ಶಾಸಕ ಮುನಿರತ್ನ ನಿವಾಸದ ಬಳಿ ಸ್ಫೋಟ, 1 ಸಾವು

ಬೆಂಗಳೂರು, ಮೇ 19 : ಕಾಂಗ್ರೆಸ್ ಶಾಸಕ ಮುನಿರತ್ನ ನಿವಾಸದ ಬಳಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ವೈಯಾಲಿಕಾವಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಮುನಿರತ್ನ ಅವರ ನಿವಾಸದ ಬಳಿ ಭಾನುವಾರ ಬೆಳಗ್ಗೆ 9.20ರ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ.

ಮೃತಪಟ್ಟ ವ್ಯಕ್ತಿಯನ್ನು ವೆಂಕಟೇಶ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಭೇಟಿ ನೀಡಿದ್ದಾರೆ. ಬಾಂಬ್ ಪತ್ತೆ ದಳ, ಶ್ವಾನದಳಗಳು ಭೇಟಿ ನೀಡಿದ್ದು ಪರಿಶೀಲನೆ ನಡೆದಿದೆ.

Blast near MLA Munirathna house, one dead

ಸ್ಫೋಟದ ತೀವ್ರತೆಗೆ ವ್ಯಕ್ತಿಯ ದೇಹ ಛಿದ್ರವಾಗಿದೆ. ಸ್ಫೋಟ ನಡೆದ ಸ್ಥಳದ ಮನೆಯ ಸುತ್ತಮುತ್ತಲಿನ ಕಿಟಿಕಿಗಾಜುಗಳು ಪುಡಿಯಾಗಿವೆ. ಯಾವ ವಸ್ತುವನ್ನು ಬಳಸಿ ಸ್ಫೋಟ ನಡೆಸಲಾಗಿದೆ? ಎಂಬುದು ಇನ್ನೂ ತಿಳಿದುಬಂದಿಲ್ಲ.

ಘಟನೆ ಕುರಿತು ಟಿ.ಸುನೀಲ್ ಕುಮಾರ್ ಅವರು ಮಾಹಿತಿ ನೀಡಿದ್ದು, '9.20ರ ಸುಮಾರಿಗೆ ರಸ್ತೆಯ ಬದಿಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ಯಾವ ವಸ್ತು ಬಳಸಲಾಗಿದೆ ಎಂಬುದನ್ನು ಪರಿಶೀಲನೆ ನಡೆಸಲಾಗುತ್ತಿದೆ. ವೆಂಕಟೇಶ್ ಅವರು ನಡೆದುಕೊಂಡು ಬರುವಾಗ ಸ್ಫೋಟ ಸಂಭವಿಸಿದ್ದು, ಅವರು ಮೃತಪಟ್ಟಿದ್ದಾರೆ' ಎಂದು ಹೇಳಿದರು.

ಮನೆಗೆಲಸ ಮಾಡುತ್ತಿದ್ದ ವೆಂಕಟೇಶ್ (45) ಸ್ಫೋಟದಿಂದಾಗಿ ಮೃತಪಟ್ಟಿದ್ದಾರೆ. ವೆಂಕಟೇಶ್ ವೈಯಾಲಿಕಾವಲ್‌ನ ದೋಬಿಗಾಟ್‌ನಲ್ಲಿ ಕುಟುಂಬಸ್ಥರ ಜೊತೆ ವಾಸವಾಗಿದ್ದರು. ಇಂದು ಬೆಳಗ್ಗೆ ಮೊಬೈಲ್‌ನಲ್ಲಿ ಮಾತನಾಡುತ್ತಾ ಹೋಗುತ್ತಿರುವಾಗ ಸ್ಫೋಟಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+