ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಏರ್‌ಪೋರ್ಟ್ ಮೆಟ್ರೋ ಮಾರ್ಗಕ್ಕೆ 141 ಕೋಟಿ ರೂ ವೆಚ್ಚದ ಭೂಮಿ ಖರೀದಿ

|
Google Oneindia Kannada News

ಬೆಂಗಳೂರು, ಏ.1: ನಮ್ಮ ಮೆಟ್ರೋ ಕೆಂಪೇಗೌಡ ಏರ್‌ಪೋರ್ಟ್‌ ಮಾರ್ಗಕ್ಕೆ ಭೂಮಿ ಹಸ್ತಾಂತರ ಪ್ರಕ್ರಿಯೆ ಮುಕ್ತಾಯಗೊಂಡಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸ್ವಾಧೀನಪಡಿಸಿಕೊಂಡಿದ್ದ 1.05 ಲಕ್ಷ ಚದರ ಮೀಟರ್ ಭೂಮಿಯು ಏರ್‌ಪೋರ್ಟ್ ಮೆಟ್ರೋ ಯೋಜನೆಗಾಗಿ ಬಿಎಂಆರ್‌ಸಿಎಲ್ ಗೆ ಹಸ್ತಾಂತರವಾಗಲಿದೆ.

ಒಂದೊಮ್ಮೆ ಮೆಟ್ರೋ ಸ್ಮಾರ್ಟ್‌ಕಾರ್ಡ್ ವಾಪಸ್ ನೀಡಿದರೂ ಹಣ ಮಾತ್ರ ಸಿಗಲ್ಲ ಒಂದೊಮ್ಮೆ ಮೆಟ್ರೋ ಸ್ಮಾರ್ಟ್‌ಕಾರ್ಡ್ ವಾಪಸ್ ನೀಡಿದರೂ ಹಣ ಮಾತ್ರ ಸಿಗಲ್ಲ

ಇದಕ್ಕಾಗಿ ಮೆಟ್ರೋ ನಿಗಮವು ಪ್ರಾಧಿಕಾರಕ್ಕೆ 141 ಕೋಟಿ ರೂ ಪಾವತಿಸಿದೆ. 2008ರಲ್ಲಿ ಹೈಸ್ಪೀಡ್ ರೈಲು ಯೋಜನೆಗಾಗಿ ಬಳ್ಳಾರಿ ರಸ್ತೆಯ ಎಸ್ಟೀಮ್ ಮಾಲ್‌ನಿಂದ ಟ್ರಂಪೆಟ್ ಜಂಕ್ಷನ್‌ವರೆಗೆ 1.05 ಲಕ್ಷ ಚ.ಮೀ ಭೂಮಿಯನ್ನು ಪ್ರಾಧಿಕಾರವು ಸ್ವಾಧೀನಪಡಿಸಿಕೊಂಡಿತ್ತು. ಇದೇ ವೇಳೆ ಮೆಟ್ರೋ ಯೋಜನೆಯೂ ಕೂಡ ಪ್ರಗತಿಯಲ್ಲಿತ್ತು.

BMRCL has purchased 141 crore worth land for Airport metro

ಹೈಸ್ಪೀಡ್ ರೈಲು ಬದಲು ಮೆಟ್ರೋ ಮಾರ್ಗ ನಿರ್ಮಿಸುವುದೇ ಸೂಕ್ತ ಎಂಬ ತೀರ್ಮಾನಕ್ಕೆ ಬರಲಾಗಿತ್ತು. ಹೈಸ್ಪೀಡ್ ರೈಲು ಯೋಜನೆಯನ್ನು ಕೈಬಿಟ್ಟಿದ್ದರೂ ಸ್ವಾಧೀನಪಡಿಸಿಕೊಂಡಿದ್ದ ಭೂಮಿ ಮಾತ್ರ ಪ್ರಾಧಿಕಾರದ ಬಳಿಯೇ ಇತ್ತು.

ಮೆಟ್ರೋ ಹತ್ಬೇಕಾ ಹಾಗಾದರೆ ನಿಮ್ಮ ಸ್ಮಾರ್ಟ್‌ಕಾರ್ಡ್‌ನಲ್ಲಿ 50ರೂ ಇರ್ಲೇಬೇಕು ಮೆಟ್ರೋ ಹತ್ಬೇಕಾ ಹಾಗಾದರೆ ನಿಮ್ಮ ಸ್ಮಾರ್ಟ್‌ಕಾರ್ಡ್‌ನಲ್ಲಿ 50ರೂ ಇರ್ಲೇಬೇಕು

ಮೆಟ್ರೋ ಎರಡನೇ ಹಂತದ ಯೋಜನೆಯಲ್ಲಿ ಗೊಟ್ಟಿಗೆರೆ-ನಾಗವಾರ ಮಾರ್ಗ ನಿರ್ಮಿಸಲಾಗುತ್ತಿದೆ. ಅಂದಾಜು 10,584 ಕೋಟಿ ರೂ ವೆಚ್ಚದ ಮೆಟ್ರೋ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದೆ. ಬಳಿಕ ಇದಕ್ಕೆ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರೆಯಲಿದೆ.

 ಆರು ಬೋಗಿ ಮೆಟ್ರೋ ಸೇವಾವಧಿ ಒಂದು ಗಂಟೆ ವಿಸ್ತರಣೆ ಆರು ಬೋಗಿ ಮೆಟ್ರೋ ಸೇವಾವಧಿ ಒಂದು ಗಂಟೆ ವಿಸ್ತರಣೆ

ಒಟ್ಟು 17 ನಿಲ್ದಾಣಗಳು ಈ ಮಾರ್ಗದಲ್ಲಿ ಬರಲಿದೆ. 2023-24ರ ವೇಳೆಗೆ ಕಾಮಗಾರಿ ಅಂತ್ಯಗೊಳ್ಳುವ ನಿರೀಕ್ಷೆ ಇದೆ.

English summary
BMRCL has purchased 1.05 lakh sq.km land for Kempegowda airport metro. It cross nearly 141 crore rupees.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X