ಬಿಎಂಟಿಸಿ ಬಸ್ ಬ್ರೇಕ್ ಫೇಲ್, ಸರಣಿ ಅಪಘಾತ: ಓರ್ವ ಸಾವು

ಬೆಂಗಳೂರು, ಜನವರಿ 6: ಬಿಎಂಟಿಸಿ ಬಸ್‌ ಆಟೋ ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೊಟ್ಟಿಗೆಪಾಳ್ಯದಲ್ಲಿ ನಡೆದಿದೆ.

ಬಿಎಂಟಿಸಿ ಬಸ್ ಬ್ರೇಕ್ ಫೇಲ್ ಆಗಿ ಆಟೋ ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ, ಈ ಸಂದರ್ಭದಲ್ಲಿ ಹಲವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಆಗಮಿಸಿದ್ದು, ಪ್ರಕರಣ ದಾಖಲಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

BMTC Bus Accident One Man Died On The Spot

ಬಸ್ ಬ್ರೇಕ್ ಫೇಲ್ ಆಗಿ ಈ ಅಪಘಾತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಹತ್ತಕ್ಕೂ ಹೆಚ್ಚು ವಾಹನಗಳು ಜಖಂ ಆಗಿವೆ. ಕೊಟ್ಟಿಗೆಪಾಳ್ಯದ ಒಂದು ಬದಿ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದೆ. ಇಳಿಜಾರು ಪ್ರದೇಶದಲ್ಲಿ ಬರುತ್ತಿದ್ದಂತೆ ಬಸ್ ಬ್ರೇಕ್ ಫೇಲ್ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+