Tumakuru Metro: ತುಮಕೂರಿಗೆ ನಮ್ಮ ಮೆಟ್ರೋ: ಮೊದಲ ಹೆಜ್ಜೆ ಇಟ್ಟ ಬಿಎಂಆರ್‌ಸಿಎಲ್

ಬೆಂಗಳೂರು, ಮಾರ್ಚ್ 01: ಬೆಂಗಳೂರು ಜನರ ಒಡನಾಡಿಯಾಗಿರುವ ನಮ್ಮ ಮೆಟ್ರೋ ಸದ್ಯದಲ್ಲೇ ತುಮಕೂರು ಜಿಲ್ಲೆಯವರೆಗೂ ವಿಸ್ತಾರವಾಗುತ್ತಿರುವುದು ಕಲ್ಪತರು ನಾಡಿಗೆ ಸಂತಸದ ಸುದ್ದಿಯಾಗಿದೆ. ಇದೀಗ ತುಮಕೂರಿಗೆ ನಮ್ಮ ಮೆಟ್ರೋ ಯೋಜನೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಮೊದಲ ಹೆಜ್ಜೆ ಇಟ್ಟಿದೆ.

ಬೆಂಗಳೂರಿನಿಂದ ತುಮಕೂರಿಗೆ ಮೆಟ್ರೋ ರೈಲು ಸಂಚಾರ ಆರಂಭವನ್ನು ನಿರೀಕ್ಷಿಸುತ್ತಿರುವ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್‌ನಿಂದ ಹೊಸ ಅಪ್ಡೇಟ್‌ ಸಿಕ್ಕಿದೆ. ಉತ್ತರ ಬೆಂಗಳೂರಿನ ಮಾದಾವರದಿಂದ ತುಮಕೂರಿನವರೆಗೆ 52.41 ಕಿ.ಮೀ ಉದ್ದದ ಮೆಟ್ರೋ ಮಾರ್ಗದ ಕಾರ್ಯಸಾಧ್ಯತೆಯನ್ನು ಅಧ್ಯಯನ ಮಾಡಲು ಬಿಎಂಆರ್‌ಸಿಎಲ್ ಬಿಡ್‌ಗಳನ್ನು ಆಹ್ವಾನಿಸಿದೆ.

BMRCL Sets The Ball Rolling For Taking Metro To Tumakuru

ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದ (PPP) ಮಾದರಿಯಡಿಯಲ್ಲಿ ಬಿಡ್ ಆಹ್ವಾನಿಸಲಾಗಿದ್ದು, ಟೆಂಡರ್ ದಾಖಲೆಯನ್ನು ಇಂದಿನಿಂದ (ಮಾರ್ಚ್ 1) ಡೌನ್‌ಲೋಡ್ ಮಾಡಬಹುದಾಗಿದ್ದು, ಬಿಡ್‌ಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 2 ಆಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ ಎಂದು ವರದಿಯಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆ ವೇಳೆ ತುಮಕೂರು ಜಿಲ್ಲೆಗೆ ಮೆಟ್ರೋ ವಿಸ್ತರಿಸುವ ಬಗ್ಗೆ ತಿಳಿಸಿದ್ದರು. ತುಮಕೂರು ಮತ್ತು ದೇವನಹಳ್ಳಿಗೆ ಮೆಟ್ರೋ ಮಾರ್ಗಗಳನ್ನು ಈ ಬಾರಿಯ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿತ್ತು.ಕಳೆದ ವಾರವಷ್ಟೇ ಬಿಎಂಆರ್​ಸಿಎಲ್ ಮೆಟ್ರೋ ಜಾಲಕ್ಕೆ 118 ಕಿಮೀ ಸೇರಿಸುವ ಕಾರ್ಯಸಾಧ್ಯತೆಯನ್ನು ಅಧ್ಯಯನ ಮಾಡಲು ಬಿಡ್‌ಗಳನ್ನು ಆಹ್ವಾನಿಸಿತ್ತು.

ಮಾದಾವರ (ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರ)ದಿಂದ ಕುಣಿಗಲ್ ಕ್ರಾಸ್ ವರೆಗೆ 11 ಕಿ.ಮೀ ದೂರದವರೆಗೆ ಹಸಿರು ಮಾರ್ಗವನ್ನು ವಿಸ್ತರಿಸಲು ರಾಜ್ಯ ಸರ್ಕಾರ ಆರಂಭದಲ್ಲಿ ಯೋಜಿಸಿತ್ತು. ಆದರೆ ಸಚಿವ ಗೃಹ ಸಚಿವ ಜಿ.ಪರಮೇಶ್ವರ್‌ ತಮ್ಮ ತವರು ಜಿಲ್ಲೆ ತುಮಕೂರಿಗೆ ಮೆಟ್ರೋ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ತುಮಕೂರಿಗೆ ಮೆಟ್ರೋವನ್ನು ವಿಸ್ತರಿಸುವುದರಿಂದ ಬೆಂಗಳೂರಿನ ಮೇಲಿನ ಹೊರೆ ಕಡಿಮೆಯಾಗುತ್ತದೆ. ಹಾಗೂ ಖಾಸಗಿ ಕಂಪನಿಗಳು ತುಮಕೂರಿನಲ್ಲಿ ಹೂಡಿಕೆ ಮಾಡಲು ಮುಂದಾಗುತ್ತವೆ ಎಂದು ವಿವರಿಸಿದ್ದರು. ಹೀಗಾಗಿ ನಮ್ಮ ಮೆಟ್ರೋ ತುಮಕೂರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 48ರವರೆಗೆ ವಿಸ್ತರಿಸುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+