BMTC: ವಿದ್ಯಾರ್ಥಿ ಬಸ್ ಪಾಸ್ ವಿತರಣೆ ಕುರಿತು ಬಿಎಂಸಿಟಿ ಮಹತ್ವದ ಮಾಹಿತಿ
BMTC: ಬೆಂಗಳೂರಿನ ಜೀವನಾಡಿ ಸಾರಿಗೆಗಳಲ್ಲಿ ಬಿಎಂಟಿಸಿ ಸಹ ಒಂದಾಗಿದೆ. ಪ್ರಯಾಣಿಕರಿಗೆ ಅನುಕೂಲಕ್ಕೆ ತಕ್ಕಂತೆ ಸೇವೆ ನೀಡುವುದಲ್ಲದೇ ಹೊಸ ಯೋಜನೆಗಳನ್ನು ನೀಡುತ್ತಲೇ ಇರುತ್ತದೆ. ಹಾಗೆಯೇ ಇದೀಗ ವಿದ್ಯಾರ್ಥಿಗಳಿಗೆ ಪಾಸ್ ಕುರಿತು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಹಾಗಾದ್ರೆ ಅದೇನು ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ವಿದ್ಯಾರ್ಥಿಗಳಿಗೆ ಬಿಎಂಟಿಸಿ ನೀಡುವ ಬಸ್ ಪಾಸ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮತ್ತೆ ಆರಂಭ ಆಗಲಿದೆ. ಈ ಬಾರಿ 2025-26ನೇ ಶೈಕ್ಷಣಿಕ ಸಾಲಿನ ಪಾಸ್‌ಗಾಗಿ ವಿದ್ಯಾರ್ಥಿಗಳು ಮೇ 26ರಿಂದ ಸೇವಾಸಿಂಧು (https://sevasindhu.karnataka.gov.in) ಪೋರ್ಟಲ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು ಎಂದು ಬಿಎಂಟಿಸಿ ತಿಳಿಸಿದೆ.

ಈ ಪಾಸ್‌ಗಳನ್ನು ಜೂನ್ 1ರಿಂದ ಪ್ರತಿದಿನ ಬೆಳಗ್ಗೆ 8 ಗಂಟೆಯಿಂದ ಸಂಜೆ 6:30ರ ವರೆಗೆ ವಿತರಣೆ ಮಾಡಲಾಗುವುದು. ಮೆಜೆಸ್ಟಿಕ್, ಕೆಂಗೇರಿ, ಶಾಂತಿನಗರ, ಎಲೆಕ್ಟ್ರಾನಿಕ್ಸ್ ಸಿಟಿ ಡಿಪೋ-19, ಹೊಸಕೋಟೆ ಮತ್ತು ಕೆಎಸ್‌ಆರ್‌ಟಿಸಿ ಆನೇಕಲ್ ಬಸ್ ನಿಲ್ದಾಣದಲ್ಲಿನ ಬಿಎಂಟಿಸಿ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಬಸ್ ಪಾಸ್‌ಗಳನ್ನು ಪಡೆಯಬುದು ಎಂದು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಬಿಎಂಟಿಸಿ ವೆಬ್‌ಸೈಟ್ ಅಥವಾ ಕಾಲ್ ಸೆಂಟರ್ (080-22483777) ಸಂಪರ್ಕಿಸಬಹುದು ಎಂದು ತಿಳಿಸಿದೆ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಡಿ ರಾಜ್ಯದ ವಿದ್ಯಾರ್ಥಿನಿಯರಿಗೆ ಸಾಮಾನ್ಯ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಇದೆ. ಈ ಯೋಜನೆಯ ಮೂಲಕ ಮಹಿಳಾ ವಿದ್ಯಾರ್ಥಿಗಳಿಗೆ ಭಾರೀ ನೆರವು ಒದಗಿಸುತ್ತಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಜೊತೆಗೆ ಪಿಎಂ ಇ-ಡ್ರೈವ್ ಯೋಜನೆ ಅಡಿಯಲ್ಲಿ ಬೆಂಗಳೂರಿಗೆ 4,500 ಇ-ಬಸ್‌ಗಳ ಅನುಮೋದನೆಯನ್ನು ಕೇಂದ್ರ ಸರ್ಕಾರ ನೀಡಿದೆ. ಮುಂದಿನ 2 ವರ್ಷಗಳಲ್ಲಿ ಬಿಎಂಟಿಸಿ ಬಸ್ ಸಂಖ್ಯೆ 10,000ಕ್ಕೆ ಏರಲಿದ್ದು, ಇದು ಬೆಂಗಳೂರಿನಲ್ಲಿ ಮಾಲಿನ್ಯ ಸಮಸ್ಯೆ ನಿಯಂತ್ರ ಆದಂತಾಗಲಿದೆ. ಈ ಯೋಜನೆ ಅಡಿಯಲ್ಲಿ ದೆಹಲಿ 2,800, ಹೈದರಾಬಾದ್ 2,000, ಅಹಮದಾಬಾದ್ 1,000 ಮತ್ತು ಸೂರತ್‌ಗೆ 600 ಇ-ಬಸ್‌ಗಳನ್ನೂ ಹಂಚಿಕೆ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರೇ ಮಾಹಿತಿ ನೀಡಿದ್ದಾರೆ.
