ಬಿಜೆಪಿ 18 ಶಾಸಕರ ಅಮಾನತು ಆದೇಶ ರದ್ದಾಗಿಲ್ಲ, ರಾಜ್ಯಪಾಲರು ಮಧ್ಯ ಪ್ರವೇಶಿಸಬೇಕು: ಬಿಜೆಪಿ ನಾಯಕರ ಮನವಿ
ಬೆಂಗಳೂರು, ಏಪ್ರಿಲ್ 28: ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಅಧಿವೇಶನ ವೇಳೆ ಬಿಜೆಪಿ ನಾಯಕರು ವರ್ತನೆ ಹೆಸರಿನಲ್ಲಿ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರು ಬಿಜೆಪಿಯ 18 ಶಾಸಕರನ್ನು ಮುಂದಿನ ಆರು ತಿಂಗಳು ಕಾಲ ಅಮಾನತು ಮಾಡಿ ಆದೇಶಿಸಿದ್ದರು. ಇದೀಗ ಆ ದೇಶ ರದ್ದುಪಡಿಸುವಂತೆ ಕೋರಿ ಬಿಜೆಪಿ ನಾಯಕರು ಗುರುವಾರ ರಾಜ್ಯಪಾಲರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.
ಬೆಂಗಳೂರಿನಲ್ಲಿ ರಾಜಭವನದಲ್ಲಿ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋತ್ ಅವರನ್ನು ಭೇಟಿ ಮಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಕೆಲವು ನಾಯಕರು ಭೇಟಿ ಮಾಡಿ ಮನವಿ ಸಲ್ಲಿಸಿದರು. ಬಳಿಕೆ ಸುದ್ದಿಗಾರರ ಜೊತೆಗೆ ಮಾತನಾಡಿದ ಆರ್.ಅಶೋಕ್ ಅವರು, ಬಿಜೆಪಿಯ 18 ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ರಾಜ್ಯಪಾಲರ ಜೊತೆ ಚರ್ಚಿಸಲಾಗಿದೆ. ರಾಜ್ಯಪಾಲರು ಈ ಕುರಿತು ಸರ್ಕಾರ ಹಾಗೂ ಸ್ಪೀಕರ್ ಜೊತೆ ಚರ್ಚಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಹಿಂದಿನ ಅಧಿವೇಶನದಲ್ಲಿ ಸಚಿವ ರಾಜಣ್ಣ ಅವರ ಹನಿಟ್ರ್ಯಾಪ್ ಕುರಿತು ಹಾಗೂ ಮುಸ್ಲಿಂ ಮೀಸಲಾತಿ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಸ್ಪೀಕರ್ ಯು.ಟಿ.ಖಾದರ್ ಬಿಜೆಪಿಯ ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆ. ದೇಶದಲ್ಲಿ ಕಾಂಗ್ರೆಸ್ ತುರ್ತು ಪರಿಸ್ಥಿತಿಯನ್ನು ತಂದಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಅಧಿವೇಶನದಲ್ಲಿ ಮಾತನಾಡಿ ಎಂದೇ ಜನರು ನಮಗೆ ಮತ ನೀಡಿದ್ದಾರೆ. ನಿತ್ಯದ ಕೆಲಸಗಳಿಗೂ ಈ ಅಮಾನತು ಕ್ರಮ ಅಡ್ಡಿಯಾಗಿದೆ ಎಂದು ಅವರು ರಾಜ್ಯಪಾಲರಲ್ಲಿ ವಿವರಿಸಿದರು.
ಈ ಹಿಂದೆ ಕಾಂಗ್ರೆಸ್ ಶಾಸಕರು ವಿಧಾನಸಭಾ ಪೀಠಕ್ಕೆ ನುಗ್ಗಿದ್ದರು. ಆಗ ಪ್ರಜಾಪ್ರಭುತ್ವದ ಆಶಯದಂತೆಯೇ ಬಿಜೆಪಿ ಸರ್ಕಾರ ನಡೆದುಕೊಂಡಿತ್ತು. ಆಡಳಿತ ಪಕ್ಷದಂತೆ ವಿರೋಧ ಪಕ್ಷವೂ ಮುಖ್ಯ. ಕಾನೂನು ಸಚಿವರ ಜೊತೆಗೆ ಹಾಗೂ ಸ್ಪೀಕರ್ ಜೊತೆಗೆ ಮಾತನಾಡಲಾಗಿದೆ. ಈ ಅಮಾನತು ಆದೇಶವನ್ನು ವಾಪಸ್ ಪಡೆಯಬೇಕೆಂದು ಅವರು ಒತ್ತಾಯಿಸಿದರು. ಸದ್ಯ ಇದೆಲ್ಲ ಅಂಶಗಳನ್ನು ಬಿಜೆಪಿ ನಾಯಕರು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ. ರಾಜ್ಯಪಾಲರು ಸ್ಪೀಕರ್ ಜೊತೆ ಮಾತಾಡುತ್ತೇನೆ ಹಾಗೂ ಪತ್ರ ಬರೆಯುತ್ತೇನೆ ಎಂದ ಹೇಳಿದ್ದಾರೆ. ಅಮಾನತು ಶೀಘ್ರವೇ ಹಿಂಪಡೆಯುವ ವಿಶ್ವಾಸ ಅವರು ವ್ಯಕ್ತಪಡಿಸಿದರು.

ಕಾಶ್ಮೀರದಲ್ಲಿ ನಡೆದ ಪಹಲ್ಗಾಮ್ ದಾಳಿ ಹಾಗೂ ಪಾಕ್ ಮೇಲೆ ಯುದ್ಧ ಕುರಿತು ಕಳೆದ ಮೂರು ದಿನಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಹಿಡಿದು ಸಚಿವರು, ಶಾಸಕರು, ಭಯೋತ್ಪಾದಕ ದಾಳಿಯ ಬಗ್ಗೆ ತಪ್ಪಾಗಿ ಹೇಳುತ್ತಿದ್ದಾರೆ. ಹಿಂದೂ ಧರ್ಮದ ಬಗ್ಗೆ ಕೇಳಿಯೇ ಉಗ್ರರು ಶೂಟ್ ಮಾಡಿದ್ದಾರೆ. ಸಚಿವ ಆರ್.ಬಿ.ತಿಮ್ಮಾಪುರ ಅವರ ಪ್ರಕಾರ, ಉಗ್ರರು ಬಹಳ ಅವಸರದಲ್ಲಿದ್ದು, ಕೂಡಲೇ ಹತ್ಯೆ ಮಾಡಿದ್ದಾರೆ. ಹತ್ಯೆಯಾದ ಕುಟುಂಬದವರೇ ಘಟನೆಯನ್ನು ವಿವರಿಸಿದ್ದಾರೆ. ಇಷ್ಟಿದ್ದರೂ ಧರ್ಮದ ಆಧಾರದಲ್ಲಿ ಮಾಡಿಲ್ಲ ಎನ್ನುತ್ತಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಓಟು ಮುಖ್ಯವೇ ಹೊರತು ರಾಷ್ಟ್ರ ಮುಖ್ಯವಲ್ಲ ಎಂದು ಅವರು ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ಟೀಕಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸಿದರೆ ಅವರನ್ನು ರಥದಲ್ಲಿ ಮೆರವಣಿಗೆ ಮಾಡಿ ಆಹ್ವಾನ ಮಾಡುತ್ತಾರೆ. ಹಾಗೆಯೇ ಅವರಿಗೆ ಪಾಕಿಸ್ತಾನದ ಉನ್ನತ ನಾಗರಿಕ ಪ್ರಶಸ್ತಿ ಕೂಡ ದೊರೆಯುತ್ತದೆ. ಯುದ್ಧವನ್ನು ಸೇನೆ ಹಾಗೂ ಹಿರಿಯ ನಾಯಕರು ತೀರ್ಮಾನಿಸುತ್ತಾರೆ. ಈ ಸಮಯದಲ್ಲಿ ಈ ರೀತಿ ಹೇಳಿಕೆ ನೀಡಬಾರದು ಎಂದರು.
