ಬಿಎಂಟಿಸಿ ಬಸ್ ಡಿಕ್ಕಿ: ಇಬ್ಬರು ಕಾಲೇಜು ವಿದ್ಯಾರ್ಥಿಗಳ ಸಾವು
ಬೆಂಗಳೂರು, ಡಿಸೆಂಬರ್ 18: ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಲ್ಲಿ ಮಂಗಳವಾರ ನಡೆದಿದೆ.
ಯದುಕುಮಾರ್, ಚಂದ್ರಕಾಂತ ಮೃತರು, ಬೆಂಗಳೂರಿನ ಮೈಸೂರು ರಸ್ತೆಯ ಕಸ್ತೂರ ಬಾ ಕಾಲೇಜು ಬಳಿ ಘಟನೆ ಸಂಭವಿಸಿದೆ. ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ನಿಂತಿದ್ದ ವೇಳೆ ಈ ಅಪಘಾತ ನಡೆದಿದೆ.

ಇಬ್ಬರು ಬಿಬಿಎಂಪಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಬಿಬಿಎಂಪಿಯಿಂದ 10 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ.ಸದ್ಯ ವಿದ್ಯಾರ್ಥಿಗಳ ಮೃತದೇಹಗಳು ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರದಲ್ಲಿದೆ, ಉಪ ಮೇಯರ್ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಘೋಷಿಸಿದ್ದಾರೆ.
ಚಂದ್ರಕಾಂತ್ ಪ್ರಥಮ ಪಿಯು ವಾಣಿಜ್ಯ ವಿಷಯ ವ್ಯಾಸಂಗ ಮಾಡುತ್ತಿದ್ದ, ಯದುಕುಮಾರ್ ದ್ವಿತೀಯ ಪಿಯು ವಾಣಿಜ್ಯ ವ್ಯಾಸಂಗ ಮಾಡುತ್ತಿದ್ದ, ಆಸ್ಪತ್ರೆಯಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.












Click it and Unblock the Notifications