Get Updates
Get notified of breaking news, exclusive insights, and must-see stories!

Namma Metro Updates: ಗುಟ್ಕಾ, ಪಾನ್ ಮಸಾಲ ಬಳಕೆ ವಿರುದ್ಧ ನಮ್ಮ ಮೆಟ್ರೋ ಮಹತ್ವದ ನಿರ್ಧಾರ: ಆದೇಶ

ಬೆಂಗಳೂರು, ಏಪ್ರಿಲ್ 23: ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆ ಏರಿಕೆ ಆಗುತ್ತಿದೆ. ಇತ್ತಿಚೆಗೆ ಚಲಿಸುವ ಮೆಟ್ರೋ ರೈಲಿನಲ್ಲಿ ಪ್ರಯಾಣಿಕರೊಬ್ಬರು ಗುಟ್ಕಾ ತಿನ್ನುವ ವಿಡಿಯೋವೊಂದು ವೈರಲ್ ಆಗಿತ್ತು. ಸಹ ಪ್ರಯಾಣಿಕರು ಬುದ್ಧಿ ಹೇಳಿದ್ದರು. ಇದರ ಬೆನ್ನಲ್ಲೆ ಗುಟ್ಕಾ, ಪಾನ್‌ ಮಸಲಾ ತಿನ್ನುವವರ ವಿರುದ್ಧ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕುರಿತು ಮೆಟ್ರೋ ಅಧಿಕಾರಿಗಳು ಬುಧವಾರ ಮಾಹಿತಿ ನೀಡಿದ್ದಾರೆ.

ಬೆಂಗಳೂರು ನಮ್ಮ ಮೆಟ್ರೋ (Namma Metro updates) ನಿಲ್ದಾಣಗಳು ಮತ್ತು ರೈಲುಗಳಲ್ಲಿ ಪ್ರಯಾಣಿಕರು ಗುಟ್ಕಾ ಮತ್ತು ಪಾನ್ ಮಸಾಲಾದಂತಹ ತಂಬಾಕು ಆಧರಿತ ಅಗಿಯಬಹುದಾದ ಉತ್ಪನ್ನಗಳನ್ನು ಜಗಿದು ಉಗುಳುವ ಬಗ್ಗೆ ಸಾರ್ವಜನಿಕ ದೂರುಗಳು ಹೆಚ್ಚಾಗುತ್ತಿವೆ.

BMRCL Cracks Down on Tobacco Use in Namma Metro Stations Fine for Consuming Gutka Pan masala

ಈ ಸಮಸ್ಯೆಯ ಪರಿಹಾರಕ್ಕಾಗಿ ಮತ್ತು ಮೆಟ್ರೋ ಆವರಣದಲ್ಲಿ ಉಗುಳುವುದು ಮತ್ತು ಕಸ ಹಾಕುವುದನ್ನು ತಪ್ಪಿಸುವುದಕ್ಕಾಗಿ, ಜನದಟ್ಟಣೆ ಇಲ್ಲದ ಸಮಯಗಳಲ್ಲಿ ಗಸ್ತು ತಿರುಗುವುದನ್ನು ಬಲಪಡಿಸಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ. ಈಗ ಎಲ್ಲಾ ರೈಲುಗಳು ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಕಣ್ಣಾವಲು ಹೆಚ್ಚಿಸುವ ಕ್ರಮ ಕೈಗೊಳ್ಳಲಾಗುವುದು.

ಇದಲ್ಲದೇ ತಪ್ಪಿತಸ್ಥ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ನಿಯಮಗಳ ಪ್ರಕಾರ ದಂಡ ವಿಧಿಸಲಾಗುವುದು. ಅಂತಹ ವಸ್ತುಗಳನ್ನು ಲೋಹ ಶೋಧಕಗಳ ಮೂಲಕ ಪತ್ತೆಹಚ್ಚಲು ಸಾಧ್ಯವಾಗದ ಕಾರಣ, ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಅನುಮಾನ ಬಂದ ಜಾಗಗಳಲ್ಲಿ ಆಗಾಗ್ಗೆ ತಪಾಸಣೆಗಳನ್ನು ಜಾರಿಗೆ ತರಲು BMRCL ಅಧಿಕಾರಿಗಳು ನಿರ್ಧರಿಸಿದ್ದಾರೆ.

ಮೆಟ್ರೋ ನಿಲ್ದಾಣದ ಒಳಗೆ ಗುಟ್ಕಾ, ತಂಬಾಕು ಉತ್ಪನ್ನ ತರುವವರು ಮತ್ತು ಅದನ್ನು ಜಗಿಯುವ ಪ್ರಯಾಣಿಕರನ್ನು ಸೂಕ್ಷ್ಮ ರೀತಿಯಲ್ಲಿ ಗಮನಿಸಲು ಜೊತೆಗೆ ಜನರೊಂದಿಗೆ ಈ ಕುರಿತು ಸಂವೇದನಾಶೀಲ ನಡವಳಿಕೆ ಹೊಂದಬೇಕಿದೆ. ಈ ಸಂಬಂಧ ಪ್ಲಾಟ್‌ಫಾರ್ಮ್ ಭದ್ರತಾ ಸಿಬ್ಬಂದಿಗೆ ತರಬೇತಿ ನೀಡಲಾಗುವುದು. ಪ್ರಯಾಣಿಕರ ನಡವಳಿಕೆಯನ್ನು ಗಮನಿಸುವುದರ ಜೊತೆಗೆ ಯಾವುದೇ ಉಲ್ಲಂಘನೆಗಳನ್ನು ಗಮನಿಸಿದ ಕೂಡಲೇ ಸಂಬಧಿಸಿದ ಪ್ಲಾಟ್‌ಫಾರ್ಮ್ ಭದ್ರತಾ ಸಿಬ್ಬಂದಿಗೆ ಎಚ್ಚರಿಕೆ ನೀಡಲು ಕೇಂದ್ರ ಭದ್ರತಾ ಕಾವಲು ಕೊಠಡಿಗೆ ಈಗಾಗಲೇ ಸೂಚನೆ ನೀಡಲಾಗಿದೆ.

ಹೆಚ್ಚುವರಿಯಾಗಿ, ಎಲ್ಲ ಮೆಟ್ರೋ ಪ್ರಯಾಣಿಕರಿಗೆ ಸ್ವಚ್ಛ ಮತ್ತು ಹೆಚ್ಚು ಆಹ್ಲಾದಪೂರ್ಣ ಪ್ರಯಾಣಾನುಭವದ ಖಾತ್ರಿಮಾಡಿಕೊಳ್ಳಲು, ಮೆಟ್ರೋ ಆವರಣದಲ್ಲಿ ಅಗಿಯಬಹುದಾದ ತಂಬಾಕು ಆಧರಿತ ಉತ್ಪನ್ನಗಳನ್ನು ಬಳಸದಂತೆ ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸಲು ವ್ಯಾಪಕ ಜಾಗೃತಿ ಅಭಿಯಾನಗಳನ್ನು ಪ್ರಾರಂಭಿಸುವುದರ ಬಗ್ಗೆ BMRCL ಮಹತ್ವದ ಯೋಜನೆ ಆರಂಭಿಸಲಿದೆ. ಈ ಮೂಲಕ ಜಾಗೃತಿ ಮೂಡಿಸಲು ಮುಂದಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+