ಪ್ರಾರಂಭಿಸಿ 140 ವರ್ಷಗಳಾಗಿವೆ. ಬ್ರಿಟಿಷ್ ಆಡಳಿತದ ದಬ್ಬಾಳಿಕೆಯ ವಿರುದ್ಧ ಸ್ವಾತಂತ್ರ್ಯ ಹೋರಾಟಕ್ಕಾಗಿ ಪ್ರಾರಂಭವಾದ ಕಾಂಗ್ರೆಸ್ ನಾಗರಿಕರ ಹಕ್ಕುಗಳ ರಕ್ಷಣೆ, ನ್ಯಾಯಯುತ ಆಡಳಿತಕ್ಕಾಗಿ ಒತ್ತಾಯಿಸಿತು. 1915 ರಲ್ಲಿ ಗೋಖಲೆ ಅವರು ಭಾರತದಲ್ಲಿ ಸ್ವಾತಂತ್ರ್ಯ ಹೋರಾಟದ ನಾಯಕತ್ವವನ್ನು ವಹಿಸಲು ಮಹಾತ್ಮ ಗಾಂಧಿಯವರನ್ನು ಆಹ್ವಾನಿಸುತ್ತಾರೆ.

ಡಿಸೆಂಬರ್ 28 ಐತಿಹಾಸಿಕ ದಿನವಾಗಿದ್ದು, ಅದನ್ನು ಮರೆಯಲು ಸಾಧ್ಯವಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದರೆ ಅದಕ್ಕೆ ಕಾಂಗ್ರೆಸ್ ಕಾರಣ. ಜನಸಂಘ, ಆರ್.ಎಸ್.ಎಸ್, ಹಿಂದೂ ಮಹಾ ಸಭಾ, ಬಿಜೆಪಿ ಸಂಘಟನೆಗಳು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ. ಸ್ವಾತಂತ್ರ್ಯ ಹೋರಾಟದ ವಾರಸುದಾರರು ಕಾಂಗ್ರೆಸ್ ಪಕ್ಷ.

ಸ್ವಾತಂತ್ರ್ಯ ಚಳವಳಿ ಪ್ರಾರಂಭವಾಗಿದ್ದ ಸಂದರ್ಭದಲ್ಲಿ ಮಹಾತ್ಮ ಗಾಂಧಿಯವರು ದೇಶದ ಸಾಮಾಜಿಕ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳಲು ಇಡೀ ದೇಶವನ್ನು ಸುತ್ತಿದ ನಂತರ ಕಾಂಗ್ರೆಸ್ ನೇತೃತ್ವವನ್ನು ಹೊತ್ತುಕೊಂಡರು. ವಿಶ್ವದಲ್ಲಿಯೇ ಭಾರತ ಅತಿದೊಡ್ಡ ಪ್ರಜಾಪ್ರಭುತ್ವ ದೇಶ.

ಅಸಹಕಾರ ಚಳವಳಿ, ಕ್ವಿಟ್ ಇಂಡಿಯಾ ಚಳವಳಿ ಪ್ರಾರಂಭವಾದಾಗಲೂ ಬಿಜೆಪಿ ಇದರಲ್ಲಿ ಪಾಲ್ಗೊಳ್ಳಲಿಲ್ಲ. ಬ್ರಿಟಿಷರೊಂದಿಗೆ ಸೇರಿಕೊಂಡಿದ್ದ ಬಿಜೆಪಿ ನಮಗೆ ದೇಶಭಕ್ತಿಯ ಪಾಠವನ್ನು ಹೇಳಿಕೊಡುತ್ತಾರೆ. ಅವರು ದೇಶಭಕ್ತರಂತೂ ಅಲ್ಲ. ದೇಶಭಕ್ತಿಯ ಬಗ್ಗೆ ಉದ್ದುದ್ದ ಭಾಷಣ ಬಿಗಿಯುವ ಬಿಜೆಪಿಯ ಒಬ್ಬ ನಾಯಕರೂ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಲಿಲ್ಲ.

ಕಾಂಗ್ರೆಸ್ ನವರು ಎನ್ನುವುದೇ ನಮಗೆ ಹೆಮ್ಮೆಯ ಸಂಗತಿ. ಆಧುನಿಕ ಭಾರತದ ರೂವಾರಿ ಜವಾಹರ್ ಲಾಲ್ ನೆಹರೂ ಅವರು. ಜೈ ಜವಾನ್ ಜೈ ಕಿಸಾನ್ ಘೋಷಣೆ ನೀಡಿದ್ದು ಲಾಲ್ ಬಹದ್ದೂರ್ ಶಾಸ್ತ್ರಿ, ಸಾಮಾಜಿಕ ನ್ಯಾಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿ, ಗರೀಬಿ ಹಠಾವೋ ಎನ್ನುವುದು ಕೇವಲ ಘೋಷಣೆಯಲ್ಲ. ಅದಕ್ಕೆ ಪೂರಕವಾಗಿ 20 ಅಂಶದ ಕಾರ್ಯಕ್ರಮವನ್ನು ನೀಡಿದರು. ಆಹಾರದಲ್ಲಿ ಸ್ವಾವಲಂಬನೆ ಬರಲು ಇಂದಿರಾ ಗಾಂಧಿ ಹಾಗೂ ಜಗಜೀವನ ರಾಮ್ ಅವರು ಕಾರಣ. 21ನೇ ಶತಮಾನಕ್ಕೆ ಸೂಕ್ತ ಕೊಡುಗೆಗಳನ್ನು ನೀಡಿದ್ದು ರಾಜೀವ್ ಗಾಂಧಿ. ಬಿಜೆಪಿ ಯ ಸಾಧನೆ ಏನೆಂದರೆ, ದೇಶ ಮತ್ತು ಸಮಾಜ ಒಡೆಯುವ ಕೆಲಸ ಎಂದು ಹೇಳಿದ್ದಾರೆ.

ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ರಾಜಕೀಯ ಪ್ರಜಾಪ್ರಭುತ್ವ ನಿಂತಿದೆ. ರಾಜಕೀಯ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಕ್ಕಿದಾಗ ಮಾತ್ರ ರಾಜಕೀಯ ಪ್ರಜಾಪ್ರಭುತ್ವಕ್ಕೆ ಅರ್ಥ ಬರುತ್ತದೆ ಎಂಬ ತತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಂಬಿಕೆಯಿದೆ. ಅದಕ್ಕಾಗಿಯೇ ನಾವು ಅಸಮಾನತೆ ಹೋಗಲಾಡಿಸಲು ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ.

ಮನಮೋಹನ್ ಸಿಂಗ್ ಅವರು ಪ್ರಧಾನ ಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಮೂಲಭೂತ ಹಕ್ಕುಗಳನ್ನು ನೀಡಿದರು. ಶಿಕ್ಷಣ, ಉದ್ಯೋಗ ಖಾತರಿ ಮುಂತಾದ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಮಹಾತ್ಮ ಗಾಂಧಿ ನರೇಗಾ ಯೋಜನೆಯ ಹೆಸರನ್ನೇ ಬದಲಾಯಿಸಲು ಹೊರಟಿದ್ದಾರೆ. ಯಾರಿಗೂ ಈ ಪ್ರಮಾಣದ ದ್ವೇಷ ಇರಬಾರದು. ಮಹಾತ್ಮ ಗಾಂಧಿಯವರನ್ನು ಕೊಂದ ನಂತರವೂ ಇದನ್ನು ಮುಂದುವರೆಸಿದ್ದಾರೆ.

ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ಕಂಡರೆ ಅವರಿಗೆ ಆಗುವುದೇ ಇಲ್ಲ. ನರೇಗಾ ಯೋಜನೆ ಹೆಸರನ್ನು ವಿಬಿ ಜಿ ರಾಮ್ ಜಿ ಎಂದು ಕರೆದಿದ್ದು ಇದರ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯನ್ನೇ ಮಾಡಲಿಲ್ಲ. ಇವರು ಹೇಳುವ ರಾಮ ಆದರ್ಶ ಪುರುಷ ರಾಮನಲ್ಲ, ಬಿಜೆಪಿಯ ರಾಮ.

ನೀತಿಯೇ ಇಲ್ಲದವರು ಯೋಜನಾ ಆಯೋಗದ ಹೆಸರನ್ನು ನೀತಿ ಆಯೋಗ ಎಂದು ಬದಲಾಯಿಸಿದ್ದಾರೆ. ದೇಶದಲ್ಲಿ ಆರ್ಥಿಕ ಬದಲಾವಣೆ, ಸಾಮಾಜಿಕ ನ್ಯಾಯ ಹಾಗೂ ಸಮಾನ ಅವಕಾಶಗಳು ಎಲ್ಲರಿಗೂ ಸಿಕ್ಕಿದ್ದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ.

ರಾಜಕೀಯದಲ್ಲಿ ಅಧಿಕಾರ ಬರುತ್ತದೆ, ಹೋಗುತ್ತದೆ. ಆದರೆ ಬಿಜೆಪಿಯವರು ಅಧಿಕಾರ ಹಿಡಿಯಲು ಮತಗಳ್ಳತನ ಸೇರಿದಂತೆ ಯಾವ ಮಟ್ಟಕ್ಕಾದರೂ ಇಳಿಯುತ್ತಾರೆ. MGNAREGA ಹೆಸರು ಬದಲಾವಣೆ ಮಾಡಿದ್ದರೂ ಮಹಾತ್ಮ ಗಾಂಧಿ ಹೆಸರು ಶಾಶ್ವತ. ಕಾರ್ಯಕ್ರಮದ ಹೆಸರು ಬದಲಾವಣೆ ಮಾಡಿದ ತಕ್ಷಣ ಅವರ ಹೆಸರನ್ನು ಅಳಿಸಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದ್ದಾರೆ.

ಮನಮೋಹನ್ ಸಿಂಗ್ ಹಾಗೂ ಶ್ರೀಮತಿ ಸೋನಿಯಾ ಗಾಂಧಿ ಅವರು ರೂಪಿಸಿದ ಕಾರ್ಯಕ್ರಮ 2005 ರಿಂದ ಇಂದಿನವರೆಗೂ ಇತ್ತು. ಈಗ ಬದಲಾಯಿಸಿದ್ದಾರೆ. ಇದು ಸಚಿವ ಸಂಪುಟದಲ್ಲಿ ತೀರ್ಮಾನವಾಗಿಲ್ಲ. ಪ್ರಧಾನಮಂತ್ರಿಗಳ ಕಚೇರಿಯಿಂದಲೇ ತೀರ್ಮಾನವಾಗಿದೆ. ಸಂಬಂಧಪಟ್ಟ ಇಲಾಖೆ ಸಚಿವರಿಗೂ ಇದರ ಬಗ್ಗೆ ತಿಳಿದಿಲ್ಲ. ಇದನ್ನು ಉಳಿಸಿಕೊಳ್ಳುವ ರಕ್ಷಿಸುವ ಕರ್ತವ್ಯ ನಮ್ಮದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+