ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್: ಪರೀಕ್ಷೆಗೆ ಹಾಜರಾಗುವವರಿಗೆ ಉಚಿತ ಸೇವೆ
BMTC Good News: ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯು ಸಿಹಿ ಸುದ್ದಿ ನೀಡಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಘೋಷಿಸಿದೆ. ಹಾಗಾದ್ರೆ, ಪಾಲಿಸಬೇಕಾದ ಪ್ರಮುಖ ಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2 ರ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಉಚಿತವಾಗಿ ಪ್ರಯಾಣಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಿ
ಬರುವ ಏಪ್ರಿಲ್ 30ರಿಂದ ಮೇ 13ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಈ ದಿನಾಂಕಗಳಂದು ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು ಅಲ್ಲಿಂದ ಹಿಂದಿರುಗಲು ಬಿಎಂಟಿಸಿಯ ಸಾಮಾನ್ಯ ಬಸ್‌ಗಳಲ್ಲಿ (ವೇಗದೂತ ಸೇವೆಗಳನ್ನು ಹೊರತುಪಡಿಸಿ) ಉಚಿತವಾಗಿ ಪ್ರಯಾಣಿಸಬಹುದು. ವಿದ್ಯಾರ್ಥಿಗಳು ಬಸ್ ನಿರ್ವಾಹಕರಿಗೆ ತಮ್ಮ ಅಧಿಕೃತ ಪರೀಕ್ಷಾ ಪ್ರವೇಶ ಪತ್ರ ತೋರಿಸುವುದು ಕಡ್ಡಾಯ ಎಂದು ತಿಳಿಸಿದೆ.
ಪರೀಕ್ಷೆಯು ಬೇರೆ ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ಇರುವುದರಿಂದ ಬಿಎಂಟಿಸಿ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಸೌಲಭ್ಯಗಳನ್ನು ಕಲ್ಪಿಸಲಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷೆ-2ರ ವಿದ್ಯಾರ್ಥಿಗಳಿಗೆ ದಿನಾಂಕ ದಿನಾಂಕ 30.04.2026 ರಿಂದ 13.05.2026 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳವರೆಗೂ ಉಚಿತವಾಗಿ ಪ್ರಯಾಣಿಸಬಹುದು ಎಂದು ತಿಳಿಸಿದೆ.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೈಗೊಂಡ ಕ್ರಮಗಳು
* ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು ಅಥವಾ ಪೋಷಕರು ಬಸ್ ನಿಲ್ಲಿಸಲು ಕೋರಿದರೆ, ಅಲ್ಲಿ ಬಸ್ ನಿಲುಗಡೆ ನೀಡಲು ಚಾಲಕ ಮತ್ತು ನಿರ್ವಾಹಕರಿಗೆ ಸೂಚನೆ ನೀಡಲಾಗಿದೆ.
* ಪರೀಕ್ಷಾ ಕೇಂದ್ರಗಳಿರುವ ಮಾರ್ಗಗಳಲ್ಲಿ ಯಾವುದೇ ಟ್ರಿಪ್‌ಗಳು ರದ್ದಾಗದಂತೆ ಕ್ರಮ ವಹಿಸಲಾಗಿದ್ದು, ಅಗತ್ಯವಿದ್ದರೆ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ಸಂಸ್ಥೆ ನಿರ್ಧರಿಸಿದೆ.
* ಪರೀಕ್ಷಾ ದಿನಗಳಂದು ನಿಗದಿತ ಸಮಯದಲ್ಲಿ ವಿದ್ಯಾರ್ಥಿಗಳು ಕೇಂದ್ರ ತಲುಪಲು ಪೂರಕವಾಗಿ ಎಲ್ಲಾ ಮಾರ್ಗಗಳಲ್ಲಿ ಬಸ್ ಸಂಚಾರ ಲಭ್ಯವಿರಲಿದೆ ಎಂದು ಬಿಎಂಟಿಸಿ ತಿಳಿಸಿದೆ. ಇನ್ನೂ ಬಿಎಂಟಿಸಿಯ ಈ ಮಹತ್ವದ ನಿರ್ಧಾರದಿಂದ ವಿದ್ಯಾರ್ಥಿಗಳಿಗೆ ಹೆಚ್ಚು ನೆರವಾಗಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆ - 2 ವೇಳಾಪಟ್ಟಿ
* ಏಪ್ರಿಲ್ 30 - ಕನ್ನಡ, ಅರೇಬಿಕ್
* ಮೇ 02 - ಐಚ್ಛಿಕ ಕನ್ನಡ, ತರ್ಕಶಾಸ್ತ್ರ, ರಸಾಯನಿಕ ಶಾಸ್ತ್ರ
* ಮೇ 04 - ಇಂಗ್ಲೀಷ್
* ಮೇ 05 - ವ್ಯವಹಾರ ಅಧ್ಯಯನ, ಔತಶಾಸ್ತ್ರ, ಶಿಕ್ಷಣ ಶಾಸ್ತ್ರ.
* ಮೇ 06 - ಅರ್ಥಶಾಸ್ತ್ರ, ಜೀವಶಾಸ್ತ್ರ
* ಮೇ 07 - ಇತಿಹಾಸ, ಗಣಿತ, ಗೃಹವಿಜ್ಞಾನ
* ಮೇ 08 - ರಾಜ್ಯಶಾಸ್ತ್ರ, ಗಣಕ ವಿಜ್ಞಾನ
* ಮೇ 09 - ಹಿಂದಿ
* ಮೇ 11 - ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ
* ಮೇ 12 - ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೂಗರ್ಭ ಶಾಸ್ತ್ರ, ಮೂಲ ಗಣಿತ
* ಮೇ 13 - ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್,
* ಮೇ 13 - ಹಿಂದೂಸ್ತಾನಿ ಸಂಗೀತ, ಉಡುಪುಗಳ ತಯಾರಿಕೆ ಮತ್ತು ಗೃಹೋಪಯೋಗಿ ವಸ್ತುಗಳು, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಬ್ಯೂಟಿ ಅಂಡ್ ವೆಲ್‌ನೆಸ್ ಇತ್ಯಾದಿ












Click it and Unblock the Notifications