ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಿವರ್ಸ್ ಆಪರೇಷನ್ ಮಾಡೋದಾದರೆ ಮಾಡಲಿ: ಯಡಿಯೂರಪ್ಪ ಸವಾಲು

|
Google Oneindia Kannada News

Recommended Video

ರಿವರ್ಸ್ ಆಪರೇಷನ್ ಮಾಡೋದಾದರೆ ಮಾಡಲಿ: ಯಡಿಯೂರಪ್ಪ ಸವಾಲು/ B. S. Yeddyurappa

ಬೆಂಗಳೂರು, ಜುಲೈ 2: ಬಿಜೆಪಿಯವರು ಆಪರೇಷನ್ ಕಮಲ ಮಾಡಿದರೆ ನಾವು ರಿವರ್ಸ್ ಆಪರೇಷನ್ ಮಾಡಬೇಕಾಗುತ್ತದೆ ಎಂಬ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಎಚ್ಚರಿಕೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ತಾಕತ್ತಿದ್ದರೆ ರಿವರ್ಸ್ ಆಪರೇಷನ್ ಮಾಡಿ ಎಂಬ ಸವಾಲು ಹಾಕಿದ್ದಾರೆ.

ಆಷಾಢದಲ್ಲೇ ಸರ್ಕಾರ ರಚನೆ ಬಿಜೆಪಿ ಕನಸು, ನನಸಾಗುವುದೇ? ಆಷಾಢದಲ್ಲೇ ಸರ್ಕಾರ ರಚನೆ ಬಿಜೆಪಿ ಕನಸು, ನನಸಾಗುವುದೇ?

ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಂಗಳವಾರ ಮಾತನಾಡಿದ ಅವರು, ನಾವು ಆಪರೇಷನ್ ಕಮಲ ಮಾಡುತ್ತೀವಿ ಎಂದು ಎಲ್ಲಿಯೂ ಹೇಳಿಲ್ಲ. ಕಳೆದ ಮೂರು ತಿಂಗಳಿನಿಂದ ಅವರು ಅದನ್ನೇ ಹೇಳುತ್ತಿದ್ದಾರೆ. ತಮ್ಮ ಗೊಂದಲ ಮುಚ್ಚಿಹಾಕಲು ಅವರು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ರಿವರ್ಸ್ ಆಪರೇಷನ್ ಮಾಡುವುದಾದರೆ ಮಾಡಲಿ. ನಮ್ಮವರು ಯಾರೂ ಬಿಜೆಪಿಗೆ ಹೋಗುವುದಿಲ್ಲ ಎಂದು ಹೇಳಿದರು.

ರಿವರ್ಸ್ ಆಪರೇಷನ್ ಮಾಡ್ತೀವಿ, ಹುಷಾರ್: ಬಿಜೆಪಿಗೆ ಎಚ್ಚರಿಕೆರಿವರ್ಸ್ ಆಪರೇಷನ್ ಮಾಡ್ತೀವಿ, ಹುಷಾರ್: ಬಿಜೆಪಿಗೆ ಎಚ್ಚರಿಕೆ

ಮುಖ್ಯಮಂತ್ರಿಯವರು ತಮ್ಮ ಶಾಸಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎನ್ನುತ್ತಿದ್ದಾರೆ. ಬೆಂಗಳೂರಿನಿಂದ ಅಮೆರಿಕ ಏನು ದೂರ ಇದೆಯೇ? ಅವರು ಅಮೆರಿಕದಿಂದ ಬರಲಿ ನೋಡೋಣ. ಅದೇನೂ ದೂರ ಇಲ್ಲ ಅಲ್ಲವಾ? ಎಂದು ವ್ಯಂಗ್ಯವಾಡಿದರು.

bjp state president bs yeddyurappa challenges reverse operation congress

ರಾಜ್ಯ ಸರ್ಕಾರ ಅಧಿವೇಶನ ನಡೆಸಿದರೆ ಅಲ್ಲಿ ವಿಶ್ವಾಸಮತ ಯಾಚನೆಯ ಪ್ರಶ್ನೆಯೇ ಇಲ್ಲ. ಈ ಬೆಳವಣಿಗೆಗಳನ್ನು ನೋಡಿಕೊಂಡು ಸಭೆ ಕರೆಯಬೇಕು. ಶಾಸಕಾಂಗ ಸಭೆಯಲ್ಲಿ ಯಾವ ಸಂಗತಿಗಳನ್ನು ಚರ್ಚಿಸಬೇಕೋ ಅವುಗಳ ಬಗ್ಗೆ ಮಾತನಾಡುತ್ತೇವೆ. ಸದನದಲ್ಲಿ ಯಾವ ಮುಖ್ಯ ವಿಚಾರವೋ ಅದನ್ನು ಚರ್ಚಿಸುತ್ತೇವೆ ಎಂದರು.

ಅವಕಾಶ ಸಿಕ್ಕಾಗ ಸರ್ಕಾರ ರಚಿಸದಿರಲು ನಾವೇನು ಸನ್ಯಾಸಿಗಳೇ?: ಯಡಿಯೂರಪ್ಪ ಅವಕಾಶ ಸಿಕ್ಕಾಗ ಸರ್ಕಾರ ರಚಿಸದಿರಲು ನಾವೇನು ಸನ್ಯಾಸಿಗಳೇ?: ಯಡಿಯೂರಪ್ಪ

ಬಿಜೆಪಿಯವರು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಬಿಜೆಪಿಯ ಕೇಂದ್ರದ ಮುಖಂಡರು ತನಿಖಾ ಸಂಸ್ಥೆಯನ್ನು ದುರ್ಬಳಕೆ ಮಾಡುತ್ತಿದ್ದಾರೆ. ಆ ಮೂಲಕ ಕಾಂಗ್ರೆಸ್ ಶಾಸಕರನ್ನು ಭಯಗೊಳಿಸುವ ಪ್ರಯತ್ನವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ನಮಗೂ ಶಕ್ತಿ ಸಾಮರ್ಥ್ಯವಿದೆ, ಆದರೆ ಅದನ್ನು ಈ ವರೆಗೆ ಪ್ರಯತ್ನಿಸಿಲ್ಲ, ಇದೇ ರೀತಿ ಮುಂದುವರಿದರೆ ನಾವೂ ಅದಕ್ಕೆ (ರಿವರ್ಸ್ ಆಪರೇಷನ್) ಕೈಹಾಕಬೇಕಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದರು.

English summary
BJP state president BS Yeddyurappa challenged Congress to do 'reverse operation' if they can.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X