ಒಟ್ಟಿನಲ್ಲಿ ಹೇಳುವುದಾದರೆ, ಬಿಎಂಟಿಸಿ ಬಸ್‌ಗಳು ಪ್ರತಿನಿತ್ಯ ಸಾವಿರಾರು ಪ್ರಯಾಣಿಕರನ್ನು ಒಂದೆಡೆಯಿಂದ ಮತ್ತೊಂದೆಡೆಗೆ ಕರೆದೊಯ್ತುತ್ತಲೇ ಇರುತ್ತವೆ. ಈ ಮೂಲಕ ನಗರದ ಜೀವನಾಡಿ ಅಂತಲೇ ಬಿಎಂಟಿಸಿ ಬಸ್‌ಗಳು ಪ್ರಖ್ಯಾತಿ ಪಡದುಕೊಂಡಿವೆ. ಇವುಗಳು ಇಲ್ಲದಿದ್ದರೆ ನಗರದಲ್ಲಿನ ಸಾಮನ್ಯ ಜನರು ಹಾಗೂ ಹಳ್ಳಿಗಳಿಂದ ಬಂರುವಂತಹ ಜನರು ಬೆಂಗಳೂರಿನಲ್ಲಿ ಒಂದೆಡೆಯಿಂದ ಮತ್ತೊಂದೆಡೆಗೆ ಹೋಗಬೇಕೆಂದ್ರೆ ತುಂಬಾ ಕಷ್ಟ ಪಡಬೇಕಾಗುತ್ತದೆ. ಆದರೆ, ಬಿಎಂಟಿಸಿ ಬಸ್‌ಗಳು ಎಲ್ಲಾ ರೀತಿಯ ಪ್ರಯಾಣಿಕರಿಗೂ ಉತ್ತಮ ಸೇವೆ ನೀಡುವುದಲ್ಲದೆ, ಸುರಕ್ಷತೆಯ ಜವಾಬ್ದಾರಿ ಹೊತ್ತುಕೊಂಡು ಸಂಚಾರ ಮಾಡುತ್ತಿವೆ.
ಪ್ರತಿನಿತ್ಯ ಏನಿಲ್ಲ ಅಂದರೂ ಹಳ್ಳಿಗಳಿಂದ ಬೆಂಗಳೂರಿಗೆ ಸಾವಿರಕ್ಕೂ ಅಧಿಕ ಮಂದಿ ಭೇಟಿ ನೀಡುತ್ತಲೇ ಇರುತ್ತಾರೆ. ಇವರಿಗೆಲ್ಲಾ ಮೊದಲಿಗೆ ನೆನಪಾಗುವುದೇ ಜಿವನಾಡಿ ಸಾರಿಗೆ ಬಿಎಂಟಿಸಿ. ಜೊತೆಗೆ ಕಾಲೇಜು ವಿದ್ಯಾರ್ಥಿಗಳಿಗೂ ಉತ್ತಮ ಸೇವೆ ನೀಡುತ್ತಾ ಬಂದಿದೆ.












Click it and Unblock the Notifications