ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಯಡಿಯೂರಪ್ಪಗೆ ಬಿಡುಗಡೆ

|
Google Oneindia Kannada News

ಬೆಂಗಳೂರು, ಆಗಸ್ಟ್ 19: ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷರ ಬಗ್ಗೆಯೂ ಬಿಜೆಪಿ ಹೈಕಮಾಂಡ್ ಚರ್ಚಿಸುತ್ತಿದ್ದು, ಶೀಘ್ರ ನೇಮಕವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೆಸರು ಮುಂಚೂಣಿಯಲ್ಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸಿನಲ್ಲಿ ಮೂರು ಪ್ರಮುಖ ಹೆಸರುಗಳುಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸಿನಲ್ಲಿ ಮೂರು ಪ್ರಮುಖ ಹೆಸರುಗಳು

ಸೆಪ್ಟೆಂಬರ್ ವೇಳೆಗೆ ಪಕ್ಷದ ಸಾಂಸ್ಥಿಕ ಚುನಾವಣೆಗಳು ಕೂಡಾ ಇರುವ ಕಾರಣ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆಯೂ ಚರ್ಚೆ ನಡೆದಿದೆ. ಸಚಿವ ಸಂಪುಟ ರಚನೆಯಾದ ಬಳಿಕ ಬಿಜೆಪಿ ಹೈಕಮಾಂಡ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಬಿಡುಗಡೆಗೊಳಿಸಲಿದೆ. ಶೀಘ್ರದಲ್ಲೇ ರಾಜ್ಯ ಬಿಜೆಪಿಗೆ ಹೊಸ ಅಧ್ಯಕ್ಷರ ನೇಮಕವಾಗಲಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

BJP State President May Change Soon

ಸುನೀಲ್ ಕುಮಾರ್, ಪ್ರಭು ಚೌಹ್ಹಾಣ್, ಉಮೇಶ್ ಕತ್ತಿ, ಗೋವಿಂದ ಕಾರಜೋಳ, ಅಶ್ವಥ್ ನಾರಾಯಣ, ಬಸವರಾಜ್ ಬೊಮ್ಮಾಯಿ, ಎಂಎಲ್ಸಿ ಪುಟ್ಟಣ್ಣ ಭೇಟಿ ನೀಡಿದ್ದಾರೆ. ಸ್ವತಃ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಕೂಡ ಸಚಿವರ ಅಂತಿಮ ಪಟ್ಟಿಗೆ ಕಾಯುತ್ತಿದ್ದು, ಇಂದು ಸಂಜೆಯೊಳಗೆ ಆ ಕುತೂಹಲಕ್ಕೆ ತೆರೆ ಬೀಳಲಿದೆ.

ಆಗಸ್ಟ್ 20 ರಂದು ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆಯಾಗಲಿದೆ. ಆದರೆ ಇದುವರೆಗೂ ಸಚಿವರ ಅಂತಿಮ ಲಿಸ್ಟ್‌ ಕೈ ಸೇರಿಲ್ಲ. ಆದರೆ ಅದಕ್ಕೂ ಮುನ್ನ ಯಡಿಯೂರಪ್ಪ ಅವರು ತಮ್ಮ ಆಪ್ತರಿಗೆ ಸಂದೇಶವೊಂದನ್ನು ರವಾನಿಸಿದ್ದು, ಸಚಿವ ಸ್ಥಾನ ಸಿಗದಿದ್ದರೆ ಯಾರೂ ಬೇಸರ ಮಾಡಿಕೊಳ್ಳಬೇಡಿ.

ನಾನೇ ಇದ್ದೀನಲ್ಲ ನಿಮ್ಮ ನಿಮ್ಮ ಕ್ಷೇತ್ರಗಳಿಗೆ ಏಕಾದ ಅನುದಾನವನ್ನು ಪಡೆದುಕೊಳ್ಳಿ, ಆದರೆ ಯಾವುದೇ ಕಾರಣಕ್ಕೂ ಬೇಸರ ಮಾಡಿಕೊಳ್ಳಬೇಡಿ ಎಂದಿದ್ದಾರೆ.

English summary
BS Yeddyurappa becomes Chief Minister of Karnataka, So BJP State president may be changed soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X