Free BMTC travel for 2nd PU Students : ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಬಿಎಂಟಿಸಿ
ಮಾರ್ಚ್ 09ರಿಂದ 29ರವರೆಗೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಈ ಸಂಬಂಧ ಪರೀಕ್ಷಾ ದಿನದಂದು ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ.
ಬೆಂಗಳೂರು, ಮಾರ್ಚ್ 07: ಇದೇ ಮಾರ್ಚ್ 09ರಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಸಿಹಿ ಸುದ್ದಿಯೊಂದನ್ನು ನೀಡಿದೆ.
ಹೌದು, ಇದೇ ಮಾರ್ಚ್ 09ರಿಂದ 29ರವರೆಗೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಈ ಸಂಬಂಧ ಪರೀಕ್ಷಾ ದಿನದಂದು ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ.

ಈ ಹಿಂದೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಪರೀಕ್ಷಾ ದಿನದಂದು ರಾಜ್ಯದಲ್ಲಿನ ವಿದ್ಯಾರ್ಥಿಗಳು ವಾಸಸ್ಥಾನದಿಂದ ಪರೀಕ್ಷಾ ಕ್ಷೇಂದ್ರಗಳಿಗೆ ಹಾಗೂ ಮರಳಿ ವಾಸಸ್ಥಾನಗಳಿಗೆ ತೆರಳಲು ಉಚಿತವಾಗಿ ಬಸ್ ಸೇವೆ ಪಡೆಯಬಹುದು ಎಂದು ಪ್ರಕಟಣೆ ಹೊರಿಡಿಸಿತ್ತು. ಇದೀಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಳು ಬೆಂಗಳೂರಿನ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ನೀಡುವುದಾಗಿ ತಿಳಿಸಿದೆ.
ನಗರದಲ್ಲಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಆಯಾ ಪರೀಕ್ಷೆ ದಿನದಂದು ಬಿಎಂಟಿಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ವಿದ್ಯಾರ್ಥಿಗಳು ಬಸ್ ನಿರ್ವಾಹಕರಿಗೆ ಪರೀಕ್ಷಾ ಪ್ರವೇಶ ಪತ್ರ ತೋರಿಸುವುದು ಕಡ್ಡಾಯ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಪೈಕಿ ಕೆಲವರು ತಮ್ಮ ಕಾಲೇಜುನಲ್ಲಿನ ಕೇಂದ್ರದಲ್ಲೇ ಪರೀಕ್ಷೆ ಎದುರಿಸಿದರೆ, ಇನ್ನೂ ಹಲವರಿಗೆ ಬೇರೆ ಕಾಲೇಜಿನ ಕೇಂದ್ರಗಳಿಗೆ ತೆರಳಬೇಕಾಗುತ್ತದೆ. ಈ ವೇಳೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಿಎಂಟಿಸಿ ಉಚಿತ ಬಸ್ ಸೇವೆ ನಿರ್ಧಾರ ಪ್ರಕಟಿಸಿದೆ.

ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶ ಇವು
* ಪರೀಕ್ಷಾ ದಿನದಂದು ಉಚಿತ ಬಸ್ ಸೇವೆ ಪಡೆಯುವ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೋರಿಸುವುದು ಕಡ್ಡಾಯ.
* ದ್ವೀತಿಯ ಪಿಯುಸಿ ಪರೀಕ್ಷೆ ದಿನದಂದು ಪರೀಕ್ಷಾ ಕೇಂದ್ರಗಳ ಮಾರ್ಗದಲ್ಲಿ ಎಲ್ಲ ಬಸ್‌ಗಳು ಸುತ್ತುವಳಿ ಕಾರ್ಯಾಚರಣೆ.
* ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಮಾರ್ಗಗಳಲ್ಲ ಸಂಚಾರಕ್ಕೆ ಅಗತ್ಯ ಬಿದ್ದರೆ ಹೆಚ್ಚುವರಿ ಬಸ್ ಬಿಡಲಾಗುವುದು.
* ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು ಹಾಗೂ ಪೋಷಕರು ಕೋರಿಕೆಯ ಮೇಲೆ ನಿಲುಗಡೆಗೆ ಕ್ರಮ ವಹಿಸಲಾಗುವುದು ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.












Click it and Unblock the Notifications