ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಮ್ಮಿಶ್ರ ಸರ್ಕಾರದ ವಿರುದ್ಧ ಯಡಿಯೂರಪ್ಪ ನೇತೃತ್ವದಲ್ಲಿ ಅಹೋರಾತ್ರಿ ಧರಣಿ

|
Google Oneindia Kannada News

ಬೆಂಗಳೂರು, ಜೂನ್ 14: ಜಿಂದಾಲ್ ಕಂಪನಿಗೆ 3667 ಎಕರೆ ಭೂಮಿಯನ್ನು ಅತಿ ಕಡಿಮೆ ದರಕ್ಕೆ ಮಾರುವ ರಾಜ್ಯ ಸರ್ಕಾರದ ತೀರ್ಮಾನ ವಿರೋಧಿಸಿ ಮತ್ತು ಪರಿಹಾರ ಕಾರ್ಯ ಕೈಗೊಳ್ಳುವಲ್ಲಿ ವೈಫಲ್ಯ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಧರಣಿ ಆರಂಭಗೊಂಡಿದೆ.

ಜಿಂದಾಲ್ ವಿವಾದ : ಬಿಜೆಪಿ ಯುವ ಮೋರ್ಚಾ ಸದಸ್ಯರು ಪೊಲೀಸ್ ವಶಕ್ಕೆಜಿಂದಾಲ್ ವಿವಾದ : ಬಿಜೆಪಿ ಯುವ ಮೋರ್ಚಾ ಸದಸ್ಯರು ಪೊಲೀಸ್ ವಶಕ್ಕೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನ ಆನಂದ ರಾವ್ ಸರ್ಕಲ್ ಬಳಿ ಅಹೋರಾತ್ರಿ ಧರಣಿ ನಡೆಯುತ್ತಿದೆ. ಜಿಂದಾಲ್ ಕಂಪನಿಗೆ 1.22 ಲಕ್ಷ ರೂ.ಗೆ 3667 ಎಕರೆ ಭೂಮಿ ಮಾರುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಈ ತೀರ್ಮಾನ ವಾಪಸ್ ಪಡೆಯಲು ಸರ್ಕಾರ ಮುಂದಾಗಿದೆ.

BJP staged a protest against coalition govt in Bengaluru

ಆದರೆ, ಕೆಲವು ಪ್ರಭಾವಿ ಸಚಿವರು ಜಿಂದಾಲ್ ಗೆ ಭೂಮಿ ನೀಡುವ ನಿರ್ಧಾರ ಬದಲಿಸದಂತೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಅಹೋರಾತ್ರಿ ಧರಣಿ ಕೈಗೊಂಡಿದೆ. ಬಿಜೆಪಿಯ 25 ಸಂಸದರು ಮತ್ತು 105 ಶಾಸಕರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ, ಈಗ ಸಾಕಷ್ಟು ಮಂದಿ ಆಗಮಿಸಿದ್ದಾರೆ.

BJP staged a protest against coalition govt in Bengaluru

ಮಾಜಿ ಡಿಸಿಎಂ ಆರ್ ಅಶೋಕ್, ಶ್ರೀರಾಮುಲು, ಶೋಭಾ ಕರಂದ್ಲಾಜೆ,ಗೋವಿಂದ ಕಾರಜೋಳ, ಸಿಟಿ ರವಿ, ರವಿಕುಮಾರ್, ಅರವಿಂದ ಲಿಂಬಾವಳಿ ಬಹುತೇಕ ಮಂದಿ ಸೇರಿದ್ದಾರೆ. ಬರ ಪರಿಹಾರ ನೀಡುವಲ್ಲಿ ಹಿಂದೇಟು ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ.

English summary
BJP staged a protest against coalition govt in Bengaluru, over farm loan waiver, Jindal and other issues with the leadership of BS Yeddyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X