ಕೊರೊನಾ ಭೀತಿ; ಬಿಎಂಟಿಸಿಯಿಂದ ಸುತ್ತೋಲೆ ಪ್ರಕಟ
ಬೆಂಗಳೂರು, ಮಾರ್ಚ್ 03 : ಕೊರೊನಾ ವೈರಸ್ ಹಬ್ಬುವ ಭೀತಿಯಲ್ಲಿ ಬಿಎಂಟಿಸಿ ಸುತ್ತೋಲೆಯೊಂದನ್ನು ಹೊರಡಿಸಿದೆ. ಪ್ರತಿನಿತ್ಯ 3 ಲಕ್ಷಕ್ಕೂ ಅಧಿಕ ಜನರು ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣ ಮಾಡುತ್ತಾರೆ.
Recommended Video
ಬಿಎಂಟಿಸಿಯಲ್ಲಿ ಕಾರ್ಯ ನಿರ್ವಹಣೆ ಮಾಡುವ ಚಾಲಕರು ಮತ್ತು ನಿರ್ವಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ. ಮಂಗಳವಾರವೇ ಹಲವು ಚಾಲಕರು ಮಾಸ್ಕ್ ಧರಿಸಿ ಕೆಲಸ ಮಾಡುತ್ತಿದ್ದಾರೆ.
ಕೊರೊನಾ ವೈರಸ್ ಹಬ್ಬುವ ಭೀತಿ ಇರುವುದರಿಂದ ಬಸ್ ಸ್ವಚ್ಛತೆ ಬಗ್ಗೆ ಗಮನಹರಿಸಬೇಕು ಎಂದು ಚಾಲಕ ಮತ್ತು ನಿರ್ವಾಹಕರಿಗೆ ಸೂಚನೆ ಕೊಡಲಾಗಿದೆ. ಬಸ್‌ನ ಒಳ ಮತ್ತು ಹೊರ ಭಾಗ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.

ಬಸ್‌ಗಳ ಬಾಗಿಲು, ಸೀಟುಗಳು, ಹ್ಯಾಂಡಲ್‌ಗಳನ್ನು ಸ್ವಚ್ಛಗೊಳಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚನೆ ಕೊಡಲಾಗಿದೆ. ಬೆಂಗಳೂರಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿಗೆ ಕೊರೊನಾ ವೈರಸ್ ತಗುಲಿರುವುದು ಖಚಿತವಾದ ಹಿನ್ನಲೆಯಲ್ಲಿ ಹಲವಾರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಕರ್ನಾಟಕದ ಆರೋಗ್ಯ ಸಚಿವ ಬಿ. ಶ್ರೀರಾಮುಲು ಮಂಗಳವಾರ ಅಧಿಕಾರಿಗಳ ಸಭೆ ನಡೆಸಿದರು. ಕೊರೊನಾ ಹರಡದಂತೆ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದರು. ರಾಜ್ಯದ ಜನರು ಆತಂಕಪಡುವ ಅಗತ್ಯವಿಲ್ಲ ಎಂದರು.












Click it and Unblock the Notifications