ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಸ್ವಾತಂತ್ರ್ಯ ಅಮೃತ ಮಹೋತ್ಸವ: ಆ.15ರಂದು ಬಿಎಂಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿ

|
Google Oneindia Kannada News

ಬೆಂಗಳೂರು ಆಗಸ್ಟ್ 11: 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪ್ರಯಾಣಿಕರಿಗೆ ವಿಶೇಷ ಕೊಡುಗೆಯನ್ನು ಘೋಷಿಸಿದೆ. ನಿಗಮದ ಸಾಮಾನ್ಯ ಬಸ್‌ಗಳಲ್ಲಿ ಆಗಸ್ಟ್ 15ರಂದು ಉಚಿತವಾಗಿ ಪ್ರಯಾಣಿಸಲು ಸಾರ್ವಜನಿಕರಿಗೆ ಅವಕಾಶ ನೀಡಿದೆ. ಜೊತೆಗೆ ಅಂದೇ 300ಹೊಸ ಎಲೆಕ್ಟ್ರಿಕ್ ಬಸ್‌ಗಳನ್ನು ಕಾರ್ಯಾರಂಭಗೊಳಿಸಲು ಬಿಎಂಟಿಸಿ ತೀರ್ಮಾನಿಸಿದೆ.

ಗುರುವಾರ ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಬಿಎಂಟಿಸಿ ನಿಗಮದ ಅಧ್ಯಕ್ಷ ನಂದೀಶ್ ರೆಡ್ಡಿ, "ಆಗಸ್ಟ್ 15ರ ಸೋಮವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಎಂಟಿಸಿಯ 300ಹೊಸ ವಿದ್ಯುತ್ ಚಾಲಿತ (ಎಲೆಕ್ಟ್ರಿಕ್) ವಾಹನಗಳ ಮೊದಲ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ ಎಂದು ತಿಳಿಸಿದರು.

ಭಾರತಕ್ಕೆ ಸ್ವಾತಂತ್ರ್ಯ ದೊರೆತು 75ವರ್ಷ ಪೂರೈಸಿರುವ ಸಂದರ್ಭದಲ್ಲೇ ಬಿಎಂಟಿಸಿ 25ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಆಗಸ್ಟ್ 15ರಂದು ಒಂದು ದಿನ ಉಚಿತ ಬಸ್‌ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಅಂದು ಬಿಎಂಟಿಸಿಯ ಸಾಮಾನ್ಯ ಬಸ್‌ಗಳಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಸಂಚರಿಸಲು ಅವಕಾಶ ನೀಡಲಾಗಿದೆ ಎಂದು ಅವರು ವಿವರಿಸಿದರು.

 Independance day special Free travaling in BMTC all bus

Recommended Video

ಭಾರತ ತಂಡದಲ್ಲಿ ಸಾಕಷ್ಟು ಬದಲಾವಣೆ ಮಾಡಿದ ಬಿಸಿಸಿಐ! | OneIndia Kannada

ಅದಲ್ಲದೇ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) 25ರ್ವ ಪೂರೈಸಿದ್ದರಿಂದ 'ರಜತ ಮಹೋತ್ಸವ' ಆಚರಣೆ ಮತ್ತು ಬಿಎಂಟಿಸಿಯಿಂದ ಒಂದು ದಿನ ಪ್ರಯಾಣಿಕರಿಗೆ ಉಚಿತ ಬಸ್‌ ಸೇವೆ ಕುರಿತು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಪರಿಶೀಲಿಸಿದ ರಾಜ್ಯ ಸರ್ಕಾರ ಬಿಎಂಟಿಸಿ ನೀರ್ಧಾರಕ್ಕೆ ಒಪ್ಪಿಗೆ ಸೂಚಿಸಿತು. ಇದರನ್ವಯ ಆಗಸ್ಟ್ 15ರಂದು ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ಅಂದೇ ಬಿಎಂಟಿಸಿ ರಜತ ಮಹೋತ್ಸವ ಆಚರಣೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ಇನ್ನು ಎಲ್ಲ ಸಾಮಾನ್ಯ ಬಸ್‌ಗಳಲ್ಲಿ ಒಂದು ದಿನದ ಉಚಿತ ಸಂಚಾರ‌ ಸೇವೆ ನೀಡುವುದರಿರಂದ ಬಿಎಂಟಿಸಿ ನಿಗಮಕ್ಕೆ ಅಂದಾಜು ಸುಮಾರು ಮೂರು ಕೋಟಿ ರೂ. ನಷ್ಟವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

English summary
Independence day special Free travelling in BMTC all bus. BMTC has decided to run for 300 Electric bus on August 15th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X