ಮೋದಿ ಬೆಂಗಳೂರು ಸಮಾವೇಶಕ್ಕೆ ಹೆಚ್ಚಿನ ಭದ್ರತೆ

ಮಂಗಳವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಬಿಹಾರದ ಪಟ್ನಾದಲ್ಲಿ ನರೇಂದ್ರ ಮೋದಿ ಅವರ ಸಮಾವೇಶದ ಸಂದರ್ಭದಲ್ಲಿ ಉಂಟಾದ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಕೆಲವು ತಿಂಗಳ ಹಿಂದೆ ರಾಜ್ಯ ಬಿಜೆಪಿ ಕಚೇರಿ ಬಳಿಯೇ ಬಾಂಬ್ ಸ್ಫೋಟ ಸಂಭವಿಸಿತ್ತು. ಪಾಟ್ನಾ ಸ್ಫೋಟದ ರೂವಾರಿ ತೆಹಸೀನ್ ಮಂಗಳೂರಿನಲ್ಲಿ ನೆಲೆಸಿದ್ದರು, ಅವರ ಸಹಚರರು ರಾಜ್ಯದಲ್ಲಿ ಇರಬಹುದು. ಆದ್ದರಿಂದ ಕರ್ನಾಟಕ ಸರ್ಕಾರ ಸಮಾವೇಶಕ್ಕೆ ಹೆಚ್ಚಿನ ಭದ್ರತೆ ಒದಗಿಸಬೇಕು ತಿಳಿಸಿದರು.
ಬುಧವಾರದಿಂದ ನೋಂದಣಿ : ಬೆಂಗಳೂರಿನಲ್ಲಿ ನಡೆಯಲಿರುವ ನರೇಂದ್ರ ಮೋದಿ ಸಮಾವೇಶಕ್ಕೆ 'ಭಾರತ ಗೆಲ್ಲಿಸಿ' ಎಂದು ನಾಮಕಾರಣ ಮಾಡಲಾಗಿದೆ. ಸಮಾವೇಶದಲ್ಲಿ ಪಾಲ್ಗೊಳ್ಳಲು ನೋಂದಣಿಯನ್ನು ಬುಧವಾರ ಬಿಜೆಪಿ ಆರಂಭಿಸಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ನೋಂದಣಿಗೆ ಚಾಲನೆ ನೀಡಲಿದ್ದಾರೆ.
ಬುಧವಾರ ಮತ್ತು ಗುರುವಾರ ರಾಜ್ಯದಲ್ಲಿ ನೋಂದಣಿ ಕಾರ್ಯ ನಡೆಯಲಿದೆ. ಆನ್ ಲೈನ್ ನಲ್ಲಿ ಸಹ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ಪಕ್ಷದ ರಾಜ್ಯ ಘಟಕದ ವಕ್ತಾರ ಸುರೇಶ್ ಕುಮಾರ್ ಹೇಳಿದ್ದಾರೆ. ಸಮಾವೇಶದಲ್ಲಿ ಭಾಗವಹಿಸುವ ಬಿಜೆಪಿ ಕಾರ್ಯಕರ್ತರು 10 ರೂ. ಶುಲ್ಕ ಪಾವತಿ ಮಾಡಬೇಕಾಗಿದೆ. ಸಾರ್ವಜನಿಕರಿಗೆ ಉಚಿತ ಪ್ರವೇಶ ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದರು.
ಅಗತ್ಯ ಭದ್ರತೆ ನೀಡುತ್ತೇವೆ : ನರೇಂದ್ರ ಮೋದಿ ಅವರ ಸಮಾವೇಶದ ನಡೆಯುವಾಗ ಪಾಟ್ನಾದಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿದ ಹಿನ್ನಲೆಯಲ್ಲಿ ಬೆಂಗಳೂರು ಸಮಾವೇಶಕ್ಕೆ ಅಗತ್ಯ ಭದ್ರತೆ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಬೆಂಗಳೂರಿಗೆ ಆಗಮಿಸುವವರಿಗೆ ಸೂಕ್ತ ಭದ್ರತೆ ಕಲ್ಪಿಸುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ ಎಂದು ಅವರು ಹೇಳಿದ್ದಾರೆ.
ಆನ್ ಲೈನ್ ವ್ಯವಸ್ಥೆ : ನರೇಂದ್ರ ಮೋದಿ ಅವರ ಸಮಾವೇಶಕ್ಕಾಗಿ ಆನ್ ಲೈನ್ ಮೂಲಕವೂ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಬುಧವಾರ ಸಂಜೆ 4 ಗಂಟೆಯಿಂದ ಆನ್ ಲೈನ್ ಬುಕ್ಕಿಂಗ್ ಸೌಲಭ್ಯ ಆರಂಭವಾಗುತ್ತದೆ. ಬುಕ್ಕಿಂಗ್ ಗಾಗಿ ಬಿಜೆಪಿ ವೆಬ್ ಸೈಟ್ ಗೆ ಭೇಟಿ ನೀಡಬಹುದು.












Click it and Unblock the Notifications