Women's Day: ಮಾ.8ರಂದು ಮಹಿಳಾ ಪ್ರಯಾಣಿಕರಿಗೆ ಬಿಎಂಟಿಸಿಯಲ್ಲಿ ಉಚಿತ ಪ್ರಯಾಣ!
ಮಹಿಳಾ ದಿನಾಚರಣೆ: ಮಾರ್ಚ್ 8ರಂದು ಮಹಿಳಾ ಪ್ರಯಾಣಿಕರಿಗೆ ಬಿಎಂಟಿಸಿಯಲ್ಲಿ ಉಚಿತ ಪ್ರಯಾಣ ಮಾಡಲು ಅವಕಾಶ ನೀಡಲಾಗಿದೆ.
ಬೆಂಗಳೂರು ಮಾರ್ಚ್ 3: ಮಾರ್ಚ್ 8ರಂದು ವಿಶ್ವ ಮಹಿಳಾ ದಿನಾಚರಣೆ ಇರುವುದರಿಂದ ಮಹಿಳಾ ಪ್ರಯಾಣಿಕರಿಗಾಗಿ ಈ ಒಂದು ದಿನ ಉಚಿತ ಪ್ರಯಾಣ ಯೋಜನೆಯನ್ನು ಬಿಎಂಟಿಸಿ ಮಾಡಿದೆ. ಇದಕ್ಕೆ ಸರ್ಕಾರ ಅನುಮೋದನೆ ನೀಡಿದರೆ ಮಾರ್ಚ್ 8ರಂದು ಮಹಿಳಾ ಪ್ರಯಾಣಿಕರು ಬಿಎಂಟಿಸಿ ಬಸ್‌ನಲ್ಲಿ ಯಾವುದೇ ಟಿಕೆಟ್ ಇಲ್ಲದೆ ಪ್ರಯಾಣ ಮಾಡಬಹುದಾಗಿದೆ.
ಮಾರ್ಚ್ 8ರಂದು ರಂದು ಮಾತ್ರ ಈ ವಿಶೇಷ ಸೇವೆ ಇರಲಿದ್ದು, ಮಹಿಳೆಯರು ಬೆಂಗಳೂರು ರೌಂಡ್ ಹೋಗಬಹುದು. ಬಿಎಂಟಿಸಿ ತನ್ನ ಮಹಿಳಾ ಪ್ರಯಾಣಿಕರನ್ನು ಆಕರ್ಷಿಸುವುದರ ಜೊತೆಗೆ ಬಸ್‌ನಲ್ಲಿ ಪ್ರಯಾಣಿಸುವಂತೆ ಉತ್ತೇಜಿಸಲು ಬಿಎಂಟಿಸಿ ಪ್ಲಾನ್ ಮಾಡಿದೆ. ಸಾಮಾನ್ಯ ಬಸ್‌ಗಳಲ್ಲಿ ಮಾತ್ರ ಈ ವಿಶೇಷ ಸೇವೆಯ ಲಾಭ ಪಡೆಯಬಹುದಾಗಿದೆ.

ಮಹಿಳೆಯರಿಗೆ ಸುರಕ್ಷಿತ ಮತ್ತು ಭದ್ರತೆಯುಳ್ಳ ಸಾರ್ವಜನಿಕ ಸಾರಿಗೆ ಒದಗಿಸುವುದು, ಪ್ರಸ್ತುತ ಸರ್ಕಾರದ ಮೇಲೆ ಜನಪ್ರಿಯತೆ ಹೆಚ್ಚಿಸುವುದು, ಸಾರ್ಚಜನಿಕ ಸಾರಿಗೆಯನ್ನು ಉತ್ತೇಜಿಸುವುದು, ಮಹಿಳೆಯರು ಸಾರ್ವಜನಿಕ ಸಾರಿಗೆ ಉಪಯೋಗಿಸುವುದರಿಂದ ನಗರದ ಸಂಚಾರ ದಟ್ಟಣೆ ಹಾಗೂ ವಾಯು ಮಾಲಿನ್ಯ ಕಡಿಮೆ ಮಾಡುವುದು ಇದರ ಉದ್ದೇಶವಾಗಿದೆ.
Motivating women to travel by buses, @BMTC_BENGALURU plans #FreeTravel to women on its buses during #InternationalWomensDay2023 Writes to #Transport Dept 4 permission as it cost
— Niranjan Kaggere (@nkaggere) March 3, 2023
₹ 8.17 Cr if all the 40.86 lakh women travel by bus @TOIBengaluru #Bengaluru #Bangalore #Women pic.twitter.com/AZ8x3Xkxqi
ಮಾರ್ಚ್ 8ರಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಎಲ್ಲಾ ಸೇವೆಗಳಲ್ಲಿ ಉಚಿತ ಸಾರಿಗೆ ಸೌಲಭ್ಯ ಕಲ್ಪಿಸಿದಲ್ಲಿ ಉಂಟಾಗುವ ವೆಚ್ಚದ ವಿವರಗಳನ್ನು ಬಿಎಂಟಿಸಿ ತಿಳಿಸಿದೆ. ಮಹಿಳೆಯರಿಗೆ ಕಲ್ಪಿಸುವ ಉಚಿತ ಪ್ರಯಾಣದಿಂದಾಗಿ ಸಂಸ್ಥೆಗೆ ಅಂದಾಜು 8.17 ಕೋಟಿ ವೆಚ್ಚ ಉಂಟಾಗಬಹುದೆಂದು ಅಂದಾಜಿಸಲಾಗಿದೆ.
ಇದರಿಂದ ಸಂಸ್ಥೆಗೆ ಆಗುವ ಆರ್ಥಿಕ ಹೊರೆಯನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಲಾಗುವುದು. ಈ ಪ್ರಸ್ತಾವನೆಯನ್ನು ಸರ್ಕಾರದ ಅನುಮೋದನೆಗಾಗಿ ಕೋರಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications