ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಔಷಧಿ ಕಳುವು

|
Google Oneindia Kannada News

ಬೆಂಗಳೂರು, ಜೂ. 02: ವಿಕ್ಟೋರಿಯ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಔಷಧ ಇಲ್ಲದೇ ವೈದ್ಯರು ಪರದಾಡುತ್ತಿದ್ದಾರೆ. ಆದರೆ, ಕಳ್ಳರು ವಿಕ್ಟೋರಿಯಾದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ನೀಡಲು ಮೀಸಲಿಟ್ಟಿದ್ದ 10 ವಯಲ್ ಚುಚ್ಚು ಮದ್ದು ಕದ್ದಿರುವ ಸಂಗತಿ ಬೆಳಕಿಗೆ ಬಂದಿದೆ. ಈ ಕುರಿತು ಇದೀಗ ವಿವಿಪುರಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಔಷಧಿ ಕದ್ದವರ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.

ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುವ ಪ್ರತ್ಯೇಕ ವಾರ್ಡ್ ನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಾಡಲಾಗಿದೆ. ಬಡವರು ಇಲ್ಲಿಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾ ಸೋಂಕಿತರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡ ಬೆನ್ನಲ್ಲೇ ನೂರಾರು ರೋಗಿಗಳು ಕಪ್ಪು ಶಿಲೀಂದ್ರ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಅದರಲ್ಲೂ ಈ ರೋಗ ನಿವಾರಕ ಚುಚ್ಚು ಮದ್ದುಗಳು ಕಾಳಸಂತೆಯಲ್ಲಿ ಮಾರಾಟವಾಗುತ್ತಿವೆ.

Bengaluru: Black fungus drug stolen at Victoria Hospital in Bengaluru

Recommended Video

ಭಾರತೀಯರಿಗೆ ಹೊಸ ಭರವಸೆ ಮೂಡಿಸಿದ ರಷ್ಯಾ ಲಸಿಕೆ | Sputnik light | Oneindia Kannada

ಇಂಥ ಸಂಕಷ್ಟ ಪರಿಸ್ಥಿತಿಯಲ್ಲಿ ಬ್ಲ್ಯಾಕ್ ಫಂಗಸ್ ನಿವಾರಣೆಗೆ ಇಟ್ಟಿದ್ದ ಹತ್ತು ಚುಚ್ಚು ಮದ್ದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕಳವು ಮಾಡಲಾಗಿದೆ. ಬ್ಲ್ಯಾಕ್ ಫಂಗಸ್ ರೋಗದ ಚುಚ್ಚು ಮದ್ದಿಗೆ ಇರುವ ಬೇಡಿಕೆ ಅರಿತವರೇ ಕದ್ದು ಮಾರಾಟ ಮಾಡಿಕೊಂಡಿದ್ದಾರೆ. ರಾತ್ರಿ ಪಾಳಿಯಲ್ಲಿ ಕೆಲಸ ಮಾಡಿದ ವೈದ್ಯರು, ಇಲ್ಲವೇ ಸಿಬ್ಬಂದಿಯೇ ಕಳುವು ಮಾಡಿರುವ ಅನುಮಾನ ವ್ಯಕ್ತವಾಗಿದೆ. ಈ ಕುರಿತು ಸಿಸಿಟಿವಿ ಹಾಗೂ ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ.

English summary
Black fungus drug stolen at Victoria Hospital in Bengaluru know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X