ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಾರಿಗೆ ನೌಕರರ ಧರಣಿ: ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 20: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನೌಕರರು ಮತ್ತೊಮ್ಮೆ ರಸ್ತೆಗಿಳಿಯಲಿದ್ದಾರೆ.

ಫೆಬ್ರವರಿ 20ರಂದು ಧರಣಿ ಹಮ್ಮಿಕೊಳ್ಳಲು ನಿರ್ಧರಿಸಿದ್ದು, ಕೆಲಸಕ್ಕೆ ರಜೆ ಹಾಕಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತದೆ.

 ಬಿಎಂಟಿಸಿ ನೌಕರರ ಪ್ರತಿಭಟನೆ: ಬಸ್ ಸಂಚಾರದಲ್ಲಿ ವ್ಯತ್ಯಯವಿಲ್ಲ ಬಿಎಂಟಿಸಿ ನೌಕರರ ಪ್ರತಿಭಟನೆ: ಬಸ್ ಸಂಚಾರದಲ್ಲಿ ವ್ಯತ್ಯಯವಿಲ್ಲ

ಇತ್ತೀಚೆಗಷ್ಟೇ ನೌಕರರು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದ್ದರು. ಆದರೆ ಕೆಲಸಕ್ಕೆ ರಜೆ ಹಾಕದೆ ಪಾಳಿಯಂತೆ ಪ್ರತಿಭಟನೆ ನಡೆಸಿದ್ದರು. ಆದರೆ ಯಾವುದೇ ಪ್ರಯೋಜನವಾಗಿಲ್ಲ.

BMTC And KSRTC Employees To Hold Protest Services May Be Disrupted

ಕಳೆದ ಸಮ್ಮಿಶ್ರ ಸರ್ಕಾರ ಬಿಎಂಟಿಸಿ ನೌಕಕರರ ಒತ್ತಾಯಕ್ಕೆ ಮಣಿಯದೇ ಇದ್ದ ಕಾರಣ ಮತ್ತೆ ಬಿಎಂಟಿಸಿ ನೌಕರರು ಉಪವಾಸ ಸತ್ಯಾಗ್ರಹ ಮಾಡುವುದರ ಮೂಲಕ ಸರ್ಕಾರದ ಮೇಲೆ ಒತ್ತಡ ಏರಲು ತೀರ್ಮಾನಿಸಿದ್ದಾರೆ. ಬಿಎಂಟಿಸಿ ನೌಕರರು ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶವನ್ನ ನೀಡಲಿದ್ದಾರೆ.

ಕಳೆದ ಬಾರಿ ಸಮ್ಮಿಶ್ರ ಸರ್ಕಾರ ಇದ್ದ ಸಂದರ್ಭದಲ್ಲಿ ಪತ್ರ ಚಳುವಳಿ ಮಾಡಿ ನಮ್ಮನ್ನ ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಒತ್ತಾಯಿಸಿದ್ದದರು.ಅಂದು ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇದೀಗ ಧರಣಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

English summary
BMTC and KSRTC bus services may be disrupted on February 20 Due To Employees Protest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X