10 ರೂ ನಾಣ್ಯವನ್ನು ನಿರಾಕರಿಸುವಂತಿಲ್ಲ: ಬಿಎಂಆರ್ಸಿಎಲ್ ಸೂಚನೆ
Recommended Video

ಬೆಂಗಳೂರು, ಆಗಸ್ಟ್ 9: ಹತ್ತು ರೂಪಾಯಿ ನಾಣ್ಯವನ್ನು ಸ್ವೀಕರಿಸಲು ಎಲ್ಲರೂ ಹಿಂದುಮುಂದು ನೋಡುತ್ತಾರೆ, ಆರ್ಬಿಐ ಈ ಕುರಿತು ಸ್ಪಷ್ಟನೆ ನೀಡಿದ್ದರೂ ಕೂಡ ಹತ್ತು ರೂಪಾಯಿ ನಾಣ್ಯವನ್ನು ಎಲ್ಲಿಯೂ ಸ್ವೀಕರಿಸುವುದಿಲ್ಲ.
ನಮ್ಮ ಮೆಟ್ರೋದ ಹೊಸ ಪಾರ್ಕಿಂಗ್ನಲ್ಲಿ ಶುಲ್ಕ ಪಾವತಿಸುವಾಗ 10 ರೂ. ನಾಣ್ಯ ನಿರಾಕರಿಸಿದ ಗುತ್ತಿಗೆ ಕಂಪನಿಗೆ ಕಟ್ಟುನಿಟ್ಟಿನ ಸೂಚನೆಯನ್ನು ಮೆಟ್ರೋ ನಿಗಮ ನೀಡಿದೆ.
ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ವಿಕೆಡ್ ರೈಡ್ ಕಂಪನಿಗೆ ಹೊಸದಾಗಿ ಗುತ್ತಿಗೆ ನೀಡಲಾಗಿದೆ. ಮೈಸೂರು ರಸ್ತೆಯಿಂದ ಬೈಯಪ್ಪನಹಳ್ಳಿಗೆ ಪ್ರತಿ ನಿತ್ಯ ಲಕ್ಷಾಂತರ ಜನರು ಸಂಚರಿಸುತ್ತಾರೆ.

ಜನದಟ್ಟಣೆ ವಿಪರೀತವಾಗಿದೆ. ನಿಲ್ದಾಣದಲ್ಲಿ ದ್ವಿಚಕ್ರ ವಾಹನ ಪಾರ್ಕಿಂಗ್ ಮಾಡಿ ವೈಟ್ಫೀಲ್ಡ್ ಕಡೆ ಹೋಗುವ ಉದ್ಯೋಗಿಗಳು ಹೆಚ್ಚಿದ್ದಾರೆ. ಹೊಸದಾಗಿ ಪಾರ್ಕಿಂಗ್ ಮಾಡಿ ವೈಟ್ಫೀಲ್ಡ್ ಕಡೆ ಹೋಗುವ ಉದ್ಯೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ಹೊಸದಾಗಿ ಪಾರ್ಕಿಂಗ್ ವ್ಯವಸ್ಥೆಯಾದ ಬಳಿಕ 10 ರೂ. ನಾಣ್ಯ ಸ್ವೀಕರಿಸದ ಸಮಸ್ಯೆ ಬೆಳಕಿಗೆ ಬಂದಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಸೂಚನೆ ಪ್ರಕಾರ 10 ರೂ. ನಾಣ್ಯವನ್ನು ವಿನಿಮಯ ಮಾಡಿಕೊಳ್ಳದಿರುವುದು ತಪ್ಪಾಗುತ್ತದೆ ಎಂದು ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ಪ್ರಯಾಣಿಕರೊಬ್ಬರು ಬೈಕ್ ಪಾರ್ಕಿಂಗ್ ಶುಲ್ಕವಾಗಿ 10 ರೂ. ನಾಣ್ಯವನ್ನು ನೀಡಿದ್ದರು. ಇದನ್ನು ಸಿಬ್ಬಂದಿ ತೆಗೆದುಕೊಂಡಿರಲಿಲ್ಲ. ನಂತರ ಯಾರೂ ಕೂಡ ತೆಗೆದುಕೊಳ್ಳುತ್ತಿಲ್ಲ ಹಾಗಾಗಿ ನಾವು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದರು.
ನಂತರ ಪ್ರಯಾಣಿಕರು ಬಿಎಂಆರ್ಸಿಎಲ್ಗೆ ಟ್ವಿಟ್ಟರ್ ಮೂಲಕ ದೂರು ಸಲ್ಲಿಸಿದ್ದರು. ದೂರನ್ನು ಗಂಭೀರವಾಗಿ ಪರಿಗಣಿಸಿರುವ ನಿಗಮ 10 ರೂ. ನಾಣ್ಯವನ್ನು ಕಡ್ಡಾಯವಾಗಿ ಸ್ವೀಕರಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications