BMTC Good News: ಪರೀಕ್ಷೆ ವೇಳೆ ಪಿಯುಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಬಸ್ ಸೇವೆ
BMTC Good News: ರಾಜ್ಯ ರಾಜಧಾನಿ ಬೆಂಗಳೂರು ಜೀವನಾಡಿ ಸಾರಿಗೆಗಳಲ್ಲಿ ಒಂದಾಗಿರುವ ಬಿಎಂಟಿಸಿ ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಹೊಸ ಮಾರ್ಗಗಳಲ್ಲಿ ಬಸ್ ಸೇವೆಯನ್ನು ಕಲ್ಪಿಸುತ್ತಿರುತ್ತದೆ. ಇದೀಗ ಪರೀಕ್ಷೆ ವೇಳೆ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ನೀಡಲಾಗುವುದು. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದೆ. ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
2025-26ನೇ ಸಾಲಿನ ಪಿಯುಸಿ ಪರೀಕ್ಷೆ-1ರ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಬಿಎಂಟಿಸಿ ಘೋಷಣೆ ಮಾಡಿದೆ. ಇನ್ನೂ ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ ಎಂದು ತಿಳಿದುಬಂದಿದೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕ್ರಮ
2025-26ನೇ ಸಾಲಿನ ಪಿ.ಯು.ಸಿ ಪರೀಕ್ಷೆ-1 ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆಯಲಿದೆ. ಪರೀಕ್ಷೆಯು ಬೇರೆ ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ಇರುವುದರಿಂದ ಬಿಎಂಟಿಸಿಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿದೆ. ಹಾಗಾದ್ರೆ ವಿದ್ಯಾರ್ಥಿಗಳು ಗಮನಿಸಬೇಕಾದ ಪ್ರಮುಖ ಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಗಮನಿಸಬೇಕಾದ ಪ್ರಮುಖ ಅಂಶಗಳು
* ಪಿಯುಸಿ ಪರೀಕ್ಷೆ-1ರ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
* ಪಿಯುಸಿ ಪರೀಕ್ಷೆ-1ರ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಟ್ರಿಪ್‌ಗಳನ್ನು ಕಾರ್ಯಾಚರಣೆಗೊಳಿಸಲಾಗುವುದು.
* ಹೆಚ್ಚುವರಿ ಟ್ರಿಪ್‌ಗಳನ್ನು ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು.
* ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೋಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ.
ಬಿಎಂಟಿಸಿ ಬಸ್ ಸೇವೆಯ ವಿವರ: ಬಿಎಂಟಿಸಿ ಬಸ್‌ಗಳಲ್ಲಿ ಪ್ರತಿದಿನ ಲಕ್ಷಾಂತರ ಜನ ಪ್ರಯಾಣ ಮಾಡುತ್ತಾರೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳನ್ನು ಸಂಪರ್ಕಿಸುವ ಸಾವಿರಾರು ಮಾರ್ಗಗಳಲ್ಲಿ ಬಿಎಂಟಿಸಿ ಬಸ್‌ಗಳು ಸಂಚರಿಸುತ್ತಿದ್ದು, ಉದ್ಯೋಗಿಗಳು, ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯ ನಾಗರಿಕರು ಸೇರಿದಂತೆ ಎಲ್ಲ ವರ್ಗದ ಜನರು ಈ ಸೇವೆಯನ್ನು ಅವಲಂಬಿಸಿದ್ದಾರೆ.
ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ಸಾಮಾನ್ಯ ಬಸ್‌ಗಳ ಜೊತೆಗೆ ವಾಯುಸೇವಾ (ವೋಲ್ವೋ), ವಜ್ರ, ವಾಯು ವಜ್ರ, ಸುವರ್ಣ ಹಾಗೂ ಎಲೆಕ್ಟ್ರಿಕ್ ಬಸ್‌ಗಳ ಸೇವೆ ಒದಗಿಸುತ್ತಿದೆ. ಸಮಯಪಾಲನೆ, ಸ್ವಚ್ಛತೆ ಮತ್ತು ಭದ್ರತೆಯನ್ನು ಹೆಚ್ಚಿಸಲು ಬಿಎಂಟಿಸಿ ನಿರಂತರವಾಗಿ ಹೊಸ ಕ್ರಮಗಳನ್ನು ಜಾರಿಗೆ ತರುತ್ತಿದೆ. ಡಿಜಿಟಲ್ ಟಿಕೆಟ್ ವ್ಯವಸ್ಥೆ, ಆನ್‌ಲೈನ್ ಪಾಸ್ ನವೀಕರಣ, ಮೊಬೈಲ್ ಅಪ್ಲಿಕೇಶನ್ ಮೂಲಕ ಬಸ್ ಸಮಯ ಮಾಹಿತಿ ಪಡೆಯುವ ಸೌಲಭ್ಯಗಳು ಇದ್ದು, ಪ್ರಯಾಣಿಕರಿಗೆ ತುಂಬಾ ಸಹಾಯ ಆಗಿದೆ.
ವಿದ್ಯಾರ್ಥಿಗಳು ಮತ್ತು ಕಾರ್ಮಿಕರಿಗೆ ರಿಯಾಯಿತಿ ಪಾಸ್ ವ್ಯವಸ್ಥೆ, ಮಹಿಳೆಯರಿಗೆ ವಿಶೇಷ ಸೌಲಭ್ಯಗಳು, ಹಿರಿಯ ನಾಗರಿಕರಿಗೆ ರಿಯಾಯಿತಿ ದರಗಳು ಸೇರಿದಂತೆ ಹಲವು ಯೋಜನೆಗಳನ್ನು ಬಿಎಂಟಿಸಿ ಜಾರಿಗೊಳಿಸಿದೆ. ಜೊತೆಗೆ, ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಹಾಗೂ ಇಂಧನ ಉಳಿತಾಯ ಮಾಡುವ ಮಾಡಲು ಎಲೆಕ್ಟ್ರಿಕ್ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದೆ.
ಅಲ್ಲದೆ, ನಗರದ ಸಂಚಾರ ದಟ್ಟಣೆ ಕಡಿಮೆ ಮಾಡುವಲ್ಲಿ ಬಿಎಂಟಿಸಿ ಬಸ್ ಸೇವೆ ಮಹತ್ವದ ಪಾತ್ರವಹಿಸಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications