BMTC: ಸಾಲು ರಜೆ ಹಿನ್ನೆಲೆ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಬಿಎಂಟಿಸಿ ಬಸ್ ಸೇವೆ
BMTC: ಇಂದಿನಿಂದ ಅಂದರೆ ಜನವರಿ 24ರಿಂದ ಸೋಮವಾರದವರೆಗೆ ಸಾಲು ರಜೆ ಹಿನ್ನೆಲೆ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ಪ್ರಯಾಣ ಮಾಡುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡೇ ಈಗಾಗಲೇ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್‌ಗಳನ್ನು ಬಿಟ್ಟಿದೆ. ಇದೀಗ ರಾಜ್ಯ ರಾಜಧಾನಿ ಜೀವನಾಡಿ ಸಾರಿಗೆ ಬಿಎಂಟಿಸಿಯು ವಿವಿಧ ಜಿಲ್ಲೆಗಳಿಗೆ ಬಸ್ ಸೇವೆಯನ್ನು ಕಲ್ಪಿಸಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಬಿಎಂಟಿಸಿ ರಾಜ್ಯ ರಾಜಧಾನಿ ಜೀವನಾಡಿ ಸಾರಿಗೆಗಳಲ್ಲಿ ಒಂದಾಗಿದೆ. ಇದು ಹಬ್ಬ-ಹರಿದಿನಗಳು, ಸಾಲು ರಜೆಗಳ ಸಮಯಸಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ರಾಜ್ಯದ ವಿವಿಧ ಜಿಲ್ಲೆಗಳಿಗೆ ಬಸ್ ಸೇವೆಯನ್ನು ವಿಸ್ತರಣೆ ಮಾಡುತ್ತಾ ಬಂದಿದೆ. ಹಾಗೆಯೇ ಇದೀಗ ಮೂರು ದಿನ ಸಾಲು ರಜೆ ಇರುವ ಕಾರಣ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಬಸ್ ಸೇವೆ ಒದಗಿಸಿದೆ.

ಹೆಚ್ಚುವರಿ ಬಿಎಂಟಿಸಿ ಬಸ್ ಸೇವೆ: ಸಾಲು ರಜೆಗಳು ಬಂದ್ರೆ ಸಾಕು ಜನರು ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳತ್ತ ಪ್ರಯಾಣ ಮಾಡುತ್ತಾರ. ಇನ್ನೂ ಕೆಲವರು ಪ್ರಯಾಣಕ್ಕೆ ಆಯೋಜನೆ ಮಾಡಿಕೊಂಡಿರುತ್ತಾರೆ. ಇದೀಗ ಜನವರಿ ಅಂತ್ಯದಲ್ಲಿ ಸತತ ಮೂರು ದಿನ ರಜೆ ಬಂದಿರುವ ಹಿನ್ನೆಲೆ ಬೆಂಗಳೂರಿನಿಂದ ಹೆಚ್ಚು ಜನ ತಮ್ಮ ಊರುಗಳತ್ತ ಪ್ರಯಾಣ ಮಾಡುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಕೆಎಸ್ಆರ್ಟಿಸಿ ಬಸ್ ಜೊತೆಗೆ ಹೆಚ್ಚುವರಿಯಾಗಿ ಬಿಎಂಟಿಸಿ ಬಸ್ಗಳ ಸೇವೆಯನ್ನು ಕಲ್ಪಿಸಲಾಗಿದೆ.
ವಿವಿಧ ಜಿಲ್ಲೆಗಳಿಗೆ ಬಿಎಂಟಿಸಿ ಬಸ್‌ಗಳ ಸಂಚಾರ: ಜನವರಿ 24 ನಾಲ್ಕನೇ ಶನಿವಾರ, ಜನವರಿ 25 ಭಾನುವಾರ ಹಾಗೂ ಜನವರಿ 26 ಸೋಮವಾರ ಗಣರಾಜ್ಯೋತ್ಸವ ಹಿನ್ನೆಲೆ ಈ ದಿನಗಳಂದು ಬ್ಯಾಂಕ್‌ಗಳು ಸೇರಿದಂತೆ ಹಲವಾರು ಕಂಪನಿಗಳಿಗೆ ರಜೆ ಇರಲಿದೆ. ಆದ್ದರಿಂದ, ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಿಗಳು, ಜನರು ಈ ವೇಳೆ ತಮ್ಮ ಊರುಗಳತ್ತ ಪ್ರಯಾಣ ಮಾಡಲು ಯೋಜನೆ ರೂಪಿಸಿರುತ್ತಾರೆ. ಈ ವೇಳೆ ಜನ ದಟ್ಟಣೆ ನಿಯಂತ್ರಣ ಮಾಡುವ ಉದ್ದೇಶದಿಂದ ವಿವಿಧ ಜಿಲ್ಲೆಗಳಿಗೆ ಬಿಎಂಟಿಸಿ ಬಸ್ ಸೇವೆಯನ್ನು ನೀಡಲಾಗಿದೆ
ಬಿಎಂಟಿಸಿಯಿಂದ ಹೆಚ್ಚುವರಿ ಬಸ್‌ಗಳ ನಿಯೋಜನೆಯನ್ನು ಶುಕ್ರವಾರದಿಂದ ಮಾಡಲಾಗಿದ್ದು, 260ಕ್ಕೂ ಹೆಚ್ಚು ಬಸ್‌ಗಳು ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ಸಂಚಾರ ನಡೆಸುತ್ತಿವೆ. ಇನ್ನೂ ಇಂದಿನಿಂದ ಅಂದರೆ, ಶನಿವಾರ 500ಕ್ಕೂ ಹೆಚ್ಚು ಬಿಎಂಟಿಸಿ ಬಸ್‌ಗಳ ಸಂಚಾರ ಮಾಡಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂರು ದಿನ ರಜೆ ಇರುವ ಹಿನ್ನೆಲೆ ಬೆಂಗಳೂರಿನಿಂದ ಇತರೆ ಜಿಲ್ಲಾ ಕೇಂದ್ರಗಳು ಹಾಗೂ ಊರುಗಳಿಗೆ ಹೋಗುವ ಪ್ರಯಾಣಿಕರಿಗೆ ತೊಂದರೆ ಆಗದಂತೆ ಕೆಎಸ್‌ಆರ್‌ಟಿಸಿ ಬಸ್‌ಗಳ ಜೊತೆ ಹೆಚ್ಚುವರಿಯಾಗಿ ಬಿಎಂಟಿಸಿ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಸಾಮಾನ್ಯವಾಗಿ ಬಿಎಂಟಿಸಿ ಬಸ್‌ಗಳನ್ನು ಬೆಂಗಳೂರು ಹಾಗೂ ಸುತ್ತಮುತ್ತಲಿನ ಕೆಲವು ಜಿಲ್ಲೆಗಳಿಗೆ ಓಡಿಸಲಾಗುತ್ತದೆ. ಆದ್ರೆ, ಹಬ್ಬ- ಹರಿ ದಿನಗಳು, ಸಾಲು ರಜೆ ದಿನಗಳ ವೇಳೆ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಬಾರದು ಎನ್ನುವ ನಿಟ್ಟಿನಲ್ಲಿ ವಿವಿಧ ಜಿಲ್ಲೆಗಳಿಗೂ ಈ ಬಸ್‌ಗಳ ಸೇವೆಯನ್ನು ವಿಸ್ತರಣೆ ಮಾಡುತ್ತಾ ಬರಲಾಗುತ್ತಿದೆ.












Click it and Unblock the Notifications