ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯದಲ್ಲಿ150 ಟಾರ್ಗೆಟ್‌ಗಾಗಿ ಬಿಜೆಪಿ ಕಾರ್ಯತಂತ್ರ: ನಳಿನ್‍ ಕುಮಾರ್ ಕಟೀಲ್

|
Google Oneindia Kannada News

ಬೆಂಗಳೂರು, ಏ. 23: ಕೇಂದ್ರ ಮತ್ತು ರಾಜ್ಯ ಸರಕಾರಗಳ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಿ 150 ಪ್ಲಸ್ ಶಾಸಕ ಸ್ಥಾನ ಪಡೆಯಲು ಕಾರ್ಯತಂತ್ರ ರೂಪಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಸರ್ಕಾರದ ಜನಪರ ಯೋಜನೆಗಳನ್ನು ಜನಸಾಮಾನ್ಯರಿಗೆ ತಿಳಿಸಲು ಮೂರು ತಂಡಗಳಲ್ಲಿ ಪಕ್ಷದ ಸಂಘಟನೆಗಾಗಿ ಕಾರ್ಯತಂತ್ರ ನಡೆಯುತ್ತಿದೆ. ಇದರಲ್ಲಿ ಸಂಸದರು ಹಾಗೂ ಜಿಲ್ಲಾ ಮಟ್ಟದ ಅಧ್ಯಕ್ಷರು ಭಾಗಿಯಾಗಿದ್ದಾರೆ ಎಂದು ಅವರು ಶನಿವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದಲ್ಲಿ ಬಿಜೆಪಿ ಸರಕಾರಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರಕಾರಗಳ ಸಾಧನೆಯ ಕುರಿತು ಜನರಿಗೆ ತಲುಪಿಸುವ ದೃಷ್ಟಿಯಿಂದ ರಾಜ್ಯದಿಂದ ಬೂತ್ ವರೆಗೆ ಸಭೆಗಳನ್ನು ನಡೆಸಲಾಗಿದೆ. ನಮ್ಮ ಸಂಘಟನೆಯನ್ನು ಸರ್ವಸ್ಪರ್ಶಿ- ಸರ್ವವ್ಯಾಪಿ ಮಾಡಲು ಶ್ರಮಿಸುತ್ತಿದ್ದೇವೆ. ಬೂತ್ ಕಮಿಟಿ, ಪೇಜ್ ಕಮಿಟಿ ಹೆಚ್ಚು ಸದೃಢಗೊಳಿಸಲಾಗುತ್ತಿದೆ ಎಂದು ವಿವರಿಸಿದರು. ಪ್ರತಿ ಪೇಜ್‍ಗೆ ಆರು ಜನರ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು. ಒಂದು ಮಂಡಲದಿಂದ ಇನ್ನೊಂದು ಮಂಡಲಕ್ಕೆ ತೆರಳಿ ಪೇಜ್ ಕಮಿಟಿ ಕಾರ್ಯದ ಪರಿಶೀಲನೆ ನಡೆದಿದೆ. ಬೂತ್ ಅಧ್ಯಕ್ಷರ ನಾಮಫಲಕ ಜೋಡಣೆ ದೇಶದಲ್ಲೇ ಮೊದಲ ಬಾರಿಗೆ ನಡೆದಿದ್ದು, ಶೇ 90ರಷ್ಟು ಕಾರ್ಯ ಮುಕ್ತಾಯವಾಗಿದೆ ಎಂದರು. ಪಕ್ಷದ ಸ್ಥಿತಿಗತಿಯ ಅವಲೋಕನವೂ ನಡೆಯುತ್ತಿದೆ ಎಂದು ತಿಳಿಸಿದರು.

BJP strategy for 150 seats targets in the state assembly election in Karnataka

ಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ ಗಂಗೋತ್ರಿ

ಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ ಗಂಗೋತ್ರಿ ಎಂಬಂತಾಗಿದೆ. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಕಾಲ ಹೊರತುಪಡಿಸಿ ಇತರ ಎಲ್ಲ ಕಾಂಗ್ರೆಸ್ ಪ್ರಧಾನಿಗಳ ಅವಧಿಯಲ್ಲಿ ಒಂದಿಲ್ಲೊಂದು ಭ್ರಷ್ಟಾಚಾರ ಪ್ರಕರಣಗಳು ನಡೆದಿವೆ ಎಂದರು. ಕಾಂಗ್ರೆಸ್ ಮುಕ್ತ ಭಾರತ ಎಂದರೆ ಭ್ರಷ್ಟಾಚಾರದಿಂದ ಮುಕ್ತಿ ಎಂಬ ಅರ್ಥದಲ್ಲಿ ಪ್ರಧಾನಿಗಳಾದ ನರೇಂದ್ರ ಮೋದಿಯವರು ತಿಳಿಸಿದ್ದಾರೆ ಎಂದರು.

