ಮೆಟ್ರೋ ರೈಲು ಇನ್ನುಮುಂದೆ ಪ್ರತಿ 8 ನಿಮಿಷಕ್ಕೊಂದು ಸಂಚರಿಸಲಿದೆ

ಬೆಂಗಳೂರು, ಜು.19: ನಮ್ಮ ಮೆಟ್ರೋದಲ್ಲಿ ದಿನನಿತ್ಯ ಲಕ್ಷಾಂತರ ಮಂದಿ ಸಂಚರಿಸುತ್ತಾರೆ, ಪೀಕ್‌ ಅವಧಿಯಲ್ಲಿ ಪ್ರತಿ ಐದು ನಿಮಿಷ ಅಥವಾ ಮೂರು ನಿಮಿಷಕ್ಕೊಂದು ರೈಲು ಸಂಚರಿಸುತ್ತಿದೆ.

ಆದರೆ ಉಳಿದ ಅವಧಿಗಳಲ್ಲಿ ಪ್ರತಿ 10 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚರಿಸುತ್ತಿದ್ದ ಕಾರಣ ಆ ಅವಧಿಯಲ್ಲಿ ಜನದಟ್ಟಣೆ ಹೆಚ್ಚುತ್ತಿದ್ದು, ಪ್ರಯಾಣಿಕರು ಕಿರಿಕಿರಿ ಅನುಭವಿಸುತ್ತಿದ್ದರು, ಇದನ್ನರಿತ ಮೆಟ್ರೋ ನಿಗಮವು ಪೀಕ್‌ ಅವಧಿ ಹೊರತಪಡಿಸಿ ಉಳಿದ ಅವಧಿಯಲ್ಲಿ ಪ್ರತಿ 8 ನಿಮಿಷಕ್ಕೊಂದು ರೈಲು ಸಂಚಾರ ಮಾಡುವಂತೆ ಸೂಚನೆ ನೀಡಿದೆ.

ಸೋಮವಾರ ಹಾಗೂ ಮಂಗಳವಾರ ಪ್ರತಿ 8 ನಿಮಿಷಕ್ಕೊಂದು ಮೆಟ್ರೋ ಸಂಚರಿಸಿ ತನ್ನ ದಾಖಲೆಯನ್ನು ತಾನೇ ಮುರಿಯುವ ಮೂಲಕ ಮತ್ತೊಂದು ದಾಖಲೆ ನಿರ್ಮಿಸಿದೆ. ಬೆಳಗ್ಗೆ 11.30ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಪ್ರತಿ 10 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚರಿಸುತ್ತಿತ್ತು.

BMRCL increases frequency during non-peak hours

ಸೋಮವಾರ ಮತ್ತು ಮಂಗಳವಾರ ಎರಡೂ ದಿನವೂ ಕೂಡ 311 ಟ್ರಿಪ್‌ಗಳನ್ನು ನಡೆಸಿದೆ. ಮೈಸೂರು ರಸ್ತೆ ಹಾಗೂ ಬೈಯಪ್ಪನಹಳ್ಳಿ ನಡುವಿನ ನೇರಳೆ ಮಾರ್ಗದಲ್ಲಿ 179 ಟ್ರಿಪ್‌ಗಳು, ನಾಗಸಂದ್ರ-ಯಲಚೇನಹಳ್ಳಿ ಹಸಿರು ಮಾರ್ಗದಲ್ಲಿ 132 ಟ್ರಿಪ್‌ಗಳನ್ನು ನಡೆಸಿದೆ. ಈ ಎರಡೂ ದಿನವೂ 4 ಲಕ್ಷಕ್ಕಿಂತಲೂ ಹೆಚ್ಚು ಮಂದಿ ಪ್ರಯಾಣಿಸಿದ್ದಾರೆ ಹಾಗೂ 1.15 ಕೋಟಿ ಆದಾಯ ಗಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+