ರೈಲ್ವೆ ಇಲಾಖೆಯ ಪರೀಕ್ಷೆಯಲ್ಲಿ ತಾಳಿ, ಜನಿವಾರ ತೆಗೆಯಬೇಕು ಎಂಬ ಸೂಚನೆ ಬಂದಿದೆ ಎಂಬ ಮಾಹಿತಿ ಇದೆ. ಈ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಬಳಿ ಚರ್ಚಿಸಿದ್ದು, ಈ ರೀತಿ ನಿಯಮ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಬಿವೈವಿ ಮನವಿ
ಬಿಜೆಪಿಯ ಶಾಸಕರ ನಿಯೋಗದೊಂದಿಗೆ ಇಂದು ಸೋಮವಾರ ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿ ವಿಧಾನಸಭಾ ಸಭಾಧ್ಯಕ್ಷರು ಇತ್ತೀಚೆಗೆ ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತುಗೊಳಿಸಿರುವ ವಿಷಯದಲ್ಲಿ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸಲಾಗಿದೆ. ಈ ಕುರಿತು ಗೌರವಾನ್ವಿತ ರಾಜ್ಯಪಾಲರು ಮಧ್ಯ ಪ್ರದೇಶಿಸಬೇಕೆಂದು ಮನವಿ ಮಾಡಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಈಚೆಗೆ ನಡೆದ ಅಧಿವೇಶನದಲ್ಲಿ ಬಿಜೆಪಿಯ 18 ಶಾಸಕರ ಅಮಾನತು ಮಾಡಿರುವ ಆದೇಶವನ್ನು ವಾಪಸ್ ಪಡೆಯುವಂತೆ ಹಲವಾರು ಬಾರಿ ವಿಪಕ್ಷದ ನಾಯಕರು ಮತ್ತು ಶಾಸಕರು ಸಭಾಧ್ಯಕ್ಷರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ. ಆದರೆ ಸಭಾಧ್ಯಕ್ಷರು ಶಾಸಕರ ಅಮಾನತನ್ನು ಹಿಂಪಡೆದಿಲ್ಲ. ಸ್ಪೀಕರ್ ಅವರು ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದು, 18 ಶಾಸಕರ ಅಮಾನತು ತಮ್ಮೊಬ್ಬರ ತೀರ್ಮಾನ ಅಲ್ಲ ಎಂದಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ನಿಲುವಾಗಿದೆ. ಆದ್ದರಿಂದ ರಾಜ್ಯಪಾಲರು ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಬೇಕು. ಅಮಾನತುಗೊಂಡಿರುವ ಬಿಜೆಪಿ ಶಾಸಕರಿಗೆ ನ್ಯಾಯ ಕೊಡಿಸಬೇಕೆಂದು ಕೋರಿದರು.
ಮಾಜಿ ಸಚಿವರಾದ ಗೋಪಾಲಯ್ಯ, ಶಾಸಕರಾದ ರವಿ ಸುಬ್ರಹ್ಮಣ್ಯ, ಎಸ್.ರಘು, ಎಸ್.ಮುನಿರಾಜು, ಉದಯ್ ಗರುಡಾಚಾರ್, ಸಿ.ಕೆ.ರಾಮಮೂರ್ತಿ ಅವರು ಸಹ ರಾಜ್ಯಪಾಲರಿಗೆ ಮನವಿ ಮಾಡಿದರು. ಅಮಾನತು ಹಿಂಪಡೆಯುವಂತೆ ಮಾಡಬೇಕು ಎಂದು ಕೇಳಿಕೊಂಡರು.
ಆದೇಶ ಹಿಂಪಡೆಯುವ ಸುಳಿವು ಕೊಟ್ಟ ಯುಟಿ ಖಾದರ್
ಮಂಗಳೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರು ಬಿಜೆಪಿಯ 18 ಶಾಸಕರ ಅಮಾನತು ಆದೇಶ ಹಿಂಪಡೆಯುವ ಬಗ್ಗೆ ಚರ್ಚೆ ನಡೆಸಿದ್ದೇವೆ. ಈ ವಿಚಾರದಲ್ಲಿ ಕಾಂಗ್ರೆಸ್ ಸಕಾರಾತ್ಮಕವಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಮೂಲಕ ಅಮಾನತು ಆದೇಶ ಹಿಂಪಡೆಯುವ ಸುಳಿವು ಕೊಟ್ಟಿದ್ದಾರೆ.
ಸಂವಿಧಾನ ಪೀಠಕ್ಕೆ ಅಗೌರವ ತೋರಿದ್ದರಿಂದ ಬಿಜೆಪಿಯ 18 ಶಾಸಕರನ್ನು ಆರು ತಿಂಗಳು ಅಮಾನತು ಮಾಡಲಾಗಿದೆ. ಸಮಿತಿ ಸಭೆಯಲ್ಲಿ ಅವರು ಪಾಲ್ಗೊಳ್ಳಲು ಅವಕಾಶ ಇಲ್ಲದಂತಾಗಿದೆ. ಸದ್ಯ ಆದೇಶ ವಾಪಾಸ್ ಪಡೆಯುವ ಕುರಿತು ಯಾವುದೇ ತಿರ್ಮಾನ ಮಾಡಿಲ್ಲ. ಆ ಬಗ್ಗೆ ಚರ್ಚೆ ಆಗುತ್ತದೆ. ಸಂವಿಧಾನಪೀಠಕ್ಕೆ ಅಗೌರವ ತೋರಿದವರಿಗೆ ಶಿಕ್ಷೆ ಆಗಬೇಕು. ಅವರಿಗೆ ತಾವು ಮಾಡಿದ ತಪ್ಪಿನ ಅರಿವಾಗಬೇಕು ಎಂದು ಅವರು ಹೇಳಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications