ಬೆಂಗಳೂರು: ರೈಲು ನಿಲ್ದಾಣದಿಂದ ಡಿ.16ರಿಂದ ಬಿಎಂಟಿಸಿ ಸಂಚಾರ

ಬೆಂಗಳೂರು, ಡಿಸೆಂಬರ್ 15 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್‌ಗಳು ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಪ್ರವೇಶಿಸಲಿವೆ. ರೈಲು ನಿಲ್ದಾಣದಿಂದ ಬಸ್ ಸೇವೆಯನ್ನು ಡಿಸೆಂಬರ್ 16ರಂದು ಆರಂಭಿಸಲಾಗುತ್ತದೆ.

ಪ್ರಯಾಣಿಕರ ಅವಶ್ಯಕತೆ ಮತ್ತು ಅನುಕೂಲಕ್ಕಾಗಿ ರೈಲ್ವೆ ನಿಲ್ದಾಣಗಿಂದ ಬಿಎಂಟಿಸಿ ಬಸ್ ಸೇವೆಯನ್ನು ಪ್ರಾರಂಭಿಸಲಾಗುತ್ತದೆ. ರೈಲು ನಿಲ್ದಾಣದ ಗೇಟ್ ನಂ 3ರಿಂದ ನಗರದ ವಿವಿಧ ಭಾಗಗಳಿಗೆ ಸಂಚಾರ ನಡೆಸುವ ಬಸ್ ಸೇವೆಗೆ ಸೋಮವಾರ ಚಾಲನೆ ಸಿಗಲಿದೆ.

BMTC Bus Service From Railway Station On December 16

ನೈಋತ್ಯ ರೈಲ್ವೆ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕೆಲವು ದಿನಗಳ ಹಿಂದೆ ಬಸ್ ಸೇವೆ ಆರಂಭಿಸುವ ಕುರಿತು ಮಾತುಕತೆ ನಡೆಸಿದ್ದವು. ಬಿಎಂಟಿಸಿಯ ಅಧಿಕಾರಿಗಳ ತಂಡ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಈ ಕುರಿತು ಪರಿಶೀಲನೆ ನಡೆಸಿದ್ದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ 3ನೇ ಪ್ರವೇಶ ದ್ವಾರ ಫ್ಲಾಟ್ ಫಾರಂ ನಂ 1ಕ್ಕೆ ನೇರವಾಗಿ ಸಂಪರ್ಕ ಕಲ್ಪಿಸುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ಇಲ್ಲಿ ರೈಲ್ವೆ ಟಿಕೆಟ್ ಕೌಂಟರ್ ತೆರೆಯಲಾಗಿದೆ. ಬಸ್ ಇಲ್ಲಿಗೆ ಆಗಮಿಸಿದರೆ ಜನರಿಗೆ ಅನುಕೂಲವಾಗಲಿದೆ.

ಸಂಚಾರ ದಟ್ಟಣೆ ಉಂಟಾಗುತ್ತದೆ, ಸ್ಥಳಾವಕಾಶದ ಕೊರತೆ ಇದೆ ಎಂಬ ಕಾರಣಕ್ಕೆ ರೈಲು ನಿಲ್ದಾಣದೊಳಗೆ ಬಿಎಂಟಿಸಿ ಬಸ್ ಸಂಚಾರಕ್ಕೆ ಅವಕಾಶ ನೀಡಿರಲಿಲ್ಲ. ಇದರಿಂದಾಗಿ ಜನರು ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದು ಅಲ್ಲಿಂದ ಸುರಂಗ ಮಾರ್ಗದ ಮೂಲಕ ರೈಲು ನಿಲ್ದಾಣ ತಲುಪಬೇಕಿತ್ತು.

ಬಿಎಂಟಿಸಿ ಬಸ್ ನಿಲ್ದಾಣದಿಂದ ವಯಸ್ಸಾದವರು, ಮಹಿಳೆಯರು ಲಗೇಜ್ ಹೊತ್ತು ಸುಮಾರು ದೂರ ನಡೆಯಬೇಕಿತ್ತು. ಬಸ್ ರೈಲ್ವೆ ನಿಲ್ದಾಣಕ್ಕೆ ಬರದ ಕಾರಣ ಆಟೋ ಚಾಲಕರು ಜನರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದರು.

ಮೆಜೆಸ್ಟಿಕ್‌ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ 1.7 ಕೋಟಿ ವೆಚ್ಚದಲ್ಲಿ 3ನೇ ಪ್ರವೇಶದ್ವಾರವನ್ನು ನಿರ್ಮಾಣ ಮಾಡಲಾಗಿದೆ. ಜೂನ್‌ನಲ್ಲಿ ಇದನ್ನು ಉದ್ಘಾಟಿಸಲಾಗಿದ್ದು, ಈಗ ಬಸ್ ಇಲ್ಲಿಂದಲೇ ಸಂಚಾರ ನಡೆಸಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+