ಬೆಂಗಳೂರು ಸೆಂಟ್ರಲ್ ಸಿಲ್ಕ್ ಬೋರ್ಡ್ ಸೇರಿ ಈ ಪ್ರದೇಶಗಳ ಪ್ರಯಾಣಿಕರಿಗೆ ಬಿಎಂಟಿಸಿ ಗುಡ್‌ನ್ಯೂಸ್

ಬೆಂಗಳೂರು: ಬೆಂಗಳೂರಿನ ಸಾರಿಗೆ ಜೀವನಾಡಿಯಾಗಿ ಬಿಎಂಟಿಸಿ ಇದೆ. ಬಿಎಂಟಿಸಿಯು ದಶಕಗಳಿಂದ ಬೆಂಗಳೂರಿನ ಸಾರಿಗೆ ಜೀವನಾಡಿಯಾಗಿದೆ. ಉದ್ಯೋಗಸ್ಥರು, ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳ ನೆಚ್ಚಿನ ಸಾರಿಗೆ ಸೇವೆಯಾಗಿ ಬಿಎಂಟಿಸಿ ಉಳಿದಿದೆ. ಬಿಎಂಟಿಸಿ ಬಸ್‌ ಸೇವೆಯಲ್ಲಿ ಇತ್ತೀಚಿನ ದಿನಗಳಲ್ಲಿ ಮಹತ್ವದ ಬದಲಾವಣೆಗಳು ಆಗುತ್ತಿವೆ. ಅದಕ್ಕೆ ಈಗ ಹೊಸ ಬಸ್‌ಗಳ ಸೇರ್ಪಡೆ ಆಗಿದ್ದು, ಸಾರ್ವಜನಿಕರಿಗೆ ಅನುಕೂಲವಾಗಲಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕರಿಗೆ ಮತ್ತೊಂದು ಗುಡ್‌ನ್ಯೂಸ್ ಕೊಟ್ಟಿದೆ. ನೂತನ ಹವಾನಿಯಂತ್ರಿತ ವಜ್ರ ಮಾರ್ಗಸಂಖ್ಯೆ ವಿ-ಎಂಎಫ್-5 ಅನ್ನು ಪರಿಚಯಿಸುವುದಕ್ಕೆ ಮುಂದಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ.

BMTC good news for passengers of these areas including Bengaluru Central Silk Board

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಡಿಸೆಂಬರ್ 24 ರಿಂದ ಜಾರಿಗೆ ಬರುವಂತೆ ಸರ್ ಎಂ. ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣದಿಂದ ಇಂದಿರಾ ನಗರ ಪೋಲಿಸ್ ಸ್ಟೇಷನ್, ಮಿಲಿಟರಿ ಬ್ರಿಡ್ಜ್, ಕೋರಮಂಗಲ ವಾಟರ್ ಟ್ಯಾಂಕ್, ಮಡಿವಾಳ, ಮಾರ್ಗವಾಗಿ ಸೆಂಟ್ರಲ್ ಸಿಲ್ಕ್ ಬೋರ್ಡ್‌ಗೆ ನೂತನವಾಗಿ ಹವಾನಿಯಂತ್ರಿತ ಸಾರಿಗೆಗಳನ್ನು ಮಾರ್ಗಸಂಖ್ಯೆ - ವಿ-ಎಂಎಫ್-5 ರಲ್ಲಿ 04 ಕಾರ್ಯಾಚರಣೆಗೊಳಿಸಲಾಗುವುದು ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ತಿಳಿಸಿದೆ.

ಮಾರ್ಗಸಂಖ್ಯೆ ವಿ-ಎಂಎಫ್-5 ವೇಳಾಪಟ್ಟಿ (ನಿರ್ಗಮನ ಸಮಯ)

ಸರ್.ಎಂ ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣ

0515, 0550, 0700, 0745, 0915, 1010, 1040, 1110, 1205, 1235, 1310, 1340, 1530, 1600, 1645, 1715, 1805,1835, 1905, 1935, 2115, 2145

ಸೆಂಟ್ರಲ್ ಸಿಲ್ಕ್ ಬೋರ್ಡ್

0605, 0640, 0800, 0830, 0850, 0910, 1050, 1120, 1150, 1220, 1410, 1440, 1510, 1540, 1650, 1720, 1745, 1815, 2010, 2040, 2210, 2240

ಪ್ರಯಾಣಿಕರಿಗೆ ಅನುಕೂಲ: ಇನ್ನು ಇದೀಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕರಿಗೆ ಗುಡ್‌ನ್ಯೂಸ್ ಕೊಟ್ಟಿದೆ. ಇದರಿಂದ ಸೆಂಟ್ರಲ್ ಸಿಲ್ಕ್‌ ಬೋರ್ಡ್ ಹಾಗೂ ಸರ್‌ಎಂ ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣ ಹಾಗೂ ಸುತ್ತಮುತ್ತ ಹೋಗುವ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಈ ಭಾಗದಲ್ಲಿ ಸಮೂಹ ಸಾರಿಗೆಗಳಿಗೆ ಹೆಚ್ಚಿನ ಬೇಡಿಕೆ ಇದೆ. ಇದಕ್ಕೆ ಮುಖ್ಯ ಕಾರಣ ಈ ಭಾಗಗಲ್ಲಿ ದಿನಿ ನಿತ್ಯವೂ ಟ್ರಾಫಿಕ್ ಜಾಮ್ ಹೆಚ್ಚಾಗಿ ಇರುತ್ತದೆ. ಹೀಗಾಗಿ, ಈ ಭಾಗದಲ್ಲಿ ಜನ ಹೆಚ್ಚು ಸಮೂಹ ಸಾರಿಗೆಯನ್ನು ಬಳಸುತ್ತಿದ್ದಾರೆ. ಇದೀಗ ಈ ಮಾರ್ಗದಲ್ಲಿ ಹೊಸ ಬಸ್‌ಗಳ ಸೇವೆ ನೀಡುವ ಮೂಲಕ ಪ್ರಯಾಣಿಕರಿಗೆ ಗುಡ್‌ನ್ಯೂಸ್ ಕೊಟ್ಟಂತೆ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+