ಸಂಪುಟ ವಿಸ್ತರಣೆಗೂ ಮುನ್ನ ಸಂತೋಷ್, ಸಿಎಂ ಭೇಟಿ: ಚರ್ಚೆ ಏನಾಯ್ತು?

ಬೆಂಗಳೂರು, ಜನವರಿ 25: ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ಕುರಿತು ಗೊಂದಲ ಉಂಟಾಗಿರುವ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಇಂದು ಬೆಳಗ್ಗೆ ಬೆಂಗಳೂರಿನ ಧವಳಗಿರಿ ನಿವಾಸಕ್ಕೆ ಆಗಮಿಸಿದ್ದ ಬಿ.ಎಲ್.ಸಂತೋಷ್ ಸುಮಾರು 20 ನಿಮಿಷಗಳ ಕಾಲ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ. ಇವರಿಬ್ಬರ ಈ ಮಾತುಕತೆ ಭಾರೀ ಕುತೂಹಲ ಹುಟ್ಟಿಸಿದೆ.

ಯಡಿಯೂರಪ್ಪನವರ ಪ್ರಸ್ತಾಪವನ್ನು ಹೈಕಮಾಂಡ್ ಮುಂದಿಡುತ್ತೇನೆ ಎಂದು ಬಿ ಎಲ್ ಸಂತೋಷ್ ತಿಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಹೈಕಮಾಂಡ್ ಒಪ್ಪಿದರೆ ಯಡಿಯೂರಪ್ಪನವರು ದೆಹಲಿಗೆ ತೆರಳುವ ಸಾಧ್ಯತೆ ಇದೆ.

 ಎರಡ್ಮೂರು ದಿನದಲ್ಲಿ ಸಂಪುಟ ವಿಸ್ತರಣೆ

ಎರಡ್ಮೂರು ದಿನದಲ್ಲಿ ಸಂಪುಟ ವಿಸ್ತರಣೆ

ಮುಂದಿನ ಎರಡು ಮೂರು ದಿನದಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಬಿ.ಎಲ್ ಸಂತೋಷ್ ಸಿಎಂ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಸಂಪುಟ ವಿಸ್ತರಣೆ ಬಗ್ಗೆ ಹಲವು ಸುಳಿವುಗಳನ್ನು ಕೊಟ್ಟಿದೆ.

 ಬಿಎಲ್ ಸಂತೋಷ್ ಅವರ ಸೂತ್ರ ಏನು?

ಬಿಎಲ್ ಸಂತೋಷ್ ಅವರ ಸೂತ್ರ ಏನು?

ಬಿ.ಎಲ್. ಸಂತೋಷ್ ಅವರು ಸಂಪುಟ ವಿಸ್ತರಣೆಗೆ 10+2 ರ ಸೂತ್ರ ಪ್ರಸ್ತಾಪಿಸಿದರು ಎಂದು ಹೇಳಲಾಗಿದೆ. ಗೆದ್ದವರಲ್ಲಿ 10 ಮಂದಿಗೆ, ಮೂಲ ಶಾಸಕರ ಪೈಕಿ ಇಬ್ಬರಿಗೆ ಮಂತ್ರಿಗಿರಿ ಕೊಡುವ ಪ್ರಸ್ತಾಪವನ್ನು ಸಂತೋಷ್ ಇಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಆದರೆ ಯಡಿಯೂರಪ್ಪನವರು ಸದ್ಯಕ್ಕೆ ಅರ್ಹರ ಪೈಕಿ 10 ಜನರಿಗೆ ಮಾತ್ರ ಸಚಿವರಾಗಿ ಮಾಡೋಣ, ಉಳಿದವರಿಗೆ ಜೂನ್ ಬಳಿಕ ನೋಡೋಣ ಎಂದು ತಮ್ಮ ಪ್ರಸ್ತಾಪವನ್ನೂ ಬಹಿರಂಗಪಡಿಸಿದ್ರು ಎನ್ನಲಾಗಿದೆ.

 ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದವರಲ್ಲಿ ಎಷ್ಟು ಮಂದಿಗೆ ಸಚಿವ ಸ್ಥಾನ

ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದವರಲ್ಲಿ ಎಷ್ಟು ಮಂದಿಗೆ ಸಚಿವ ಸ್ಥಾನ

ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದವರಲ್ಲಿ ಎಷ್ಟು ಜನರಿಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕು. ಪಕ್ಷ ನಿಷ್ಠರಲ್ಲಿ ಎಷ್ಟು ಜನರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು, ಸೋತವರಿಗೂ ಅವಕಾಶ ಕೊಡಬೇಕಾ? ಅರ್ಹ ಶಾಸಕರಲ್ಲಿ ಮನೆ ಮಾಡಿರುವ ಅಸಮಾಧಾನ, ಹಾಲಿ ಸಚಿವರಿಂದ ಕೆಲ ಖಾತೆಗಳನ್ನು ವಾಪಸ್ ಪಡೆಯುವ ವಿಚಾರಗಳನ್ನು ಉಭಯ ನಾಯಕರು ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ದೆಹಲಿಗೆ ಬರುವಂತೆ ಹೈಕಮಾಂಡ್ ಆಹ್ವಾನಿಸಿದರೆ ಇಬ್ಬರೂ ಸೇರಿ ವರಿಷ್ಠರ ಜೊತೆ ಚರ್ಚೆ ನಡೆಸುವ ಬಗ್ಗೆಯೂ ಉಭಯ ನಾಯಕರು ಮಾತಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಉನ್ನತ ಮೂಲಗಳಿಂದ ಲಭ್ಯವಾಗಿದೆ.

 ಕುತೂಹಲ ಕೆರಳಿಸಿದ ಸಂತೋಷ್, ಸಿಎಂ ಭೇಟಿ

ಕುತೂಹಲ ಕೆರಳಿಸಿದ ಸಂತೋಷ್, ಸಿಎಂ ಭೇಟಿ

ಸಿಎಂ ದೆಹಲಿಗೆ ತೆರಳುವ ಸಾಧ್ಯತೆ ಹಿನ್ನೆಲೆಯಲ್ಲಿ ಸಂತೋಷ್ ಭೇಟಿ ಕುತೂಹಲ ಕೆರಳಿಸಿದೆ. ದಾವೋಸ್ ನಿಂದ ವಾಪಸ್ ಬಂದ ಬಿಎಸ್‍ವೈ ಅವರ ಕುಶಲೋಪರಿಯನ್ನೂ ಇದೇ ವೇಳೆ ವಿಚಾರಿಸಿದ್ದಾರೆ. ಇದೇ ನೆಪದಲ್ಲಿ ಸಂಪುಟ ಕುರಿತು ಮಹತ್ವದ ಚರ್ಚೆ ಮಾಡಿದ್ದಾರೆ. ಮಾತುಕತೆ ಬಳಿಕ ತಮ್ಮ ನಿವಾಸದ ಹೊರಗೆ ಬಂದು ಬಿ.ಎಲ್ ಸಂತೋಷ್ ರನ್ನು ಬೀಳ್ಕೊಟ್ಟರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+