ಸರಕಾರ ಎಲ್ಲ ಯೋಚನೆಗಳನ್ನು ಮಾಡುತ್ತಿದೆ. ಗುಜರಾತ್, ಉತ್ತರ ಪ್ರದೇಶ, ಮಧ್ಯಪ್ರದೇಶಗಳಲ್ಲಿ ಗಲಭೆ ನಿಯಂತ್ರಣಕ್ಕೆ ಜಾತಿ ಮತ ಪಂಥ ಇಲ್ಲದೆ ಕ್ರಮ ಕೈಗೊಳ್ಳಲಾಗುತ್ತಿದೆ. ಇಂಥ ಗಲಭೆ ಸೃಷ್ಟಿಸುವುದಕ್ಕೆ, ಸರಕಾರಿ ಕಚೇರಿಗಳಿಗೆ ಬೆಂಕಿ ಹಾಕುವುದಕ್ಕೆ ಮತ್ತು ಪೊಲೀಸರ ಸ್ಥೈರ್ಯ ಕುಸಿತಕ್ಕೆ ಕಾರಣರಾಗುವುದಕ್ಕೆ ಮತ್ತು ಸಮಾಜದ ಧೈರ್ಯ-ಸ್ಥೈರ್ಯ ಕಸಿಯುವುದು ಭಯೋತ್ಪಾದನೆಗೆ ಸಮ. ಅಂಥ ಗಲಭೆಕೋರರ ವಿರುದ್ಧ ಸರಕಾರ ದಿಟ್ಟ ಮತ್ತು ದೃಢವಾದ ಕ್ರಮ ತೆಗೆದುಕೊಳ್ಳಬೇಕು. ಇದು ಪಕ್ಷದ ನಿಲುವು ಎಂದು ಬುಲ್‍ಡೋಸರ್ ಮೂಲಕ ಕ್ರಮ ಕುರಿತ ಪ್ರಶ್ನೆಗೆ ಅವರು ಉತ್ತರಿಸಿದರು.

BJP strategy for 150 seats targets in the state assembly election in Karnataka

ಸರಕಾರದ ಹತ್ತಾರು ಸಾಧನೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಲಾಗಿದೆ. ಕಾಂಗ್ರೆಸ್ ವಿರುದ್ಧ ಇನ್ನೊಂದು ನಿರ್ಣಯ ಅಂಗೀಕರಿಸಲಾಗಿದೆ, ಹಾಸನ, ಹಳೆ ಮೈಸೂರು ಭಾಗದಲ್ಲಿ ಪಕ್ಷವನ್ನು ಇನ್ನಷ್ಟು ಸದೃಢಗೊಳಿಸುವ ಕುರಿತು ಚರ್ಚಿಸಲಾಗಿದೆ. ಕಾಂಗ್ರೆಸ್ ಕಾಲೆಳೆಯುವ, ರಾಜ್ಯದ ಜನತೆಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಗಲಭೆ ಮೂಲಕ ಅಧಿಕಾರ ಪಡೆಯಲು ಯತ್ನಿಸುತ್ತಿದೆ. ವಿರೋಧ ಪಕ್ಷವಾಗಿ ಕಾಂಗ್ರೆಸ್ ಪಕ್ಷ ವಿಫಲವಾಗಿದೆ ಎಂದು ವಿವರಿಸಿದರು.

ಮತೀಯವಾದದ ಹೆಸರಿನಲ್ಲಿ ಬೆಂಕಿ ಹಾಕುವ ಕೆಲಸವನ್ನು ಮಾಡುತ್ತಿದೆ. ಅಧಿಕಾರ ಪಡೆಯಲು ಅರಾಜಕತೆ ಸೃಷ್ಟಿಸುವ ಪ್ರವೃತ್ತಿ ಕಾಂಗ್ರೆಸ್ ಪಕ್ಷದ ಕೆಲಸವಾಗಿದೆ ಡಿಜೆ.ಹಳ್ಳಿ, ಕೆಜಿ.ಹಳ್ಳಿ ಪ್ರಕರಣ, ಹರ್ಷ ಕೊಲೆ ಪ್ರಕರಣ, ಹುಬ್ಬಳ್ಳಿ ಹಿಂಸಾಚಾರದ ಘಟನೆ ಇದಕ್ಕೆ ಉದಾಹರಣೆ ಎಂದು ಕಟೀಲ್‌ ತಿಳಿಸಿದರು.

ಪಿಎಸ್‍ಐ ಹಗರಣದಡಿ ಯಾವುದೇ ಪಕ್ಷದವರಾದರೂ ಬಂಧನ ನಡೆಯುತ್ತಿದೆ ಎಂದ ಅವರು, ರಾಜ್ಯದ ಗೃಹ ಸಚಿವರು ರಾಜೀನಾಮೆ ಕೊಡಬೇಕೆಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಮತ್ತು ರಾಹುಲ್ ಕಾಂಗ್ರೆಸ್ ಬಿಟ್ಟು ಹೊರಬರಲಿ. ಆಗ ಆ ಪಕ್ಷಕ್ಕೆ ಒಳಿತಾದೀತು ಎಂದು ವ್ಯಂಗ್ಯವಾಗಿ ಉತ್ತರ ನೀಡಿದರು.

Recommended Video

ಅಂಪೈರ್ ನೋ ಬಾಲ್ ಕೊಟ್ಟಿದ್ರೆ ಸಾಕಿತ್ತು ಕಥೆನೇ ಬೇರೆಯಾಗ್ತಿತ್ತು ಆದ್ರೆ! | Oneindia Kannada

ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ರಾಜ್ಯದ ಸಚಿವರಾದ ವಿ. ಸೋಮಣ್ಣ, ಆರ್. ಅಶೋಕ್, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ತೇಜಸ್ವಿನಿ ಅನಂತಕುಮಾರ್, ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ, ಶಾಸಕರಾದ ಉದಯ್ ಗರುಡಾಚಾರ್, ಎಲ್. ರವಿಸುಬ್ರಹ್ಮಣ್ಯ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರಾದ ಎನ್.ಆರ್. ರಮೇಶ್ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

English summary
BJP strategy for 150 targets in the state assembly election in Karnataka
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X