ಶಾಲಾ ಬಸ್‌, ಬಿಎಂಟಿಸಿ ನಡುವೆ ಅಪಘಾತ: ಪ್ರಾಣಾಪಾಯದಿಂದ ಪಾರು

ಬೆಂಗಳೂರು, ಆಗಸ್ಟ್ 3: ಸ್ಕೂಲ್‌ ವಾಹನ ಹಾಗೂ ಬಿಎಂಟಿಸಿ ನಡುವೆ ಅಪಘಾತ ಉಂಟಾಗಿ ಎಲ್ಲರೂ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಯಲಹಂಕ ನ್ಯೂಟೌನ್‌ನಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ಪ್ರೆಸಿಡೆನ್ಸಿ ಶಾಲೆಗೆ ಸೇರಿದ ಬಸ್‌ 30ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕರೆದುಕೊಂಡು ಯಲಹಂಕದಿಂದ ಆವಲಹಳ್ಳಿ ಕಡೆಗೆ ತೆರಳುತ್ತಿತ್ತು, ಚಾಲಕನ ಅಜಾಗರೂಕತೆಯಿಂದಾಗಿ ಬಿಎಂಟಿಸಿಗೆ ಬಸ್‌ಗೆ ಡಿಕ್ಕಿ ಹೊಡೆದಿದೆ, ಪರಿಣಾಮ ಶಾಲಾ ವಾಹನ ಚಾಲಕನಿಗೆ ಮೂಳೆ ಮುರಿದಿದ್ದು, ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

BMTC bus collided with school bus in Yelahanka new town

ಕೂದಲೆಳೆ ಅಂತರದಲ್ಲಿ ಅನಾಹುತ ತಪ್ಪಿದೆ, ಅದೃಷ್ಟವಷಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಇದು ಯಲಹಂಕ ನ್ಯೂಟೌನ್‌ ಬಳಿ ಇರುವ ಶೇಷಾದ್ರಿ ಕಾಲೇಜು ಬಳಿ ನಡೆದಿದೆ. ಶಾಲಾ ಬಸ್‌ ಚಾಲಕ ಕುಡಿದು ಬಸ್‌ ಚಲಾಯಿಸುತ್ತಿದ್ದ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಯಲಹಂಕ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಚಾಲಕನನ್ನು ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+