ಸಂಪುಟ ವಿಸ್ತರಣೆ: ಯಡಿಯೂರಪ್ಪ, ಬಿಎಲ್ ಸಂತೋಷ್ ಮಹತ್ವದ ಭೇಟಿ
ಬೆಂಗಳೂರು, ಡಿಸೆಂಬರ್ 16: ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ಹೊಸ್ತಿಲಲ್ಲಿರುವಾಗಲೇ ಬಿಜೆಪಿಯ ಸಂಘಟನಾ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.
ಸೋಮವಾರ ಬೆಳಗ್ಗೆ ಸಿಎಂ ನಿವಾಸ ಧವಳಗಿರಿಯಲ್ಲಿ ಬಿಎಲ್ ಸಂತೋಷ್ ಭೇಟಿ ಕೊಟ್ಟಿದ್ದರು.ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬಳಿಕ ಸಂತೋಷ್ ಮೊದಲ ಬಾರಿಗೆ ಯಡಿಯೂರಪ್ಪನವರನ್ನ ಭೇಟಿಯಾಗಿದ್ದಾರೆ.
ಸಚಿವ ಸಂಪುಟ ವಿಸ್ತರಣೆಯ ಹೊಸ್ತಿಲ್ಲೇ ಬಿಎಸ್ ವೈ ಮತ್ತು ಸಂತೋಷ್ ಭೇಟಿ ಮಹತ್ವ ಪಡೆದುಕೊಂಡಿದೆ.ಸುಮಾರು 20 ನಿಮಿಷಗಳ ಕಾಲ ಯಡಿಯೂರಪ್ಪ ಅವರ ಜೊತೆ ಸಂತೋಷ್ ಮಾತುಕತೆ ನಡೆಸಿದ್ದಾರೆ. ಸಂಕ್ರಾಂತಿ ಬಳಿಕವೇ ಸಂಪುಟ ವಿಸ್ತರಣೆ ನಡೆಯಲಿದೆ ಎನ್ನುವ ಮಹತ್ವದ ಸುದ್ದಿ ಹೊರಬಿದ್ದಿದೆ.

ಹದಿನೈದು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಹೊರಬಂದ ಬಳಿಕ ಸಂಪು ವಿಸ್ತರಣೆಯೇ ದೊಡ್ಡ ತಲೆನೋವಾಗಿ ಹೋಗಿತ್ತು. ಅನರ್ಹ ಶಾಸಕರಿಂದಲೇ ಸರ್ಕಾರ ರಚನೆಯಾಗಿದೆ ಎಂದು ಅವರಿಗೆ ಸಚಿವ ಸ್ಥಾನ ನೀಡಿದರೆ ಮೂಲ ಬಿಜೆಪಿಗರು ಮುನಿಸಿಕೊಳ್ಳುತ್ತಾರೆ ಎನ್ನುವ ತಲೆನೋವು ಕೂಡ ಇನ್ನೂ ಮುಂದುವರೆದಿದೆ.











Click it and Unblock the Notifications