ಐಟಿ ಉದ್ಯೋಗಿಗಳನ್ನು ಸೆಳೆಯಲು ಮುಂದಾದ ಬಿಎಂಟಿಸಿ
ಬೆಂಗಳೂರು, ನವೆಂಬರ್ 15 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಐಟಿ ಉದ್ಯೋಗಿಗಳನ್ನು ಸೆಳೆಯಲು ಮುಂದಾಗಿದೆ. ಇದಕ್ಕಾಗಿ ಪ್ರತ್ಯೇಕವಾದ ತಂಡವೊಂದನ್ನು ರಚನೆ ಮಾಡಿದೆ.
ನಗರದ ಹಲವು ಐಟಿ ಕಂಪನಿಗಳು ಖಾಸಗಿ ಟ್ರಾವೆಲ್ಸ್ಗಳ ಮೇಲೆ ಅವಲಂಬಿತವಾಗಿವೆ. ಇಂತಹ ಕಂಪನಿಗಳ ಜೊತೆ ಮಾತುಕತೆ ನಡೆಸಿ ಬಿಎಂಟಿಸಿ ಬಸ್ಸುಗಳನ್ನು ಬಳಸುವಂತೆ ಬಾಡಿಗೆಗೆ ಪಡೆಯುವಂತೆ ಮಾಡಲು ತಂಡ ರಚನೆ ಮಾಡಲಾಗಿದೆ.

ಕಂಪನಿಗಳ ಜೊತೆ ಸಂಪರ್ಕ, ಮಾತುಕತೆ ಹೀಗೆ ವಿವಿಧ ಕೆಲಸಗಳನ್ನು ನಿರ್ವಹಣೆ ಮಾಡಲು ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ. ಈಗಾಗಲೇ ತಂಡ ಹಲವು ಕಂಪನಿಗಳ ಜೊತೆ ಚರ್ಚೆ ನಡೆಸುತ್ತಿದ್ದು, ಉತ್ತಮ ಪ್ರತಿಕ್ರಿಯೆಯೂ ಸಿಕ್ಕಿದೆ.
ಸದ್ಯ, 15 ಕಂಪನಿಗಳು ಮತ್ತು ಕೆಲವು ಟೆಕ್ ಪಾರ್ಕ್ಗಳು ಬಿಎಂಟಿಸಿ ಬಸ್ಸುಗಳನ್ನು ಬಾಡಿಗೆಗೆ ಪಡೆದಿವೆ. 227 ಎಸಿ ಬಸ್ ಸೇರಿದಂತೆ 791 ಬಸ್ಸುಗಳನ್ನು ಬಿಎಂಟಿಸಿ ಈಗಾಗಲೇ ಬಾಡಿಗೆಗೆ ನೀಡಿದೆ.
ಬಿಎಂಟಿಸಿ ಅಧ್ಯಕ್ಷ ನಾಗರಾಜ್ ಯಾದವ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ನಾವು ಪ್ರತ್ಯೇಕ ತಂಡ ರಚನೆ ಮಾಡಿದ್ದೇವೆ. ಐಟಿ ಕಂಪನಿಗಳ ಜೊತೆ ಅವರು ಮಾತುಕತೆ ನಡೆಸಲಿದ್ದಾರೆ. ತಂಡಕ್ಕೆ ಅಗತ್ಯವಿರುವ ವಾಹನ ಸೇರಿದಂತೆ ಅಗತ್ಯ ಸೌಲಭ್ಯ ನೀಡಲಾಗಿದೆ' ಎಂದು ಹೇಳಿದ್ದಾರೆ.
-
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications