ಬೆಂಗಳೂರು ದಕ್ಷಿಣ ಮತಎಣಿಕೆ: ತೇಜಸ್ವಿನಿ ಅನಂತ್ ಕುಮಾರ್ ಹೇಳಿಕೆ

ಬೆಂಗಳೂರು, ಮೇ 23: ದೇಶದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ಬೆಂಗಳೂರು ದಕ್ಷಿಣ ಕ್ಷೇತ್ರದ ಮತಎಣಿಕೆ ಚಾಲ್ತಿಯಲ್ಲಿದ್ದು, ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸುತ್ತಿದ್ದ ದಿವಂಗತ ಅನಂತ್ ಕುಮಾರ್ ಪತ್ನಿ, ತೇಜಸ್ವಿನಿ ಗೆಲುವು ನಮ್ಮದೇ ಎಂದು ಟ್ವೀಟ್ ಮಾಡಿದ್ದಾರೆ.

ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ಶುಭ ಕೋರಿರುವ ತೇಜಸ್ವಿನಿ, ಬೆಂಗಳೂರು ದಕ್ಷಿಣ ಕ್ಷೇತ್ರ ಮತ್ತೆ ಬಿಜೆಪಿ ಪಾಲಾಗಲಿದೆ ಎಂದು ಹೇಳಿದ್ದಾರೆ.

BJP will retain Bengalur South for sure, Tejaswini Ananthkumar tweet

1996ರಲ್ಲಿ ಈ ಕ್ಷೇತ್ರ ಬಿಜೆಪಿಗೆ ಒಲಿದಿತ್ತು, ಅಲ್ಲಿಂದ ಆರು ಬಾರಿ ಅನಂತ್ ಕುಮಾರ್ ತಮ್ಮ ಪರಿಶ್ರಮ ಮತ್ತು ಸ್ವಚ್ಛ ಆಡಳಿತದಿಂದಾಗಿ ಸತತವಾಗಿ ಗೆದ್ದಿದ್ದರು ಎಂದು ತೇಜಸ್ವಿನಿ ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅನಂತ್ ಕುಮಾರ್ ಸ್ಪರ್ಧಿಸುವುದು ಬಹುತೇಕ ಖಚಿತ ಎಂದಿತ್ತು. ಆದರೆ, ಕೊನೆಯ ಕ್ಷಣದಲ್ಲಿ ತೇಜಸ್ವಿ ಸೂರ್ಯಗೆ ಬಿಜೆಪಿ ಟಿಕೆಟ್ ನೀಡಿತ್ತು.

ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ಅನಂತ್ ಕುಮಾರ್ ಜೀ ಮತ್ತು ನೀವು ನನ್ನ ಜೀವನದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ವ್ಯಕ್ತಿಗಳು. ನಿಮ್ಮ ಪ್ರೀತಿ ಮತ್ತು ಆಶೀರ್ವಾದಕ್ಕೆ ನಾನು ಆಭಾರಿಯಾಗಿದ್ದೇನೆ ಎಂದು ಧನ್ಯವಾದ ಸಲ್ಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+