Aero India 2025: ಏರ್ ಶೋಗೆ ಪಾರ್ಕಿಂಗ್ ಸ್ಥಳದಿಂದಲೇ ಬಿಎಂಟಿಸಿ ಬಸ್ ಸೇವೆ
ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಇದೇ ಫೆಬ್ರವರಿ 10ರಿಂದ 14ರವರೆಗೆ ಲೋಹದ ಹಕ್ಕಿಗಳ ಚಮತ್ಕಾರ ಏರೋ ಇಂಡಿಯಾ-2025 (ಏರ್ ಶೋ) ನಡೆಯಲಿದೆ. ಏರ್‌ಶೋ ವೀಕ್ಷಣೆಗೆ ಲಕ್ಷಾಂತರ ಸಂಖ್ಯೆಯಲ್ಲಿ ಜನ ಇಲ್ಲಿಗೆ ಆಗಮಿಸಲಿದ್ದು, ಪೊಲೀಸರು ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದಾರೆ. ಸಾರ್ವಜನಿಕರ ಅನುಕೂಲಕ್ಕೆ ತಕ್ಕಂತೆ ಪಾರ್ಕಿಂಗ್ ಸ್ಥಳದಿಂದಲೇ ಏರ್ ಶೋ ನಡೆಯುವ ಸ್ಥಳಕ್ಕೆ ಬಿಎಂಟಿಸಿ ಬಸ್ ಸೇವೆ ಕೂಡ ಒದಗಿಸುತ್ತಿದೆ.
ಏರ್‌ಶೋಗೆ ಬರುವವರಿಗೆ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡುವುದು ದೊಡ್ಡ ತಲೆನೋವಾಗಿದೆ. ಕಳೆದ ವರ್ಷಗಳಲ್ಲಿ ನಡೆದ ಏರ್ ಶೋ ವೇಳೆ ಯಲಹಂಕ ವಾಯುನೆಲೆಯ ಸಮೀಪದಲ್ಲೇ ಬಯಲು ಪ್ರದೇಶದಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಬೆಂಕಿ ಅವಘಡಗಳಲ್ಲಿ ಹಲವು ವಾಹನಗಳು ಬೆಂಕಿಗಾಹುತಿಯಾಗಿ ಏರ್‌ಶೋಗೆ ಕಪ್ಪುಚುಕ್ಕೆಯಾಗಿತ್ತು.

ಈ ಹಿನ್ನೆಲೆ ಅಲ್ಲಿ ಅಕ್ಕಪಕ್ಕದಲ್ಲಿ ಅಷ್ಟು ಪ್ರಮಾಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡುವುದು ಕಷ್ಟವಾಗಿರುವ ಕಾರಣ ಸಮೀಪದಲ್ಲೇ ಇರುವ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಆವರಣದಲ್ಲಿ ಈ ಬಾರಿ ಏರ್‌ಶೋಗೆ ಬರುವವರ ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಕಲ್ಪಿಸಲು ಸಂಚಾರ ಪೊಲೀಸರು ಪ್ಲ್ಯಾನ್ ಮಾಡಿದ್ದಾರೆ. ಈ ಹಿನ್ನೆಲೆ ಜಿಕೆವಿಕೆ ಆವರಣದಲ್ಲೇ ತಮ್ಮ ವಾಹನಗಳನ್ನು ನಿಲ್ಲಿಸುವಂತೆ ವೀಕ್ಷಕರಿಗೆ ಸೂಚನೆ ನೀಡಲಾಗಿದೆ.
ಜಿಕೆವಿಕೆ ಆವರಣದಿಂದ ಯಲಹಂಕ ವಾಯುನೆಲೆಗೆ ಸಾಕಷ್ಟು ದೂರು ಇರುವ ಕಾರಣ ಸಾರ್ವಜನಿಕರಿಗಾಗಿ ಮತ್ತೊಂದು ಸೇವೆ ಕಲ್ಪಿಸಲು ಪೊಲೀಸರು ಮುಂದಾಗಿದ್ದಾರೆ. ಏರ್ ಶೋಗೆ ಬರುವವರು ಜಿಕೆವಿಕೆ ಬಳಿ ವಾಹನ ನಿಲ್ಲಿಸಿದ ನಂತರ ಅಲ್ಲಿಂದ ಏರ್‌ಶೋ ನಡೆಯುವ ಜಾಗಕ್ಕೆ ಬಿಎಂಟಿಸಿ ಬಸ್ ಶಟಲ್ ಬಸ್ ವ್ಯವಸ್ಥೆ ಮಾಡಲಾಗಿದೆ.

ಹಾಗಾಗಿ ಗಾಡಿಗಳನ್ನು ಪಾರ್ಕ್ ಮಾಡಿ ಅಲ್ಲಿಂದಲೇ ಬಿಎಂಟಿಸಿ ಬಸ್ ಹತ್ತಿ ಏರ್ ಶೋ ನಡೆಯುವ ಸ್ಥಳ ತಲುಪಬಹುದಾಗಿದೆ. ಜಿಕೆವಿಕೆ ಆವರಣದಲ್ಲಿ ವಾಹನಗಳನ್ನು ಪಾರ್ಕ್ ಮಾಡಲು ಹಾಗೂ ಅಲ್ಲಿಂದ ಬಿಎಂಟಿಸಿ ಬಸ್‌ನಲ್ಲಿ ಸಂಚರಿಸಲು ಸಾರ್ವಜನಿಕರು ಏರ್‌ಶೋ ಟಿಕೆಟ್‌ಗಳನ್ನು ಬಳಸಬಹುದು ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.
ಇನ್ನು ಏರ್‌ಶೋ ಮೊದಲ ಮೂರು ದಿನಗಳಾದ ಫೆಬ್ರವರಿ 10ರಿಂದ 12ರವರೆಗೆ ಉದ್ಯಮಿಗಳು, ವೃತ್ತಿಪರರು ಹಾಗೂ ಹೂಡಿಕೆದಾರರಿಗಾಗಿ ಕಾಯ್ದಿರಿಸಲಾಗಿದೆ. ಬಳಿಕ ಕೊನೆಯ ಎರಡು ದಿನಗಳು ಫೆಬ್ರವರಿ 13 ಮತ್ತು 14ರಂದು ಸಾರ್ವಜನಿಕರಿಗೆ ಪ್ರವೇಶ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ಸಾರ್ವಜನಿಕ ಪ್ರವೇಶಕ್ಕೆ ಅವಕಾಶವಿದೆ.

ಏರ್ ಶೋ ವೀಕ್ಷಿಸಲು ಬರುವವರಿಗೆ ಜಿಕೆವಿಕೆ ಹಾಗೂ ಇನ್ನಿತರ ಸ್ಥಳಗಳಲ್ಲಿ ಪಾರ್ಕಿಂಗ್ ವ್ಯವಸ್ಥೆಯಿದೆ. ವೀಕ್ಷಕರು ಏರ್ ಶೋ ಸೆರೆಹಿಡಿಯಲು ಕ್ಯಾಮರಾಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಯಾವುದೇ ಕಾರಣಕ್ಕೂ ಡ್ರೋನ್‌ಗಳಿಗೆ ಇಲ್ಲಿ ಅವಕಾಶವಿಲ್ಲ ಎಂದು ಆಯೋಜಕರು ಖಡಕ್ ಆಗಿ ತಿಳಿಸಿದ್ದಾರೆ.
ಯಲಹಂಕ ವಾಯುನೆಲೆ ಏರ್‌ಪೋರ್ಟ್ ರಸ್ತೆಗೆ ಹೊಂದಿಕೊಂಡಿರುವುದರಿಂದ ಏರ್ ಶೋ ವೇಳೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸುವ ಚಿಂತನೆಯಲ್ಲಿದ್ದಾರೆ. ಕೆಲ ಗಂಟೆಗಳ ಕಾಲ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಬ್ರೇಕ್ ಹಾಕಲಿದ್ದು, ಪರ್ಯಾಯ ಮಾರ್ಗಗಳನ್ನು ಸಹ ಸೂಚಿಸಲಾಗುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications