BMTC; ಅಧಿಕಾರಿ, ಸಿಬ್ಬಂದಿಗಳಿಗೆ ಗುಡ್ ನ್ಯೂಸ್, ವಿವರಗಳು
ಬೆಂಗಳೂರು, ಫೆಬ್ರವರಿ 18; ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಅಧಿಕಾರಿ ನೌಕರರಿಗೆ ಸಿಹಿಸುದ್ದಿ. ವಿಮಾ ಯೋಜನೆ ಪರಿಹಾರ ಮೊತ್ತವನ್ನು ಏರಿಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಕುರಿತು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ ಇಲಾಖಾ ಗುಂಪು ವಿಮಾ ಯೋಜನೆಯ ಪರಿಹಾರ ಮೊತ್ತವನ್ನು ರೂ. 3 ಲಕ್ಷಗಳಿಂದ ರೂ. 10 ಲಕ್ಷಗಳಿಗೆ ಪರಿಷ್ಕರಿಸುವ ಬಗ್ಗೆ ಮತ್ತು ವೈಯಕ್ತಿಕ ಅಪಘಾತದಿಂದ (ಕರ್ತವ್ಯ ನಿರತ ಮತ್ತು ಖಾಸಗಿ ಅಪಘಾತ ಸೇರಿದಂತೆ) ಮೃತಪಟ್ಟ ನೌಕರರಿಗೆ ಗುಂಪು ವಿಮಾ ಯೋಜನೆಯಡಿ ಪರಿಹಾರ ಮೊತ್ತ ರೂ. 50 ಲಕ್ಷಗಳನ್ನು ವಿತರಿಸುವ ಕುರಿತು ಎಂಬ ವಿಷಯ ಒಳಗೊಂಡಿದೆ.

ಆದೇಶದ ವಿವರಗಳು; ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಜನ ಸಾಮಾನ್ಯರಿಗೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ಮಹತ್ವದ ಜವಾಬ್ದಾರಿಯನ್ನು ಹೊಂದಿರುವ ಸಂಸ್ಥೆಯಾಗಿದೆ. ಸೇವೆಯಲ್ಲಿರುವಾಗ ಮೃತಪಟ್ಟಲ್ಲಿ, ಅವರ ಅವಲಂಬಿತರ ಜೀವನಕ್ಕೆ ಆರ್ಥಿಕವಾಗಿ ಸಹಾಯ ಮಾಡುವ ಹಿತದೃಷ್ಠಿಯಿಂದ ನೌಕರರ ಮಾಸಿಕ ವೇತನದಲ್ಲಿ ರೂ. 70ಗಳ ವಂತಿಗೆಯೊಂದಿಗೆ ನೌಕರರು ಮೃತಪಟ್ಟಲ್ಲಿ ಅವರ ಕುಟುಂಬದವರಿಗೆ ರೂ. 3 ಲಕ್ಷಗಳನ್ನು ಪಾವತಿಸುವ ಸಲುವಾಗಿ ಗುಂಪು ವಿಮಾ ಯೋಜನೆಯನ್ನು ದಿನಾಂಕ 01/01/2008ರಿಂದ ಜಾರಿಗೆ ತರಲಾಗಿರುತ್ತದೆ. ಪ್ರಸ್ತುತ ಈ ಯೋಜನೆಯು ಜಾರಿಯಲ್ಲಿರುತ್ತದೆ ಎಂದು ಹೇಳಿದೆ.
ಕರಾರಸಾಸಂಸ್ಥೆಯಲ್ಲಿ ದಿನಾಂಕ 20/11/2023 ರಂದು ಸುತ್ತೋಲೆ ಹೊರಡಿಸಿದ್ದು, ನೌಕರರಿಂದ ಮಾಸಿಕ ರೂ. 350ಗಳ ವಂತಿಗೆ ಮತ್ತು ನಿಗಮದ ವತಿಯಿಂದ ಪ್ರತಿ ಸದಸ್ಯ ನೌಕರರ ಪರವಾಗಿ ರೂ. 150 (ಒಟ್ಟು ರೂ. 500 ಗಳು) ವಂತಿಗೆಯೊಂದಿಗೆ ಸೇವೆಯಲ್ಲಿರುವಾಗ ಸಿಬ್ಬಂದಿಗಳು ಮರಣ ಹೊಂದಿದ್ದಲ್ಲ, ಅಂದರೆ ಅಪಘಾತ ಹೊರತುಪಡಿಸಿ ಇತರೆ ಯಾವುದೇ ಕಾರಣಗಳಿಂದ ಮೃತಪಟ್ಟ ಪ್ರಕರಣಗಳಲ್ಲಿ ರೂ. 10 ಲಕ್ಷಗಳ ಪರಿಹಾರ ಮೊತ್ತವನ್ನು ಹಾಗೂ ಅಪಘಾತದಿಂದ (ಕರ್ತವ್ಯ ನಿರತ ಮತ್ತು ಖಾಸಗಿ ಅಪಘಾತ ಸೇರಿದಂತೆ) ಸಿಬ್ಬಂದಿಗಳು ಮರಣ ಹೊಂದಿದ ಪ್ರಕರಣಗಳಲ್ಲಿ ಮೃತರ ನಾಮನಿರ್ದೇಶಿತರಿಗೆ ರೂ. 50 ಲಕ್ಷಗಳ ಪರಿಹಾರ ಮೊತ್ತವನ್ನು ನೀಡುವ ಯೋಜನೆಯನ್ನು ಜಾರಿಗೆ ತಂದಿರುತ್ತದೆ.
ಈ ಬಗ್ಗೆ ಕಾರ್ಮಿಕ ಸಂಘಟನೆಗಳಿಂದಲೂ ಸಹ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಬೆಂಮನಸಾಸಂಸ್ಥೆಯಲ್ಲಿಯು ಸಹ ಕರಾರಸಾನಿಗಮದಲ್ಲಿ ಜಾರಿಗೆ ತಂದಿರುವ ವಿಮಾ ಯೋಜನೆಯನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿರುತ್ತದೆ. ಅಪಘಾತದಿಂದ (ಕರ್ತವ್ಯ ನಿರತ ಮತ್ತು ಖಾಸಗಿ ಅಪಘಾತ ಸೇರಿದಂತೆ) ಸೇವಾವಧಿಯಲ್ಲಿ ಮೃತಪಟ್ಟ ಪ್ರಕರಣಗಳಲ್ಲಿ ಹೆಚ್ಚಿನ ಪರಿಹಾರ ನೀಡಲು ಮತ್ತು ಅಪಘಾತ ಹೊರತುಪಡಿಸಿ ಇನ್ನಿತರೆ ಕಾರಣಗಳಿಂದ ಮೃತಪಟ್ಟ ಕುಟುಂಬದವರಿಗೆ ಆರ್ಥಿಕ ಭದ್ರತೆ ನೀಡಿ ಅನುಕೂಲ ಮಾಡಿಕೊಡುವ ಸದುದ್ದೇಶದಿಂದ ನೌಕರರ ಇಲಾಖಾ ಗುಂಪು ವಿಮಾ ಯೋಜನೆಯನ್ನು ಪರಿಷ್ಕರಿಸಲಾಗಿದೆ.
* ಅಪಘಾತದಿಂದ (ಕರ್ತವ್ಯ ನಿರತ ಮತ್ತು ಖಾಸಗಿ ಅಪಘಾತ ಸೇರಿದಂತೆ) ಸಿಬ್ಬಂದಿಗಳು ಮರಣ ಹೊಂದಿದ ಪ್ರಕರಣಗಳಲ್ಲಿ ಮಾತ್ರ ಮೃತರ ನಾಮನಿರ್ದೇಶಿತರಿಗೆ ರೂ. 50 ಲಕ್ಷಗಳ ಪರಿಹಾರ ಮೊತ್ತವನ್ನು ನೀಡುವುದು.
* ಅಪಘಾತ ಹೊರತುಪಡಿಸಿ ಇತರೇ ಯಾವುದೇ ಕಾರಣಗಳಿಂದ ಮೃತಪಟ್ಟ ಪ್ರಕರಣಗಳಲ್ಲಿ ರೂ. 10 ಲಕ್ಷಗಳ ಪರಿಹಾರ ಮೊತ್ತವನ್ನು ನೀಡುವುದು.
* ನೌಕರರ ಮಾಸಿಕ ವಂತಿಗೆಯನ್ನು ಪ್ರಸ್ತುತ ರೂ. 70 ಗಳಿಂದ ರೂ. 350 ಗಳಿಗೆ ಹೆಚ್ಚಿಸಿ ಹಾಗೂ ನಿಗಮದ ವತಿಯಿಂದ ಪ್ರತಿ ಸದಸ್ಯ ನೌಕರರ ಪರವಾಗಿ ರೂ. 150 ಗಳನ್ನು ಪಾವತಿಸಲಾಗುವುದು.
* ಪರಿಷ್ಕೃತ ವಂತಿಗೆಯನ್ನು ಫೆಬ್ರವರಿ 2024ರ ಮಾಹೆಯ ವೇತನದಿಂದ ಕಡಿತಗೊಳಿಸುವುದು.
* ದಿನಾಂಕ 19/02/2024 ಮತ್ತು ನಂತರದಲ್ಲಿ ಅಪಘಾತದಿಂದ ಮರಣ ಹೊಂದಿದ ಪ್ರಕರಣಗಳಲ್ಲಿ ಮಾತ್ರ ರೂ. 50 ಲಕ್ಷಗಳ ಮತ್ತು ಅಪಘಾತ ಹೊರತುಪಡಿಸಿ ಇನ್ನಿತರೆ ಕಾರಣಗಳಿಂದ ಮೃತಪಟ್ಟ ಅವಲಂಬಿತರಿಗೆ ರೂ. 10 ಲಕ್ಷ ಪರಿಹಾರ ಮೊತ್ತಕ್ಕೆ ಅರ್ಹರಿರುತ್ತಾರೆ.
ಅಪಘಾತ ಮರಣ ಪ್ರಕರಣಗಳು ಮತ್ತು ಈ ಕ್ಲೈಮ್ ಸಂಬಂಧ ಅನುಸರಿಸಬೇಕಾದ ಕ್ರಮಗಳ ಕುರಿತು ನಿರ್ದೇಶನಗಳನ್ನು ನಂತರದಲ್ಲಿ ನೀಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications