15 ಟ್ರಕ್ ಗಳಲ್ಲಿ ಕೊಡಗು ಸಂತ್ರಸ್ತರಿಗೆ ಅಗತ್ಯ ಸಾಮಗ್ರಿ ಕಳಿಸಿದ ಬಿಜೆಪಿ
ಬೆಂಗಳೂರು, ಆಗಸ್ಟ್ 21: ಕೊಡಗಿನಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದ ಪರಿತಪಿಸುತ್ತಿರುವ ಜನರಿಗೆ, ಬೆಂಗಳೂರು ಬಿಜೆಪಿ ವತಿಯಿಂದ ಸಂಗ್ರಹಿಸಲಾದ ಪರಿಹಾರ ಸಾಮಗ್ರಿಗಳ ಸಾಗಣೆಗೆ ಇಂದು ಕೇಂದ್ರ ಸಚಿವ ಅನಂತ ಕುಮಾರ್ ಚಾಲನೆ ನೀಡಿದರು.
ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇಂದು ಸಾಮಗ್ರಿಗಳನ್ನು ಸಾಗಣೆ ಮಾಡುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
15ಕ್ಕೂ ಹೆಚ್ಚು ಟ್ರಕ್ ಗಳಲ್ಲಿ ಸಾಮಗ್ರಿಗಳನ್ನು ಕೊಡಗಿಗೆ ಕಳಿಸಿಕೊಡಲು ಕೇಂದ್ರ ಸಚಿವ ಅನಂತಕುಮಾರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಹಸಿರು ನಿಶಾನೆ ತೋರಿಸಿದರು.

ಅಶೋಕ್ ಅವರು ಖುದ್ದು ಮಡಿಕೇರಿಗೆ ತೆರಳಿ ಸ್ಥಳೀಯ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ಸಮನ್ವಯದಿಂದ ಅಗತ್ಯ ವಸ್ತುಗಳನ್ನು ಸಂತ್ರಸ್ತರ ಮನೆಗಳಿಗೆ ತಲುಪಿಸುವ ವ್ಯವಸ್ಥೆಯನ್ನು ಗಮನಿಸಲಿದ್ದಾರೆ.

ಜೊತೆಗೆ ಅಗತ್ಯವಿರುವ ಕಡೆಗಳಲ್ಲಿ ಶಾಲಾ ಕಟ್ಟಡ ನಿರ್ಮಿಸಿಕೊಡುವ ಬಗ್ಗೆಯೂ ಗಂಭೀರ ಚಿಂತನೆ ನಡೆಸಿರುವುದಾಗಿ ಹೇಳಿದ್ದಾರೆ.












Click it and Unblock the Notifications