Get Updates
Get notified of breaking news, exclusive insights, and must-see stories!

ಮಾ. 26ರಿಂದಲೇ ಮೆಜೆಸ್ಟಿಕ್- ನಾಯಂಡಹಳ್ಳಿ ಮೆಟ್ರೊ ರೈಲು ಸಂಚಾರ ಶುರು

ಬೆಂಗಳೂರು, ಮಾರ್ಚ್ 24: ಮೈಸೂರು ರಸ್ತೆಯಿಂದ ಕೆಂಗೇರಿ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್ ಕಾಮಗಾರಿ ಕಾರಣ ಎಂಟು ದಿನಗಳವರೆಗೆ ಸ್ಥಗಿತಗೊಳಿಸಲಾಗಿದ್ದ ಮೆಜೆಸ್ಟಿಕ್ - ನಾಯಂಡಹಳ್ಳಿ ಮಾರ್ಗದ ರೈಲು ಸೇವೆಯನ್ನು ಮಾರ್ಚ್ 26ಕ್ಕೆ ಆರಂಭಿಸುವುದಾಗಿ ಬಿಎಂಆರ್‌ಸಿಎಲ್ ತಿಳಿಸಿದೆ.

ನಿಗದಿತ ಅವಧಿಗಿಂತ ಮೊದಲೇ ಕಾಮಗಾರಿ ಪೂರ್ಣಗೊಳ್ಳುವುದರಿಂದ ಮಾ. 29ರ ಬದಲು ಮಾ. 26ರ ಬೆಳಿಗ್ಗೆ 7 ಗಂಟೆಯಿಂದಲೇ ಮೆಟ್ರೋ ಸೇವೆ ಆರಂಭಿಸುವುದಾಗಿ ತಿಳಿಸಿದೆ.

ಮೈಸೂರು ರಸ್ತೆ-ಕೆಂಗೇರಿ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್ ಕಾಮಗಾರಿ ನಡೆಯುತ್ತಿರುವ ಕಾರಣ ಮಾ. 21ರಿಂದ 28ರವರೆಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಒಂದು ವಾರಗಳ ಕಾಲ ಮೆಜೆಸ್ಟಿಕ್, ನಾಯಂಡಹಳ್ಳಿ ನಡುವೆ ನಮ್ಮ ಮೆಟ್ರೋ ಸಂಚಾರವಿಲ್ಲ ಎಂದು ಬಿಎಂಆರ್‌ಸಿಎಲ್ ಪ್ರಕಟಣೆ ಹೊರಡಿಸಿತ್ತು. ಮಾರ್ಚ್ 29ರ ಬೆಳಿಗ್ಗೆ 7 ಗಂಟೆಗೆ ಮೆಟ್ರೊ ಸೇವೆಯನ್ನು ಪುನರಾರಂಭಿಸುವುದಾಗಿ ತಿಳಿಸಿತ್ತು.

BMRCL Purple Line Metro Train Service Will Resume From March 26 Instead Of March 29

ಇದೀಗ ಶೀಘ್ರ ಕಾಮಗಾರಿ ಮುಗಿಯುತ್ತಿರುವುದರಿಂದ ಮೂರು ದಿನ ಮುನ್ನವೇ ರೈಲು ಸಂಚಾರ ಆರಂಭಿಸುವುದಾಗಿ ಪ್ರಕಟಣೆ ಹೊರಡಿಸಿದೆ.

ಮೈಸೂರು ರಸ್ತೆಯ 7 ಕಿ. ಮೀ. ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರಕ್ಕೆ ದಿನಗಣನೆ ಆರಂಭವಾಗಿದೆ. ಪ್ರಾಯೋಗಿಕ ಸಂಚಾರ ಪೂರ್ಣಗೊಂಡು ಜೂನ್‌ನಲ್ಲಿ ಮಾರ್ಗ ವಾಣಿಜ್ಯ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆ ಇದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+