• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್‌ನ ನೆನಪಿಸಿಕೊಳ್ಳುವುದೇ ಬಿಜೆಪಿಯ ಕೆಲಸ; ಡಿಕೆಶಿ

|
Google Oneindia Kannada News

ಬೆಂಗಳೂರು ಜುಲೈ 17: "ಬಿಜೆಪಿ ನಾಯಕರಿಗೆ ಪ್ರತಿ ನಿತ್ಯ ನಮ್ಮ ಪಕ್ಷದ ಸಿದ್ದರಾಮಯ್ಯ ಹಾಗೂ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೇ ಬರುವುದಿಲ್ಲ. ಸಿದ್ದರಾಮಯ್ಯ ಜನ್ಮ ದಿನಾಚರಣೆ ನಂತರ ಒಡೆದು ಹೂಳಾಗಲು ಕಾಂಗ್ರೆಸ್ ಪಕ್ಷ ಮಡಿಕೆಯಲ್ಲ" ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಸದಾಶಿವನಗರದ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, "ಬಿಜೆಪಿಯವರು ನಿತ್ಯ ಮಲಗುವ ಮುನ್ನ ನಮ್ಮನ್ನು ನೆನಪಿಸಿಕೊಳ್ಳಬೇಕು. ಅವರು ನಮ್ಮನ್ನು ಬಹಳ ಪ್ರೀತಿಸುತ್ತಾರೆ. ಹೀಗಾಗಿ ನಮ್ಮನ್ನು ನೆನಪಿಸಿಕೊಳ್ಳುತ್ತಾರೆ" ಎಂದು ಬಿಜೆಪಿಯನ್ನು ಛೇಡಿಸಿದರು.

"ಅಲ್ಲದೇ ಕಾಂಗ್ರೆಸ್ ಪಕ್ಷ ಒಡೆದು ಹೋಳಾಗಲು ಅದು ಕುಂಬಳಕಾಯಿಯು ಅಲ್ಲ, ಮಡಿಕೆಯೂ ಅಲ್ಲ" ಎಂದು ಸಿದ್ದರಾಮಯ್ಯನವರ ಹುಟ್ಟುಹಬ್ಬ ಕಾರ್ಯಕ್ರಮ ನಂತರ ಕಾಂಗ್ರೆಸ್ ಹೋಳಾಗಲಿದೆ ಎಂಬ ಆರೋಪಕ್ಕೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು.

"ಪಿಎಸ್ಐ ಹಗರಣದಲ್ಲಿ ಬಂಧಿತರಾಗಿರುವ ಐಪಿಎಸ್ ಅಧಿಕಾರಿ ಮಂಪರು ಪರೀಕ್ಷೆ ಮಾಡಬೇಕು. ತನಿಖಾಧಿಕಾರಿಗಳು ಕೇವಲ 50 ಜನರನ್ನು ಮಾತ್ರ ಬಂಧಿಸಿದ್ದಾರೆ. ಕಾಂಗ್ರೆಸ್ ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದು, ಅದು ಆಗುತ್ತಿಲ್ಲ. ಕನಿಷ್ಠ ಪಕ್ಷ ಬಂಧಿತರನ್ನು ಸೆಕ್ಷನ್ 164 ಪ್ರಕಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೇಳಿಕೆ ದಾಖಲಿಸಿಕೊಳ್ಳಬೇಕು. ಆರೋಪ ಪಟ್ಟಿಯಲ್ಲಿ ಬೇರೆ ನೇಮಕಾತಿಗಳಲ್ಲಿ ಅಕ್ರಮ ನಡೆದಿದೆ ಎಂದು ಹೇಳಲಾಗಿದ್ದು, ಅವುಗಳ ಸಮಗ್ರ ತನಿಖೆ ನಡೆಸಬೇಕು" ಎಂದ ಒತ್ತಾಯಿಸಿದರು.

ಅಶ್ವಥ್ ನಾರಾಯಣ್ ಭ್ರಷ್ಟ ರಾಜಕಾರಣಿ

ಅಶ್ವಥ್ ನಾರಾಯಣ್ ಭ್ರಷ್ಟ ರಾಜಕಾರಣಿ

"ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಮುಖ್ಯಮಂತ್ರಿಗಳು, ಸಚಿವರ ಪಾತ್ರ ಇಲ್ಲ ಎಂದಾದರೆ ಸೂಕ್ತ ತನಿಖೆ ನಡೆಸಲು ಅವರು ಭಯಪಡುತ್ತಿರುವುದು ಏಕೆ? ಎಂದು ಅವರು ಪ್ರಶ್ನಿಸಿದರು. ಗೃಹ ಸಚಿವರು ಹಾಗೂ ಶಿಕ್ಷಣ ಸಚಿವರ ಒತ್ತಡದ ಮೇರೆಗೆ ಅಭ್ಯರ್ಥಿಗಳನ್ನು ವಿಚಾರಣೆ ಮಾಡದೆ ಕಳುಹಿಸಲಾಗಿತ್ತು. 15 ದಿನಗಳ ನಂತರ ಸಚಿವರು ಹಣ ಹಿಂತಿರುಗಿಸುವುದಾಗಿ ಹೇಳಿ ನಂತರ ಆ ಅಭ್ಯರ್ಥಿಯನ್ನು ಶರಣಾಗತಿ ಮಾಡಿಸಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ್ ಅವರು ರಾಜ್ಯದಲ್ಲೇ ಅತ್ಯಂತ ಭ್ರಷ್ಟ ರಾಜಕಾರಣಿಯಾಗಿದ್ದಾರೆ" ಎಂದು ಡಿ. ಕೆ. ಶಿವಕುಮಾರ್ ಆರೋಪಿಸಿದರು.

ನಿಷ್ಪಕ್ಷಪಾತ ತನಿಖೆ ನಡೆದಿಲ್ಲ

ನಿಷ್ಪಕ್ಷಪಾತ ತನಿಖೆ ನಡೆದಿಲ್ಲ

"ತನಿಖಾಧಿಕಾರಿಗಳು ನಿಷ್ಪಕ್ಷಪಾತ ತನಿಖೆ ಮಾಡುತ್ತಿಲ್ಲ. ಅಧಿಕಾರಿಯೇ ನ್ಯಾಯಾಲಯದ ಮುಂದೆ ಹೇಳಿಕೆ ನೀಡಲು ಸಿದ್ಧವಾಗಿರುವಾಗ ಏಕೆ ಹೇಳಿಕೆಗಳನ್ನು ದಾಖಲಿಸಿಕೊಳ್ಳುತ್ತಿಲ್ಲ ಎಂಬುದು ಗೊತ್ತಾಗಬೇಕಿದೆ. ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರು ಕೆಲವರ ಹೆಸರು ಹಾಗೂ ಹಗರಣ ಹಣದ ಪ್ರಮಾಣದ ಬಗ್ಗೆ ಪ್ರಸ್ತಾಪಿಸಿದ್ದರು. ಶಾಸಕ ಬಸವನಗೌಡ ಯತ್ನಾಳ್ ಅವರು ಕೂಡ ಕೆಲವು ವಿಚಾರ ಹೇಳಿದ್ದರು. ಆದರೂ ಈ ವಿಚಾರವಾಗಿ ಯಾವುದೇ ತನಿಖೆ ನಡೆಯುತ್ತಿಲ್ಲ" ಎಂದು ದೂರಿದರು.

ಸರ್ಕಾರದಲ್ಲಿ ಮೂಲ ಬಿಜೆಪಿಗರು ಕಡಿಮೆ

ಸರ್ಕಾರದಲ್ಲಿ ಮೂಲ ಬಿಜೆಪಿಗರು ಕಡಿಮೆ

"ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯ ಇರುವುದರಿಂದ ಅವರಲ್ಲಿ ಭಯ ಹೆಚ್ಚಾಗಿದೆ. ಹೀಗಾಗಿಯೇ ರಾಷ್ಟ್ರೀಯ ನಾಯಕರು ಪದೇ ಪದೆ ರಾಜ್ಯಕ್ಕೆ ಬಂದು ಹೋಗುತ್ತಿದ್ದಾರೆ. ಮೂಲ ಬಿಜೆಪಿಯವರು ಈ ಸರ್ಕಾರ ನಡೆಸುತ್ತಿಲ್ಲ. ಇದೊಂದು ಮೈತ್ರಿ ಸರ್ಕಾರ ಇದ್ದಂತೆ. ಮುಖ್ಯಮಂತ್ರಿಗಳನ್ನು ಹೊರತುಪಡಿಸಿ ಅನೇಕ ಸಚಿವರು ಕಾಂಗ್ರೆಸ್ ಹಾಗೂ ದಳದಿಂದ ಹೋದ ಶಾಸಕರಾಗಿದ್ದಾರೆ" ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಸಂತೋಷ್ ಕೇಸ್ ಮುಚ್ಚಿ ಹಾಕುವ ಯತ್ನ

ಸಂತೋಷ್ ಕೇಸ್ ಮುಚ್ಚಿ ಹಾಕುವ ಯತ್ನ

"ಆರೋಪ ಮಾಡಿದರೆ ಕಾಂಗ್ರೆಸ್‌ನವರಿಗೆ ನೋಟಿಸ್ ಕೊಡುತ್ತಾರೆ. ಆದರೆ ಬಿಜೆಪಿಯ ಬಸವನಗೌಡ ಯತ್ನಾಳ್ ಹಾಗೂ ಎಚ್. ವಿಶ್ವನಾಥ್ ಭ್ರಷ್ಟಾಚಾರದ ಆರೋಪ ಮಾಡಿದಾಗ ಅವರಿಗೆ ಏಕೆ ನೊಟೀಸ್ ನೀಡಲಿಲ್ಲ?. ಪ್ರಕರಣದಲ್ಲಿ ಪ್ರಭಾವಿ ಸಚಿವರು, ಅಧಿಕಾರಿಗಳ ರಕ್ಷಣೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಆಕ್ರೋಶ ಹೊರ ಹಾಕಿದರು. ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣ ಮುಚ್ಚಿಹಾಕುವ ಎಲ್ಲ ಪ್ರಯತ್ನಗಳು ನಡೆಯುತ್ತಿವೆ. ಕೇವಲ ಈಶ್ವರಪ್ಪ ಮಾತ್ರವಲ್ಲ, ಬೇರೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಬೇರೆ ಸಚಿವರನ್ನೂ ರಕ್ಷಿಸಲಾಗುತ್ತಿದೆ. ಈ ಕಾರಣಕ್ಕೆ ಗುತ್ತಿಗೆದಾರರ ಪತ್ನಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ" ಎಂದು ಡಿ. ಕೆ. ಶಿವಕುಮಾರ್ ಹೇಳಿದರು.

ಕಮಿಷನ್ ಪ್ರಕರಣಕ್ಕೆ ಸಾಕ್ಷಿ ಇದೆ.

ಕಮಿಷನ್ ಪ್ರಕರಣಕ್ಕೆ ಸಾಕ್ಷಿ ಇದೆ.

"ಸಚಿವ ನಿರಾಣಿ, ಕಾರಜೋಳ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಲ್ಲರೂ ಸಂತೋಷ್ ಪಾಟೀಲ್ ಕಾಮಗಾರಿ ಪೂರ್ಣಗೊಳಿಸಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಸಚಿವರ ಅನುಮತಿ ಇಲ್ಲದೆ ಈ ರೀತಿ ಕಾಮಗಾರಿ ಮಾಡಲು ಸಾಧ್ಯವೇ? ಸಚಿವರು ಕಮಿಷನ್ ಕೇಳಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತ ಹೇಳಿಕೊಂಡಿದ್ದಾರೆ. ಇನ್ನು ಕಮಿಷನ್ ವಿಚಾರವಾಗಿ ಸ್ವಾಮೀಜಿಗಳು ಆರೋಪ ಮಾಡಿದ್ದಾರೆ. ಇದಕ್ಕಿಂತ ಬೇರೆ ಸಾಕ್ಷಿ ಏನು ಬೇಕು?" ಪ್ರಶ್ನಿಸಿದರು.

ಆಗ್ನಿಪಥ್: ಬಿಜೆಪಿಯವರ ಮಕ್ಕಳು ಸೇರಿಸಲಿ

ಆಗ್ನಿಪಥ್: ಬಿಜೆಪಿಯವರ ಮಕ್ಕಳು ಸೇರಿಸಲಿ

"ಅಗ್ನಿಪಥ್ ನೇಮಕಾತಿ ಯೋಜನೆ ವಿರೋಧಿಸುವವರು ದೇಶ ವಿರೋಧಿಗಳು ಎಂದು ಹೇಳುತ್ತಾರೆ. ಬಿಜೆಪಿಯವರು ರಾಷ್ಟ್ರೀಯವಾದಿಗಳು ಎಂದ ಮೇಲೆ ಬಿಜೆಪಿ ಮಂತ್ರಿಗಳು ಮೊದಲು ತಮ್ಮ ಮಕ್ಕಳನ್ನು ಯೋಜನೆಯಡಿ ಸೇನೆಗೆ ಸೇರಿಸಲಿ. ಬಡವರ ಮಕ್ಕಳು ಸೇನೆ ಸೇರಬೇಕು. ತಮ್ಮ ಮಕ್ಕಳು ಮಾತ್ರ ಡಾಕ್ಟರ್, ಎಂಜಿನಿಯರ್, ಉದ್ಯಮಿಗಳಾಗಬೇಕಾ?" ಎಂದು ಲೇವಡಿ ಮಾಡಿದರು.

English summary
BJP leaders can't sleep if they don't remember Congress party leaders Siddaramaiah and D. K. Shivakumar in every day. Congress party is not ready to break up after Siddaramaiah's birth anniversary KPCC president D K Shivakumar said
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X