ಆರ್. ಆರ್. ನಗರ ಉಪ ಚನಾವಣೆ; ಬಿಜೆಪಿಯ ಮುನಿರತ್ನ ಜಯಭೇರಿ
ಬೆಂಗಳೂರು, ನವೆಂಬರ್ 10 : ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಗೆಲುವು ಸಾಧಿಸಿದ್ದಾರೆ. ಈ ಮೂಲಕ 3ನೇ ಬಾರಿಗೆ ಆರ್. ಆರ್. ನಗರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು.
Recommended Video
ಮಂಗಳವಾರ ಆರ್. ಆರ್. ನಗರ ಕ್ಷೇತ್ರದ ಮತ ಎಣಿಕೆ ಕಾರ್ಯ ನಡೆಯಿತು. ಶ್ರೀ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಿತು. ಮೊದಲ ಸುತ್ತಿನಿಂದಲೇ ಮುನಿರತ್ನ ಅವರು ಮುನ್ನಡೆ ಕಾಯ್ದುಕೊಂಡರು.

ಕಾಂಗ್ರೆಸ್ ಅಭ್ಯರ್ಥಿ ಹೆಚ್. ಕುಸುಮಾ ಮತ್ತು ಮುನಿರತ್ನ ನಡುವೆ ಭಾರಿ ಪೈಪೋಟಿ ನಿರೀಕ್ಷೆ ಮಾಡಲಾಗಿತ್ತು. ಆದರೆ, ಮುನಿರತ್ನ ಅವರು ಭಾರಿ ಮುನ್ನಡೆಯೊಂದಿಗೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕ್ಷೇತ್ರದಲ್ಲಿ 3ನೇ ಬಾರಿಗೆ ಗೆದ್ದಿದ್ದಾರೆ.
ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಬಿಜೆಪಿಯ ಮುನಿರತ್ನ ಅವರು 1,25,734 ಮತಗಳನ್ನು ಪಡೆದು 57,936 ಮತಗಳ ಅಂತರದಿಂದ ಗೆಲುವು ಸಾಧಿಸಿದರು.
25ನೇ (ಕೊನೆ) ಸುತ್ತಿನ ಎಣಿಕೆ ಮುಕ್ತಾಯವಾಗಿದೆ. ಮುನಿರತ್ನ1,25,734 ಮತ. ಕಾಂಗ್ರೆಸ್‌ನ ಹೆಚ್. ಕುಸುಮಾ 67,798 ಮತ. ಜೆಡಿಎಸ್‌ನ ಕೃಷ್ಣಮೂರ್ತಿ10251 ಮತ ಪಡೆದಿದ್ದಾರೆ. ಒಟ್ಟು ಚಲಾವಣೆಯಾದ ನೋಟಾ ಮತಗಳು 2,494.
ಮುನಿರತ್ನ ಹ್ಯಾಟ್ರಿಕ್ ಗೆಲುವು : ಆರ್. ಆರ್. ನಗರ ಕ್ಷೇತ್ರದಲ್ಲಿ ಮುನಿರತ್ನ ಅವರು ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. 2013 ಮತ್ತು 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುನಿರತ್ನ ಆರ್. ಆರ್. ನಗರದಲ್ಲಿ ಗೆಲುವು ಸಾಧಿಸಿದ್ದರು.












Click it and Unblock the Notifications