ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದ ಡಬಲ್ ಶಾಕ್: ಸುರ್ಜೇವಾಲಾ

ಬೆಂಗಳೂರು, ನವೆಂಬರ್ 09: ವಿದ್ಯುತ್ ದರ ಏರಿಕೆ ಬೆನ್ನಲ್ಲೇ ನೀರಿನ ಶುಲ್ಕ ಹೆಚ್ಚಳ ಮಾಡಲು ಮುಂದಾಗಿರುವ ಕರ್ನಾಟಕ ಸರ್ಕಾರದ ವಿರುದ್ಧ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಪಚುನಾವಣೆ ಮುಗಿದ ಬೆನ್ನಲ್ಲೇ ವಿದ್ಯುತ್ ದರವನ್ನು ಹೆಚ್ಚಿಸುವ ಮೂಲಕ ಬಿಜೆಪಿಯ 'ಡಬಲ್ ಇಂಜಿನ್' ಸರ್ಕಾರವು ಕರ್ನಾಟಕದ ಜನತೆಗೆ ಶಾಕ್ ನೀಡಿತ್ತು. ಈಗ ನೀರಿನ ಶುಲ್ಕವನ್ನೂ ಹೆಚ್ಚಿಸುವ ಮೂಲಕ 'ಡಬಲ್ ಶಾಕ್‌' ಕೊಡಲು ಮುಂದಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಕನ್ನಡದಲ್ಲೇ ಟ್ವೀಟ್ ಮಾಡಿರುವ ಅವರು, ವಿದ್ಯುತ್ ದರ ಏರಿಕೆ ಬೆನ್ನಲ್ಲೇ ನೀರಿನ ಶುಲ್ಕ ಏರಿಕೆ ಮಾಡುವ ಮೂಲಕ ರಾಜ್ಯ ಬಿಎಸ್‌ ಯಡಿಯೂರಪ್ಪ ಸರ್ಕಾರ ಜನರಿಗೆ ಡಬಲ್ ಶಾಕ್ ನೀಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

BJPs Double Engine Govt Giving A Double Shock To People.

ಶುಲ್ಕ ಮತ್ತು ನಿರ್ವಹಣಾ ವೆಚ್ಚ ಭರಿಸುವುದು ಸುಲಭವಾಗಿದೆ, ಈ ಅಂಶ ಗಮನದಲ್ಲಿಟ್ಟುಕೊಂಡು ದರ ಹೆಚ್ಚಳಕ್ಕೆ ಮನವಿ ಸಲ್ಲಿಸಲಾಗಿದೆ.

ನೀರಿನ ದರ ಪರಿಷ್ಕರಣೆ ಆಗಿ ಏಳು ವರ್ಷಗಳೇ ಆಗಿದೆ. ವಿದ್ಯುತ್ ಶುಲ್ಕ ಮತ್ತು ನಿರ್ವಹಣಾ ವೆಚ್ಚ ಭರಿಸುವುದು ಸವಾಲಾಗಿದೆ. ಈ ಅಂಶ ಗಮನದಲ್ಲಿಟ್ಟುಕೊಂಡು ದರ ಹೆಚ್ಚಳಕ್ಕೆ ಸಲ್ಲಿಸಲಾಗಿದೆ. ಸರ್ಕಾರ ಪ್ರಸ್ತಾವಕ್ಕೆ ಒಪ್ಪಿಗೆ ನೀಡಿದರೆ ಶೇ.ವಿದ್ಯುತ್10 ರಿಂದ ಶೇ.12ರಷ್ಟು ದರ ಹೆಚ್ಚಳ ಆಗಬಹುದು ಎಂದು ಜಲಮಂಡಳಿ ಅಧ್ಯಕ್ಷರು ತಿಳಿಸಿದ್ದರು.

2013ರ ಜುಲೈನಲ್ಲಿ ನೀರಿನ ದರ ಪರಿಷ್ಕರಣೆ ಆಗಿತ್ತು. ಜಲಮಂಡಳಿಗೆ ಮಾಡಿಕ115 ಕೋಟಿ ರೂ ವರಮಾನ ಬರುತ್ತಿದೆ. ವಿದ್ಯುತ್ ಶುಲ್ಕ ಪಾವತಿಗೆ 46 ಕೋಟಿ ರೂ ನಿರ್ವಹಣೆಗೆ30 ಕೋಟಿರೂ.ಮತ್ತು ಅಧಿಕಾರಿ, ಸಿಬ್ಬಂದಿಯ ವೇತನಕ್ಕೆ 10 ಕೋಟಿಯಿಂದ 15 ಕೋಟಿ ರೂ. ವ್ಯಯವಾಗುತ್ತಿದೆ ಎಂದು ಜಲಮಂಡಳಿ ಮೂಲಗಳು ತಿಳಿಸಿವೆ.

Recommended Video

      BJP ಸಿಬಿಐ ನಾ miss use ಮಾಡ್ತಿದಾರೆ!! | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+