• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉಪ ಚನಾವಣೆ ಫಲಿತಾಂಶ; ಮುನಿರತ್ನ ಮನೆ ಬಳಿ ಸಂಭ್ರಮಾಚರಣೆ

|

ಬೆಂಗಳೂರು, ನವೆಂಬರ್ 10 : ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭಾರಿ ಮುನ್ನಡೆ ಸಾಧಿಸಿದ್ದಾರೆ. ಮುನಿರತ್ನ ನಿವಾಸದ ಬಳಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

   #Breaking News: ಮುನಿರತ್ನಗೆ ಒಲಿದ 'ರಾಜರಾಜೇಶ್ವರಿ'

   ಆರ್. ಆರ್. ನಗರ, ಶಿರಾ ಉಪ ಚುನಾವಣೆ ಫಲಿತಾಂಶ

   ಮಂಗಳವಾರ ಆರ್. ಆರ್. ನಗರ ಕ್ಷೇತ್ರದ ಮತ ಎಣಿಕೆ ಕಾರ್ಯ ನಡೆಯುತ್ತಿದೆ. 78,735 ಮತಗಳನ್ನು ಸದ್ಯಕ್ಕೆ ಮುನಿರತ್ನ ಅವರು ಪಡೆದಿದ್ದು, ಭಾರೀ ಮುನ್ನಡೆ ಸಾಧಿಸಿದ್ದಾರೆ. ಶ್ರೀ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ.

   ಆರ್. ಆರ್. ನಗರ ಉಪ ಚನಾವಣೆ; ಮುನಿರತ್ನಗೆ ಆರಂಭಿಕ ಮುನ್ನಡೆ

   ಕಾಂಗ್ರೆಸ್‌ ಅಭ್ಯರ್ಥಿ ಹೆಚ್. ಕುಸುಮಾ 36,447 ಮತಗಳನ್ನು ಸದ್ಯಕ್ಕೆ ಪಡೆದಿದ್ದಾರೆ. 12 ಸುತ್ತುಗಳ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ಫಲಿತಾಂಶ ಘೋಷಣೆಗೂ ಮೊದಲೇ ಮುನಿರತ್ನ ನಿವಾಸದ ಬಳಿ ಸಂಭ್ರಮಾಚರಣೆ ನಡೆಯುತ್ತಿದೆ.

   ಶಿರಾ ಉಪ ಚುನಾವಣೆ ಫಲಿತಾಂಶ; ಕಾಂಗ್ರೆಸ್, ಬಿಜೆಪಿ ನೇರ ಪೈಪೋಟಿ

   ಮುನಿರತ್ನ ಅವರು ಸಹ ಮತ ಎಣಿಕೆ ಕೇಂದ್ರಕ್ಕೆ ಹೋಗಿಲ್ಲ. ಮನೆಯಲ್ಲಿಯೇ ಕಾರ್ಯಕರ್ತರ ಜೊತೆ ಫಲಿತಾಂಶವನ್ನು ವೀಕ್ಷಣೆ ಮಾಡುತ್ತಿದ್ದಾರೆ. ನೂರಾರು ಬಿಜೆಪಿ ಕಾರ್ಯಕರ್ತರು ಅವರ ಮನೆ ಮುಂದೆ ಜಮಾಯಿಸಿದ್ದಾರೆ.

   ಆರ್. ಆರ್. ನಗರದಲ್ಲಿ ಮೊದಲ ಸುತ್ತಿನ ಮತ ಎಣಿಕೆಯಿಂದಲೇ ಬಿಜೆಪಿಯ ಮುನಿರತ್ನ ಮುನ್ನಡೆ ಕಾಯ್ದುಕೊಂಡರು. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ನಡೆಯಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು.

   2013, 2018ರಲ್ಲಿ ಎರಡು ಬಾರಿ ಆರ್. ಆರ್. ನಗರದಲ್ಲಿ ಗೆದ್ದಿರುವ ಮುನಿರತ್ನ ಅವರು ಕ್ಷೇತ್ರದಲ್ಲಿ ತಮ್ಮ ಪ್ರಭಾವ ಎಂಥದ್ದು ಎಂಬುದನ್ನು ತೋರಿಸಿದ್ದಾರೆ. ಎರಡು ಬಾರಿ ಕಾಂಗ್ರೆಸ್‌ನಿಂದ ಅವರು ಕಣಕ್ಕಿಳಿದು ಗೆಲುವು ಸಾಧಿಸಿದ್ದರು.

   English summary
   RR Nagar Bypoll Results 2020 Live Updates in Kannada: BJP workers celebrate victory near BJP candidate Munirathna house in Bengaluru.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X