ಜಾರ್ಜ್, ವಿನಯ್ ಕುಲಕರ್ಣಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು, ನವೆಂಬರ್ 29 : ಸಚಿವರಾದ ಕೆ.ಜೆ. ಜಾರ್ಜ್ ಹಾಗೂ ವಿನಯ್ ಕುಲಕರ್ಣಿ ಅವರ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ನಗರದ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಬೆಳಗಾವಿ ಅಧಿವೇಶನದಲ್ಲಿ ಡಿವೈಎಸ್ ಪಿ ಗಣಪತಿ ಹತ್ಯೆ ಪ್ರಕರಣದ ಕುರಿತು ಜಾರ್ಜ್ ರಾಜೀನಾಮೆ ನೀಡಬೇಕು ಎನ್ನುವ ವಿಚಾರ ಕುರಿತು ಸಾಕಷ್ಟು ಚರ್ಚೆಗಳು ನಡೆದರೂ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶ್ ಗೌಡ ಅವರ ಕೊಲೆಯ ಹಿಂದೆ ಸಚಿವ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಎನ್ನುವ ಆರೋಪಗಳು ಕೇಳಿ ಬಂದಿದೆ. ಹೀಗಾಗಿ ಕೆ.ಜೆ. ಜಾರ್ಜ್ ಹಾಗೂ ವಿನಯ್ ಕುಲಕರ್ಣಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಲಾಯಿತು.

BJP seeking resignation of minister George and Vinay

ಈ ಸಂದರ್ಭದಲ್ಲಿ ಮಾಜಿ ಡಿಸಿಎಂ ಆರ್. ಅಶೋಕ್ ಮಾತನಾಡಿ, ಸಿಎಂ ಸಿದ್ದರಾಮಯ್ಯ 800 ಎಕರೆ ಅರ್ಕಾವತಿ ಬಡಾವಣೆಯಲ್ಲಿ ಡಿನೋಟಿಫಿಕೇಷನ್ ಮಾಡಿದ್ದಾರೆ, ಇದೊಂದು ಭ್ರಷ್ಟ ಸರ್ಕಾರ ಮಾತ್ರ ಅಲ್ಲ, ಕೊಲೆಗೆಡುಕ ಸರ್ಕಾರ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಮಾಜಿ ಸಚಿವ ಎಸ್. ಸುರೇಶ್ ಕುಮಾರ್, ಜಗದೀಶ್ ಶೆಟ್ಟರ್, ಶಾಸಕ ಮುನಿರಾಜು, ವಕ್ತಾರರಾದ ಮಾಳವಿಕಾ, ಬಿಬಿಎಂಪಿ ಸದಸ್ಯರು ಪಾಲ್ಗೊಂಡಿದ್ದರು.

BJP seeking resignation of minister George and Vinay
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+