ನೋಡನೋಡುತ್ತಿದ್ದಂತೆ ಸುಟ್ಟು ಕರಕಲಾದ ಬಿಎಂಟಿಸಿ ಬಸ್

ಬೆಂಗಳೂರು, ನವೆಂಬರ್ 29:ನಿಂತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಶಾಂತಿನಗರ ಘಟಕದಲ್ಲಿ ನಡೆದಿದೆ.

ನಗರದ ಎಲೆಕ್ಟ್ರಾನಿಕ್‌ಸಿಟಿ ವಿಪ್ರೋ ಗೇಟ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಗುರುವಾರ ನಡೆದಿದೆ.

ಶಾಂತಿನಗರ ಘಟಕ (ಕೆ.ಎ. 57, ಎಫ್ 117) ಬಸ್ ಶಾಂತಿನಗರ-ಶಿವಾಜಿನಗರ-ಎಲೆಕ್ಟ್ರಾನಿಕ್‌ಸಿಟಿ(ಮಾರ್ಗ ಸಂಖ್ಯೆ ಜಿ 3/33) ಮಾರ್ಗದಲ್ಲಿ ಸಂಚರಿಸುತ್ತದೆ.

BMTC Bus Catches Fire Near Electronic City

ಚಾಲನಾ ಸಿಬ್ಬಂದಿ ನಿಗದಿತ ಟ್ರಿಪ್ ಮುಗಿಸಿ ನಿಲ್ದಾಣದಲ್ಲಿ ಬಸ್ ನಿಲುಗಡೆ ಮಾಡಿದ್ದರು. ಮಧ್ಯಾಹ್ನ 1.20ರ ಸುಮಾರಿಗೆ ದಟ್ಟ ಹೊಗೆ ಕಾಣಿಸಿಕೊಂಡಿದೆ. ಕ್ಷಣ ಮಾತ್ರದಲ್ಲೇ ಇಡೀ ಬೆಂಕಿ ಹೊತ್ತಿಕೊಂಡಿದೆ.

ಘಟನೆಯಲ್ಲಿ ಬಸ್‌ನ ಮುಂಭಾಗ ಬಹುತೇಕ ಬೆಂಕಿಯಿಂದ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಸ್ ಎಂಜಿನ್ ಭಾಗದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಆದರೆ ಬೆಂಕಿ ಜ್ವಾಲೆ ಹೆಚ್ಚಾಗಿ ಬಸ್ ಮುಂಭಾಗ ಪೂರ್ಣ ಆವರಿಸಿದೆ. ಅಷ್ಟರಲ್ಲಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಠಾಣೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಘಟನೆ ವೇಳೆ ಬಸ್‌ನಲ್ಲಿ ಚಾಲನಾ ಸಿಬ್ಬಂದಿ ಹಾಗೂ ಪ್ರಯಾಣಿಕರು ಇರಲಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+