ಕಾಂಗ್ರೆಸ್ಸಿನವರಿಗೆ ಜಾಮೀನು ಪಡೆಯುವ ಸ್ಥಿತಿ ಏಕೆ ಬಂತು ಸಿದ್ದರಾಮಯ್ಯ?
ಬೆಂಗಳೂರು, ಜುಲೈ 23: ವೈದ್ಯಕೀಯ ಸಾಮಾಗ್ರಿ ಖರೀದಿಯಲ್ಲಿ ಸರ್ಕಾರ ಭ್ರಷ್ಟಾಚಾರ ಮಾಡಿದೆ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ 'ಕಾಮಾಲೆ ಕಣ್ಣಿನವರಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕಾಂಗ್ರೆಸ್ಸಿಗರಿಗೆ ಎಲ್ಲರೂ ಭ್ರಷ್ಟಾಚಾರಿಗಳಂತೆ ಕಾಣುತ್ತಾರೆ' ಎಂದು ತಿರುಗೇಟು ನೀಡಿದ್ದಾರೆ.
Recommended Video
ಟ್ವಿಟ್ಟರ್‌ನಲ್ಲಿ ಈ ಕುರಿತು ಮಾತನಾಡಿರುವ ನಳೀನ್ ಕುಮಾರ್ ಕಟೀಲ್ 'ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ. ಅನುಮಾನಗಳಿದ್ದರೆ ಬಗೆಹರಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದರೂ ಕಾಂಗ್ರೆಸ್ ನಾಯಕರು ಮತ್ತದೇ ಆರೋಪಗಳನ್ನು ಮಾಡಿದ್ದಾರೆ. ಕೊರೊನಾದಿಂದ ಹಾದಿಬೀದಿಯಲ್ಲಿ ಜನ ಸಾಯುತ್ತಿದ್ದಾರೆ ಎಂದು ಹಸಿ ಸುಳ್ಳು ಹಳಿ ಜನರಲ್ಲಿ ಅನಗತ್ಯ ಆತಂಕ ಸೃಷ್ಟಿಸುವ ಕೆಲಸದಲ್ಲಿ ನಿರತರಾಗಿದ್ದಾರೆ' ಎಂದಿದ್ದಾರೆ.
'ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರು ಸರ್ಕಾರದ ವಿರುದ್ಧ ಆರೋಪ ಮಾಡುವಾಗ ಸರಿಯಾದ ದಾಖಲೆ ಕೊಡಬೇಕಿತ್ತು. ಅವರು ಹೇಳಿರುವಷ್ಟು ಪ್ರಮಾಣದ ವೈದ್ಯಕೀಯ ಪರಿಕರಗಳ ಖರೀದಿಯೇ ಆಗಿಲ್ಲ. ಅಗತ್ಯಕ್ಕೆ ತಕ್ಕ ಖರೀದಿ ನಡೆಸಿದ್ದು, ತುರ್ತು ಕ್ರಮಗಳನ್ನು ಸರ್ಕಾರ ಕೈಗೊಂಡಿದೆ' ಎಂದು ವಿಪಕ್ಷ ನಾಯಕರ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.

'ಕಾಮಾಲೆ ಕಣ್ಣಿನವರಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕಾಂಗ್ರೆಸ್ಸಿಗರಿಗೆ ಎಲ್ಲರೂ ಭ್ರಷ್ಟಾಚಾರಿಗಳಂತೆ ಕಾಣುತ್ತಾರೆ. ಅವರ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಜಾಮೀನು ಪಡೆದು ಹೊರಗಿದ್ದಾರೆ. ಅವರೆಲ್ಲ ಜಾಮೀನು ಪಡೆಯುವ ಸ್ಥಿತಿ ಯಾಕೆ ಬಂತು ಎಂಬುದನ್ನೂ ಜನರಿಗೆ ಹೇಳಿ ಸಿದ್ದರಾಮಯ್ಯ ಅವರೆ' ಎಂದು ಪ್ರಶ್ನಿಸಿದ್ದಾರೆ.
ಕಾಮಾಲೆ ಕಣ್ಣಿನವರಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕಾಂಗ್ರೆಸ್ಸಿಗರಿಗೆ ಎಲ್ಲರೂ ಭ್ರಷ್ಟಾಚಾರಿಗಳಂತೆ ಕಾಣುತ್ತಾರೆ. ಅವರ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಜಾಮೀನು ಪಡೆದು ಹೊರಗಿದ್ದಾರೆ. ಅವರೆಲ್ಲ ಜಾಮೀನು ಪಡೆಯುವ ಸ್ಥಿತಿ ಯಾಕೆ ಬಂತು ಎಂಬುದನ್ನೂ ಜನರಿಗೆ ಹೇಳಿ @siddaramaiah ಅವರೆ.
— Nalinkumar Kateel (@nalinkateel) July 23, 2020
'ಕೊರೊನಾ ಸಂದರ್ಭದಲ್ಲಿ ಜನರಲ್ಲಿ ಆತ್ಮಸ್ಥೈರ್ಯ ಮೂಡಿಸು ಕೆಲಸವನ್ನು ನಾವು ಜನಪ್ರತಿನಿಧಿಗಳು ಮಾಡಬೇಕಿದೆ. ಅದು ಬಿಟ್ಟು ಕಾಂಗ್ರೆಸ್ಸಿಗರು ರಾಜಕಾರಣ ಮಾಡಲು ಹೊರಟಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿ ಜನರನ್ನು ಆತಂಕಕ್ಕೀಡುಮಾಡುವ ಕೆಲಸವನ್ನು ಮೊದಲು ನಿಲ್ಲಿಸಲಿ. ಎಲ್ಲರೂ ಒಟ್ಟಾಗಿ ಕೊರೋನಾ ವಿರುದ್ಧದ ಸಮರ ಗೆಲ್ಲುವುದು ನಮ್ಮೆಲ್ಲರ ಗುರಿಯಾಗಲಿ' ಎಂದು ಹೇಳಿದ್ದಾರೆ.












Click it and Unblock the Notifications