ಬಿಎಂಟಿಸಿ-ಬೈಕ್ ಡಿಕ್ಕಿ, ಬೆಂಕಿ, ಮೂವರು ಸ್ಥಳದಲ್ಲೇ ಸಾವು
ಬೆಂಗಳೂರು, ಫೆಬ್ರವರಿ 11: ಬಿಎಂಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬಿಎಂಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಏಕಾ ಏಕಿ ಬೈಕ್ ಹಾಗೂ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ, ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ.

ಬೆಂಗಳೂರಿನ ದಕ್ಷಿಣ ತಾಲೂಕಿನ ದೇವಗೆರೆ ಬಳಿ ಘಟನೆ ನಡೆದಿದೆ. ಘಟನಾ ಸ್ಥಳದಿಂದ ಚಾಲಕ ಪರಾರಿಯಾಗಿದ್ದಾನೆ.ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್‌ನ ಟ್ಯಾಂಕ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಚಾಲಕ ಅಲ್ಲಿಂದ ಪರಾರಿಯಾಗಿದ್ದಾರೆ. ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.












Click it and Unblock the Notifications