BMTC: ಈ ಹೊಸ ಮಾರ್ಗಗಳಲ್ಲಿ 40 ಬಿಎಂಟಿಸಿ ಬಸ್‌ಗಳ ಸೇವೆ, ಸಮಯಗಳ ವಿವರ ತಿಳಿಯಿರಿ
ಬೆಂಗಳೂರು, ಡಿಸೆಂಬರ್, 24: ಈಗಾಗಲೇ ನಗರದಲ್ಲಿ ಮೆಟ್ರೋ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಿಎಂಟಿಸಿ ಬಸ್‌ಗಳನ್ನು ಬಿಡಲಾಗಿದೆ. ಹಾಗೆಯೇ ಇದೀಗ ಬೆಂಗಳೂರು ಹೊರವಲಯದ ಪ್ರಯಾಣಿಕರ ಅನುಕೂಲಕ್ಕಾಗಿ ವಿವಿಧ ಪ್ರಮುಖ ಸ್ಥಳಗಳಿಂದ ನೈಸ್ ರಸ್ತೆ ಮಾರ್ಗವಾವಗಿ ಎಲೆಕ್ಟ್ರಾನಿಕ್ ಸಿಟಿ ವಿಪ್ರೊ ಗೇಟ್‌ಗೆ ಒಟ್ಟು 65 ಟ್ರಿಪ್ ಬಿಎಂಟಿಸಿ ಬಸ್ ಸಂಚರಿಸಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಹಾಗಾದರೆ ಯಾವೆಲ್ಲ ಮಾರ್ಗಗಳಲ್ಲಿ, ಯಾವ ಸಮಯಕ್ಕೆ ಈ ಬಸ್‌ಗಳ ಸೇವೆ ಇರಲಿದೆ ಎಂದು ಇಲ್ಲಿ ತಿಳಿಯಿರಿ.
ಮಾದಾವರ ಮೈದಾನದಲ್ಲಿ 7 ಮಾರ್ಗಗಳಲ್ಲಿ 40 ಬಸ್‌ಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಚಿಕ್ಕಬಾಣವರದಿಂದ ಹೊಸ ಬಿಎಂಟಿಸಿ ಬಸ್‌ಗಳು ದಾಸರಹಳ್ಳಿ 8ನೇ ಮೈಲಿ, ಅಂದ್ರಹಳ್ಳಿ, ಹೇರೋಹಳ್ಳಿ ಕ್ರಾಸ್, ಸುಂಕದಕಟ್ಟೆ ಮಾರ್ಗವಾಗಿ ಸಮನಹಳ್ಳಿ ಜಂಕ್ಷನ್‌ಗೆ 56 ಟ್ರಿಪ್ ಸಂಚರಿಸಲಿವೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 9ರವರೆಗೆ ಪ್ರತಿ 10 ನಿಮಿಷಕ್ಕೊಮ್ಮೆ ಬಸ್ ಸೌಲಭ್ಯ ಇರಲಿದೆ ಎಂದು ಮಾಹಿತಿ ನೀಡಿದರು.

ಮೆಟ್ರೋ ಪ್ರಯಾಣಕರ ಅನುಕೂಲಕ್ಕಾಗಿ ನಗರದ ವಿವಿಧ ಮೆಟ್ರೋ ನಿಲ್ದಾಣಗಳಿಂದ ಪ್ರಸ್ತುತ 38 ಮಾರ್ಗಗಳಲ್ಲಿ 141 ಮಾರ್ಗಗಳಿಂದ ಒಟ್ಟು 2,264 ಟ್ರಿಪ್ ಕಾರ್ಯಾಚರಣೆ ನಡೆಸುತ್ತಿವೆ. ಜಾಲಾಹಳ್ಳಿ ಮೆಟ್ರೋ ನಿಲ್ದಾಣ ಹಾಗೂ ದಾಸರಹಳ್ಳಿ ಮೆಟ್ರೋ ನಿಲ್ದಾಣಗಳಿಂದ ನಾಲ್ಕು ಮಾರ್ಗಗಳಲ್ಲಿ 104 ಟ್ರಿಪ್‌ಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.












Click it and Unblock the Notifications